Tuesday, November 13, 2007

ಸಹೋದ್ಯೋಗಿಯೊಬ್ಬನಿಗೆ ತಗುಲಿಕೊಂಡ ಕ್ಯಾನ್ಸರ್

ಇವತ್ತು ನಮ್ಮ ಆಫೀಸಿನಲ್ಲಿ ನನ್ನ ಸಹೋದ್ಯೋಗಿಯೊಬ್ಬನಿಗೆ ಅವನ ಡಾಕ್ಟರ್ ಚರ್ಮದ ಕ್ಯಾನ್ಸರ್ ಇರುವುದಾಗಿ ಡಯಾಗ್ನೋಸ್ ಮಾಡಿದ್ದಾಗಿ ತಿಳಿಸಿದ, ನನಗೆ ಒಂದು ಕ್ಷಣ ಅವನ ಮಾತುಗಳನ್ನು ನಂಬಲು ಕಷ್ಟವಾಯಿತು. ಎಷ್ಟೊಂದು ಸಂತೋಷವಾಗಿ ಆಡಿಕೊಂಡು ಹಾಡಿಕೊಂಡು ಇದ್ದವನಿಗೆ ಚರ್ಮದ ಕ್ಯಾನ್ಸರ್ ಈಗಾಗಲೇ ಉಲ್ಬಣಗೊಂಡಿರುವುದರಿಂದ ಅರ್ಜೆಂಟಾಗಿ ಸರ್ಜರಿ ಮಾಡಿಸಬೇಕು ಹಾಗೂ ಅನೇಕ ಕ್ಯಾನ್ಸರ್ ಸಂಬಂಧಿ ಟ್ರೀಟ್‌ಮೆಂಟುಗಳನ್ನು ಕೊಡಿಸಿಕೊಳ್ಳಬೇಕು ಎಂದು ಅವನ ವೈದ್ಯರು ತಾಕೀತು ಮಾಡಿದ್ದಾರಂತೆ. ನಾವು ಕುಶಾಲಕ್ಕೆ ಮಾತನಾಡುತ್ತಿದ್ದಾಗಲೇ ಅವನು ತನ್ನ ಖಾಯಿಲೆಯ ಬಗ್ಗೆ ಸಹಜವಾಗಿ ಪ್ರಸ್ತಾಪ ಮಾಡಿದ್ದು ನನಗೆ ಆಶ್ಚರ್ಯ ತರಿಸಿದರೂ ಅವನ ಮನದಾಳದಲ್ಲಿನ ದುಗುಡ ಸ್ವಲ್ಪ ಇಣುಕಿ ನೋಡಿದವರಿಗೆ ತಿಳಿಯುವಂತಿತ್ತು.

