Monday, December 31, 2007

Byteಗಳು bite ಮಾಡುವ ಮೊದಲು...

ವರ್ಷದ ಕೊನೆಯಲ್ಲಿ ಇ-ಮೇಲ್‌ ಮೆಸ್ಸೇಜು, ಫೈಲು, ಫೋಲ್ಡರುಗಳನ್ನ ಆರ್ಗನೈಜ್ ಮಾಡಿಬಿಡೋಣವೆಂದುಕೊಂಡು ಉತ್ಸಾಹದಿಂದ ಬೇಕಾದಷ್ಟು ವಿಂಡೋಸ್‌ಗಳನ್ನು ತೆರೆದಿಟ್ಟುಕೊಂಡೋನಿಗೆ ಕಳೆದ ಆರು ತಿಂಗಳಲ್ಲಿ ಆಕೈವ್ ಫೈಲು 1.7 GB ಅಷ್ಟು ಬೆಳೆದಿರೋದು ನೋಡಿ ಆಶ್ಚರ್ಯವಾಯಿತು. ಮೊದಲೆಲ್ಲ ಕೆಲವೇ ಕೆಲವು ಕಿಲೋ ಬೈಟುಗಳಷ್ಟು ದೊಡ್ಡದಿರುತ್ತಿದ್ದ ಮೆಸ್ಸೇಜುಗಳು ಆಪರೇಟಿಂಗ್ ಸಿಸ್ಟಮ್ ಬದಲಾದ ಹಾಗೆ ಟೂಲ್ಸ್‌ಗಳು ಅಭಿವೃದ್ಧಿಗೊಂಡ ಹಾಗೆ ತಾವೂ ಬೇಕಾದಷ್ಟು ಬೆಳೆದಿರೋದು ನಿಜ. ಕೇವಲ ಹತ್ತು ವರ್ಷಗಳಲ್ಲಿ ಇಷ್ಟೊಂದು ದೊಡ್ಡದಾಗಿ ಬೆಳೆಯೋ ಮೆಸ್ಸೇಜುಗಳಾಗಲೀ, ಅಪ್ಲಿಕೇಷನ್ನುಗಳಾಗಲೀ ಇನ್ನೊಂದು ಇಪ್ಪತೈದು ವರ್ಷಗಳಲ್ಲಿ ಏನೇನು ಬೆಳೆಯುತ್ತವೋ ಎಂದು ಯೋಚಿಸಿಕೊಂಡಂತೆಲ್ಲ ಸೈನ್ಸ್ ಫಿಕ್ಷನ್ ಮೂವಿಯೊಂದು ತಲೆಯಲ್ಲಿ ಅನ್‌ವೈಂಡ್ ಆಗತೊಡಗಿತು, ಮೊಬೈಲು ಡಿವೈಸುಗಳಲ್ಲಿ ಟೆರ್ರಾಬೈಟುಗಳ ಸಾಗಣೆಯ ವ್ಯವಸ್ಥೆ ಬರುವ ಕಾಲ ದೂರವೇನೂ ಇಲ್ಲ!

ಕಳೆದ ಹತ್ತು ಹನ್ನೆರಡು ವರ್ಷಗಳಿಂದ ಇ-ಮೇಲ್ ಅನ್ನು ದಿನನಿತ್ಯವೂ ಬಳಸೀ ಬಳಸೀ ನನಗೆ ಬೇಕಾದ ಮೆಸ್ಸೇಜುಗಳನ್ನೆಲ್ಲ (ಅಂದರೆ ಎಲ್ಲ ಇ-ಮೇಲುಗಳನ್ನೂ) ಒಂದಲ್ಲ ಒಂದು ಫಾರ್ಮ್/ಡಿವೈಸಿನಲ್ಲಿಡಲು ಪ್ರಯತ್ನಿಸಿ ನಾನಂತೂ ಸೋತು ಹೋಗುತ್ತಿದ್ದೇನೆ ಎನ್ನಿಸಿತು. ಪ್ರತಿ ಆರು ತಿಂಗಳಿಗೊಮ್ಮೆ ಫೈಲು, ಮೆಸ್ಸೇಜುಗಳನ್ನೆಲ್ಲ ಆರ್ಕೈವ್ ಮಾಡಿಡುವುದು ಜಾಣ ಪದ್ದತಿಯಾಗಿತ್ತು, ಈಗ ಅದು ಉಲ್ಬಣವಾಗದ ರೋಗವಾಗಿದೆ. ಅಷ್ಟೂ ಮಾಡಿ ೧೯೯೭ ರಿಂದ ಉಳಿಸಿಕೊಂಡ ಮೆಸ್ಸೇಜುಗಳನ್ನು ಒಮ್ಮೆಯೂ ನೋಡಿರದಿದ್ದರೂ ಇಟ್ಟುಕೊಂಡಿರಬೇಕೇಕೆ ಎನ್ನುವುದು ಒಂದು ಬಣದ ವಾದ, ಇವತ್ತಲ್ಲ ನಾಳೆ ಬೇಕಾದೀತು ಇರಲಿ ಎನ್ನುವುದು ಮತ್ತೊಂದು ಬಣದ ಆಚರಣೆ.

