Friday, February 02, 2007

ಕೋಟಿಪುರ




ನಮ್ಮೂರು ಆನವಟ್ಟಿಯಿಂದ ಉತ್ತರಕ್ಕೆ ಹಾನಗಲ್ ಮಾರ್ಗದಲ್ಲಿ ಎರಡು ಕಿಲೋ ಮೀಟರ್ ದೂರದಲ್ಲಿ ಕೋಟಿಪುರವೆಂಬ ಹಳ್ಳಿಯಿದೆ, ಅಲ್ಲಿ ಸುಂದರವಾದ ಶಿವದೇವಾಲಯವೊಂದಿದೆ. ಇದು ಚಾಲುಕ್ಯರ ಕಾಲದ್ದು (೧೦ ನೇ ಶತಮಾನ). ಕೈಟಭೇಶ್ವರ ಎನ್ನುವುದು ಇಲ್ಲಿ ಶಿವನ ಹೆಸರು. ಹಿಂದೆ ಮಧು-ಕೈಟಭರೆಂಬ ಇಬ್ಬರು ರಾಕ್ಷಸ ಸಹೋದರರನ್ನು ಸಂಹಾರ ಮಾಡಿದ್ದರಿಂದ ಈ ಹೆಸರು ಬಂದಿತಂತೆ. ಬನವಾಸಿಯಲ್ಲಿ ಮಧುಕೇಶ್ವರ ದೇವಾಲಯವಿದೆ, ನೀವು ಬನವಾಸಿಗೆ ಹೋದರೆ ಅಲ್ಲಿಯ ಗೈಡ್‌ಗಳು ಇದರ ಬಗ್ಗೆ ಇನ್ನೂ ಚೆನ್ನಾಗಿ ವಿವರಿಸುತ್ತಾರೆ.

ದೂರದಿಂದ ಬಂದ ನನ್ನ ಸ್ನೇಹಿತರನ್ನು ಈ ದೇವಸ್ಥಾನಕ್ಕೆ ಕರೆದುಕೊಂಡು ಹೋದಾಗಲೆಲ್ಲ ಅಲ್ಲಿಯ ಕೆತ್ತನೆಗಳನ್ನು, ಕಂಭಗಳ ನುಣುಪನ್ನು ನೋಡಿ ಬೆರಗಾಗಿ ಹೋಗುತ್ತಿದ್ದರು. ಈ ದೇವಸ್ಥಾನವನ್ನು ಕಾಪಾಡಿಕೊಂಡು ಹೋಗುವಲ್ಲಿ ಸರ್ಕಾರದ ಹಾಗೂ ಸ್ಥಳೀಯರ ಪ್ರಯತ್ನಗಳು ಶ್ಲಾಘನೀಯ. ದೇವಸ್ಥಾನದ ಒಳಗೆ ಹಾಗೂ ಹೊರಗೆ ತುಂಬಾ ತುಂಬಾ ಚೆನ್ನಾಗಿ ಕಾಪಾಡಿಕೊಂಡು ಬಂದಿದ್ದಾರೆ. ಹಿಂದೆಲ್ಲಾ ಅಲ್ಲಲ್ಲಿ ಜೇಡರಬಲೆ ಕಾಣೀಸೋದು, ಈಗ ಹಾಗೇನೂ ಇರಲಿಲ್ಲ, ಸುತ್ತಲೂ ಹೂ ತೋಟವನ್ನು ಬೆಳೆಸಿ ನೋಡಲು ಬಹಳ ಚೆನ್ನಾಗಿ ಮಾಡಿದ್ದಾರೆ.

ನೀವು ಬನವಾಸಿಗೆ ಹೋದರೆ ಅಲ್ಲಿಂದ ಕೇವಲ ೨೦ ಕಿಮೀ ದೂರದಲ್ಲಿರುವ ಕೋಟಿಪುರಕ್ಕೂ ಹೋಗಿ ಬನ್ನಿ!

2 comments:

Anonymous said...

ಚಿತ್ರಗಳು ತುಂಬಾ ಚೆನ್ನಾಗಿವೆ. ದೇವಸ್ಥಾನವನ್ನು ಚೆನ್ನಾಗಿ ಇಟ್ಟಿದಾರೆ ಎಂಬ ವಿಷಯ ತಿಳಿದು ಸಂತೋಷವಾಯಿತು.

Satish said...

sritri ಅವರೇ,
ಧನ್ಯವಾದ, ದೇವಸ್ಥಾನವನ್ನು ಅಷ್ಟೊಂದು ಚೆನ್ನಾಗಿ ಇಟ್ಟಿರುವುದನ್ನು ನೋಡಿ ನನಗೂ ಆಶ್ಚರ್ಯವಾಯಿತು.