ಮಾನವನ ವೈದ್ಯಕೀಯ ಜ್ಞಾನ ಬೆಳೆದಂತೆ ತಿಳುವಳಿಕೆ ಬೆಳೆದಂತೆ ಅವನಿಗೆ ತಗಲುವ ರೋಗಗಳೂ ಅವುಗಳ ಕಾಂಪ್ಲಿಕೇಷನ್ನುಗಳೂ ಹೆಚ್ಚೆನಿಸೋದಿಲ್ಲವೇ? ನನಗೆ ಮೊದಲೆಲ್ಲ ನೆಲಗಡಲೆಯನ್ನು ತಿಂದೂ ಅಲರ್ಜಿಯಾಗುತ್ತದೆ ಅಮೇರಿಕದಲ್ಲಿ ಕೆಲವರಿಗೆ ಎಂದು ಕೇಳಿ ಬಹಳಷ್ಟು ಆಶ್ಚರ್ಯವಾಗುತ್ತಿತ್ತು, ಆದರೆ ಇತ್ತೀಚೆಗೆ ಅಂತಹ ಅಲರ್ಜಿ ಪೀಡಿತ ವ್ಯಕ್ತಿಯೊಬ್ಬರನ್ನು ನೋಡಿದಾಗ ನನ್ನ ನಂಬಿಕೆಯನ್ನು ಬದಲಿಸಿಕೊಳ್ಳಬೇಕಾಗಿ ಬಂತು. ನಮ್ಮ ಸೀನಿಯರ್ ಮೆಂಬರ್ ಒಬ್ಬರಿಗೆ ಅವರ ರಿಟೈರ್‌ಮೆಂಟು ಎಂದು ನಾವೆಲ್ಲರೂ ಕೇಕ್ ತಂದಿರಿಸಿದರೆ ಅವರು ನನಗೆ ಗೋಧಿ ಅಲರ್ಜಿ ಇದೆ ಎಂದಾಗ ನಂಬಲು ಕಷ್ಟವಾಯಿತು. ವೈರಾಣುಗಳೂ, ಬ್ಯಾಕ್ಟೀರಿಯಾಗಳು ನಮ್ಮ ವಿರುದ್ಧ ಸಮರ ಸಾರಿರುವಂತಿದೆ. ನಾವು ಮುಂದುವರೆದಂತೆಲ್ಲ ಅವುಗಳ ತಳಿ ಅಷ್ಟೇ ಪ್ರಭಲವಾಗುತ್ತಿದೆ. ಈಗೆಲ್ಲ ಮೊದಲಿನ ಹಾಗೆ ಕ್ಷಯ, ಸಿಡುಬಿನ ಪ್ಯಾಂಡೆಮಿಕ್ ಸನ್ನಿವೇಶ ಇಲ್ಲದಿರಬಹುದು, ಪ್ರಪಂಚದಾದ್ಯಂತ ಮಿಲಿಯನ್ನ್ ಗಟ್ಟಲೆ ಜನರನ್ನು ಆಕ್ರಮಿಸಿಕೊಂಡಿರುವ ಏಯ್ಡ್ಸ್ ರೋಗವೊಂದೇ ಸಾಕು ಕೆಲವೊಮ್ಮೆ ಮಾನವ ಸಂತಾನವನ್ನು ನಿರ್ಮೂಲನ ಮಾಡಲು ಎಂದು ಒಮ್ಮೆ ಭಯವಾಗುತ್ತದೆ.

ಕ್ಯಾನ್ಸರ್ ಬರುವುದರ ಹಿಂದೆ ನೂರಾರು ಕಾರಣಗಳಿದ್ದಿರಬಹುದು. ಒಬ್ಬ ವ್ಯಕ್ತಿ ನಲವತ್ತು ವರ್ಷ ನಿರಂತರವಾಗಿ ಹೊಗೆಬತ್ತಿ ಸೇದಿ ಆತನಿಗೆ ಶ್ವಾಸಕೋಶದ ಕ್ಯಾನ್ಸರ್ ಬಂದರೆ ಅದನ್ನು ಕೇಳಿ ಆಶ್ಚರ್ಯವಾಗುವುದಕ್ಕಿಂತ ಹೆಚ್ಚು ಯಾವುದೇ ದುಶ್ಚಟ ಉಳ್ಳವರೂ, ಮಾಂಸಾಹಾರವನ್ನೂ ಮಾಡದವರೂ ಕ್ಯಾನ್ಸರ್‌ಗೆ ತುತ್ತಾಗುವುದನ್ನು ಕೇಳಿ ಬಹಳಷ್ಟು ಬೇಸರವಾಗುತ್ತದೆ. ಅವರವರ ಕರ್ಮ ಫಲ ಎಂದು ಸುಲಭವಾಗಿ ತಳ್ಳಿ ಹಾಕುವುದಕ್ಕಿಂತ ಮೊದಲು ಯಾರಿಗೂ ಹೇಳಿ ಯಾರನ್ನೂ ಕೇಳಿ ಬರದ ಈ ರೋಗಗಳಿಂದ ಮುಕ್ತಿಯನ್ನು ಪಡೆಯುವುದಾದರೂ ಎಂದು? ಚರ್ಮದ ಕ್ಯಾನ್ಸರ್ ಬಂದೀತೆಂದು ಮುಖ, ಮೈ, ಬೆನ್ನುಗಳನ್ನು ಪ್ರತೀ ದಿನವೂ ಪರೀಕ್ಷಿಸಿಕೊಳ್ಳಲಾಗುತ್ತದೆಯೇ? ಅಲ್ಲಲ್ಲಿ ಹುಟ್ಟಿ ಸಾಯುವ ಮಚ್ಚೆಗಳಿಗೆಲ್ಲ ಚರ್ಮ ರೋಗ ತಜ್ಞರ ಬಳಿ ಹೋಗಲಾಗುತ್ತದೆಯೇ? ಬಿಸಿಲಿಗೆ ಹೋದಾಗಲೆಲ್ಲ ಮುಖಕ್ಕೆ, ಮೈ ಕೈಗೆ ಸನ್‌ಸ್ಕ್ರೀನ್ ಲೋಷನ್ ಮೆತ್ತಿಕೊಳ್ಳಲಾಗುತ್ತದೆಯೇ? ಹಾಗಿದ್ದ ಮೇಲೆ ಎಲ್ಲೋ ಒಂದು ದಿನ ಕೇರ್ ಫ್ರೀ ಆಗಿ ಬದುಕುವವರು ತಮ್ಮ ಜೀವವನ್ನೇ ಆ ಒಂದು ಕೇರ್ ಫ್ರೀ ಕ್ಷಣಕ್ಕೆ ಬಲಿಕೊಡಬೇಕಾಗಿ ಬಂದಾಗ ಬದುಕು ಬಹಳ ದುಬಾರಿ ಅನ್ನಿಸೊದಿಲ್ಲವೇ? ಮಕ್ಕಳನ್ನು ಕಳೆದುಕೊಂಡ ತಂದೆ-ತಾಯಿ, ಕುಟುಂದ ಹಿರಿಯರನ್ನು ಕಳೆದುಕೊಂಡ ಸದಸ್ಯರು, ಅನಾಥರಾಗುವ ಮಕ್ಕಳು ಇವುಗಳಿಗೆಲ್ಲ ಕ್ಯಾನ್ಸರ್ ಎನ್ನುವ ಮಾರಕ ರೋಗ ಯಾವ ರೀತಿಯ ಪರಿಣಾಮ ಬೀರಬಲ್ಲದು ಎನ್ನಿಸಿ ಒಮ್ಮೆ ಮರುಕ ಹುಟ್ಟಿತು.

ವೈದ್ಯಕೀಯ ಪರಿಭಾಷೆಯಲ್ಲಿ ಆಯಾ ಹಂತದ ಕ್ಯಾನ್ಸರ್‌ಗಳನ್ನು ನೋಡಿ - ’ನೀನು ಸಾಯುವುದು ಗ್ಯಾರಂಟಿ’ ಎಂದು ತೀರ್ಪು ಕೊಟ್ಟಾಗ ಆ ವ್ಯಕ್ತಿಯ ಮನಸ್ಥಿತಿ ಹೇಗಿರಬಹುದು? ಅವನನ್ನು ನಂಬಿಕೊಂಡ, ಆಧರಿಸಿಕೊಂಡ ಕುಟುಂಬದವರ ಮೇಲಿನ ಪರಿಣಾಮ ಹೇಗಿರಬಹುದು? ಯಾರದೋ ತಪ್ಪಿಗೆ ಯಾರಿಗೆ ಶಿಕ್ಷೆ ಎನ್ನುವಂತೆ ಆ ವ್ಯಕ್ತಿ ಈ ರೋಗ ತನಗೇಕೆ ತಗಲಿಕೊಂಡಿತೋ ಎಂದು ಮನಪೂರ್ತಿ ಪರಿಪರಿ ಆಲೋಚಿಸುವ ರೀತಿ ಹೇಗಿರಬಹುದು? ಇವುಗಳನ್ನೆಲ್ಲ ಯೋಚಿಸಿಕೊಂಡಷ್ಟೂ ನನ್ನ ಮೇಲಿನ ನಿರಾಶೆಯ ಮೋಡ ದಟ್ಟವಾಗತೊಡಗಿತೇ ವಿನಾ ಎಲ್ಲೂ ಬೆಳಕಿನ ಕಿರಣಗಳು ಕಾಣಿಸಲಿಲ್ಲ.

ನನ್ನ ಸಹೋದ್ಯೋಗಿ, ನಮ್ಮಿಂದ ಸಹಾನುಭೂತಿ ಬಯಸದೇ ಇರಬಹುದು, ನಮ್ಮಿಂದ ಯಾವ ಸಹಾಯವನ್ನೂ ಬಯಸದೇ ಇರಬಹುದು. ಆದರೆ ಇಷ್ಟು ವರ್ಷಗಳ ನಮ್ಮೊಡನಿದ್ದು, ಅಕಸ್ಮಾತ್ ಈ ರೋಗಕ್ಕೆ ತುತ್ತಾಗಿ ಒಂದು ಇಲ್ಲವೆಂದಾಗುತ್ತಾನೆ ಎಂದು ಯೋಚಿಸಿಕೊಂಡಾಗ ಒಂದು ಕಡೆ ಜೀವನ ಕ್ಷಣಿಕ ಎನ್ನುವ ವೈರಾಗ್ಯವೂ ಮತ್ತೊಂದು ಕಡೆ ಜೀವನ ಎಷ್ಟೊಂದು ಅಮೂಲ್ಯ ಎನ್ನುವ ಶೋಧನೆಯೂ ಹೊರಕ್ಕೆ ಬಂದವು. ನನ್ನ ಸಹೋದ್ಯೋಗಿಯೇನೋ ದಿನವಿಡೀ ನಾನಾ ರೀತಿಯಲ್ಲಿ ಕ್ಯಾನ್ಸರ್ ಅನ್ನು ನೆನೆಸಿಕೊಂಡು ನಗುತ್ತಲೇ ಇದ್ದ, ಮುಂದೊಂದು ದಿನ ಆತನಿಗೆ ಅಂಟಿದ ರೋಗದಿಂದ ಅವನಿಗೆ ಮುಕ್ತಿ ಸಿಕ್ಕೀತು ಎನ್ನೋದು ನನ್ನ ಆಶಾಭಾವನೆ ಅಷ್ಟೇ.

ಕ್ಯಾನ್ಸರ್‌ಗೆ ಸಿಕ್ಕಿ ಸಾಯುವವರಿಗಿಂತ ಮೋಟಾರು ವಾಹನಗಳ ಅಫಘಾತದಲ್ಲಿ ಸಿಕ್ಕಿ ಸಾಯುವವರು ಹೆಚ್ಚಿರಬಹುದು, ಆದರೆ ಅವೆರಡೂ ಭಿನ್ನ ನೆಲೆಗಳೇ. ಸಂಖ್ಯಾ ಆಧಾರದಲ್ಲಿ ಇಂತದೊಂದು ರೋಗ ಹೆಚ್ಚು ಅಥವಾ ಕಡಿಮೆ ಎಂದು ಹೇಳುವುದು ಸುಲಭವಾಗಿರಬಹುದು. ತಮ್ಮಷ್ಟಕ್ಕೆ ದ್ವಿಗುಣ, ತ್ರಿಗುಣಗೊಂಡು ಬೆಳೆಯುವ ಜೀವ ಕೋಶಗಳು ಒಂದು ದಿನ ಏಡಿಗಂಥಿಗಳಾಗಿ ಎಲ್ಲೆಡೆ ಹರಡಿ ಮನುಷ್ಯನ ಬದುಕನ್ನು ಧಾರುಣಗೊಳಿಸುವಂತಹ ಕೆಟ್ಟ ಖಾಯಿಲೆ ಇನ್ನೊಂದಿರಲಾರದು. ಅಂತಹ ರೋಗಗಳಿಗೆ ಏನೇನೋ ಔಷಧಿ ಮತ್ತೊಂದು ಮಾಡಿ ಸಾಯುವವರೆಗೆ ಅನುಭವಿಸುವ ಬದಲು ಇದ್ದಕ್ಕಿದ್ದ ಹಾಗೆ ಹಾರ್ಟ್ ಆಟ್ಯಾಕ್ ಆಗಿ ಸಾಯುವುದೇ ಮೇಲೆಂದು ಅನ್ನಿಸಿದ್ದಂತೂ ನಿಜ!

5 comments:

Harish - ಹರೀಶ said...

ಆ ನಿಮ್ಮ ಗೆಳೆಯನ ರೋಗ ಇನ್ನೂ ಮೊಳಕೆಯಲ್ಲಿದ್ದು ಆತ ಗುಣ ಹೊಂದುವಂತಾಗಲಿ ಎಂದು ಆಶಿಸುತ್ತೇನೆ.

suptadeepti said...

ನಿಮ್ಮ ಸಹೋದ್ಯೋಗಿಯ ಕ್ಯಾನ್ಸರ್ ಮೊದಲ ಹಂತದಲ್ಲೇ ಇರುವುದಾದರೆ ಅದರಿಂದ ಪೂರ್ತಿ ಗುಣಮುಖರಾಗುವ ಸಾಧ್ಯತೆಗಳೇ ಹೆಚ್ಚು.

ಗಾಬರಿಯಾಗಬೇಡಿ. ಅವರ ಮುಂದೆ ನಿಮ್ಮ ಗಾಬರಿ ತೋರಿಸಿಕೊಳ್ಳಬೇಡಿ. ನಿಮ್ಮಿಂದಾದಷ್ಟು ಅವರನ್ನು ಸಂತೋಷದಲ್ಲಿಡಿ, ತಮಾಷೆ ಮಾಡಿ, ನಗಿಸಿ. ನಗುವುದರಿಂದ ಮನಸ್ಸನ್ನು ಹುರುಪುಗೊಳಿಸುವ ರಾಸಾಯನಿಕಗಳು ಹರಿಯುತ್ತವೆ; ಅವುಗಳಿಂದ ಇಮ್ಯೂನಿಟಿ ಹೆಚ್ಚುತ್ತದೆ. ಇದು ನೀವು ಅವರಿಗೆ ಮಾಡಬಹುದಾದ ಒಂದು ಸಸ್ನೇಹ ಸಹಾಯ.

Satish said...

ಹರೀಶ್,

ನಾವೆಲ್ಲರೂ ಹಾಗೇ ಆಶಿಸುತ್ತಿದ್ದೇವೆ, ಧನ್ಯವಾದಗಳು.
ನಮಗೆ ಆಶ್ಚರ್ಯವಾಗುವ ಹಾಗೆ ಆತ ಇನ್ನೂ ತನ್ನ ನಗೆಯನ್ನು ಮುಖದಲ್ಲಿ ಕಳೆದುಕೊಂಡಿಲ್ಲ.

ಸುಪ್ತದೀಪ್ತಿ,
ನಾವೆಲ್ಲರೂ ಆದಷ್ಟು ಸಹಜವಾಗಿ ನಡೆದುಕೊಳ್ಳುತ್ತಿದ್ದೇವೆ, ಇನ್ ಫ್ಯಾಕ್ಟ್ ಹೆಚ್ಚು ಕೆಲಸವನ್ನೂ ಕೊಡುತ್ತಿದ್ದೇವೆ :-)
ಏನಿಲ್ಲ, ಆತ ಒಳ್ಳೆಯ ಡಾಕ್ಟರುಗಳನ್ನು ಕಂಡು ಚಿಕಿತ್ಸೆ ತೆಗೆದುಕೊಳ್ಳಲು ಆರಂಭಿಸಿದ್ದಾನಂತೆ ಶೀಘ್ರದಲ್ಲೇ ಗುಣಮುಖನಾಗಲಿ ಎನ್ನುವುದು ನಮ್ಮ ಆಶಯ.

12 said...

Conan Barbarian
Conan the Barbarian Wallpapers
Age of Conan Classes


Game multiplayer online rpg
multiplayer online game like runescape
free online multiplayer game

age of conan gold
aoc gold

Age of Conan Torrent
Age of Conan Trial
Age of Conan Free Trial

Hibernia
Midgard
Albion

DAOC 3 Accounts
DAOC How to Run 3 Accounts
DAOC Triple Log

daoc plat
daoc platinum
wow gold

DAOC Emissary Broken Visions
DAOC Champ Exp Quest

DAOC Artifacts
DAOC templates
Dark Ages of Camelot

EQ2 Plat
EQ2 Gold
EverQuest ii platinum Venekor

Sea Salt EQ2
EQ2 Tradeskill Seasalt
EQ2 recipie
Tier 8 EQ2 Food
Tier 9 EQ2 Food

Fading memories Everquest
Mentor everquest
eq2 guild permafrost

free warcraft servers
world of warcraft private servers

world of warcraft gold exploit
making wow gold
world of warcraft easy gold
gold wow fastest guide
free world of warcraft gold farming guides
world warcraft gold farming

wow pvp
wow arena season 4
wow s3 arena power leveling service

12 said...

Hello, there. This is a quick summary of the goodness of buying wow gold from Purchase wow gold, Purchase wow power level, the World of Warcraft network of trust Purchase wow power leveling, Purchase warcraft power leveling and understanding for WoW PL'ers Purchase warcraft gold. Come to here for Purchase wow leveling. If you are in the mood for Final Fantasy XI gil, then please go to Purchase FFXI Gil, Purchase Buy FFXI Gil, Purchase FFXI Gil Sale, Purchase Cheapest FFXI Gil, Purchase Buy Cheap FFXI Gil, Purchase final Fantasy XI Gil, Purchase Cheap FFXI Gil.