ನನಗೆ ಕಂಡದ್ದೆಲ್ಲವನ್ನು ಉಳಿಸುವ ಖಾಯಿಲೆ ಆರಂಭವಾದದ್ದು ೨೦೦೦ ದ ಇಸ್ವಿಯ ಹೊತ್ತಿಗೆ Y2K ಜ್ವರ ಬಂದು ಅಮೇರಿಕನ್ ಕಂಪನಿಗಳು ನಲುಗುವ ಸಮಯದಲ್ಲೇ ಎಂದರೆ ತಪ್ಪಾಗಲಾರದು. ಅದು ಹೀಗೇ ಒಂದು ಮಾಮೂಲಿ ಡಿಸೆಂಬರ್ ೩೧ ರ ದಿನವಾಗಿರಲಿ, ಆಗಬಹುದು ಎನ್ನುವುದು ಆಗ ಒಂದು ಉತ್ಸಾಹಬರಿತ ನಿರೀಕ್ಷೆ ಆಗಿತ್ತು ಎಂದರೆ ತಪ್ಪಲ್ಲ. ನ್ಯೂ ಝೀಲ್ಯಾಂಡಿನಿಂದ ಹಿಡಿದು ಯೂರೋಪಿನವರೆಗೆ ಎಲ್ಲ ದೇಶದವರೂ ಹೊಸ ವರ್ಷವನ್ನು ಆಚರಿಸಿಕೊಂಡು ಬಂದರೂ ಅಮೇರಿಕದ ಈಸ್ಟ್ ಕೋಸ್ಟ್‌ನಲ್ಲಿ ರಾತ್ರಿ ಹನ್ನೆರಡು ಬಜಾಯಿಸುವವರೆಗೆ ತದನಂತರದ ಕೆಲವು ಘಂಟೆಗಳವರೆಗೆ ಇಲ್ಲಿನ ಕಾರ್ಪೋರೇಟ್ ವ್ಯವಸ್ಥೆ ನಿದ್ರೆ ಮಾಡಿದ್ದೇ ಇಲ್ಲ. ಕಂಪನಿಯ ಮೇಲ್ ರೂಮಿನಿಂದ ಹಿಡಿದು ಸಿಇಓ ವರೆಗೆ ಎಲ್ಲರೂ ಹೊಸ ವರ್ಷದ ನಿರೀಕ್ಷೆಯಲ್ಲಿದ್ದವರೇ, ಆದರೆ ಆ ನಿರೀಕ್ಷೆಯ ಕಣ್ಣುಗಳಲ್ಲಿ ಕುತೂಹಲದ ಜೊತೆಗೆ ಚಿಂತೆಯೂ ಮನೆಮಾಡಿತ್ತು ಎಂದರೆ ತಪ್ಪಲ್ಲ. ಪಾಪ, ಹಗಲೂ-ರಾತ್ರಿ ದುಡಿದ ಪ್ರಾಜೆಕ್ಟ್ ಟೀಮುಗಳು ಹೆಚ್ಚಿನ ವ್ಯವಸ್ಥೆಯನ್ನು ಸುಗಮವಾಗಿಸುವಲ್ಲಿ ಪಟ್ಟ ಕಷ್ಟ ಬಹಳಷ್ಟು ಕೆಲಸ ಮಾಡಿತ್ತು. ಮನುಕುಲ ಕಂಪ್ಯೂಟರ್ ಸಿಸ್ಟಮ್ ಮೇಲೆ ಅವಲಂಭಿತವಾದ ಒಂದು ದೊಡ್ಡ ಸಂಬಂಧಕ್ಕೆ ಹಾಗೂ ದಿನೇ ದಿನೇ ಬೆಳೆಯುತ್ತಿರುವ ತಂತ್ರಜ್ಞಾನಕ್ಕೆ ಸವಾಲಾಗಿದ್ದ ಆ ರಾತ್ರಿಯೂ ಬಂದಿತು, ಮತ್ತೆ ಅದು ಹೋಗಿ ಈಗ ಏಳು ವರ್ಷಗಳು ಮುಗಿಯುತ್ತಾ ಬಂತು.

ಒಂದು ಕಾಲದಲ್ಲಿ ಸರಳವಾಗಿದ್ದ ಡಾಸ್ ವ್ಯವಸ್ಥೆ ಈಗಿಲ್ಲ, ಈಗೇನಿದ್ದರೂ ಪ್ರಭಲವಾದ ವಿಸ್ತಾದಂತಹ ಕಾರ್ಯಾಚರಣ ವ್ಯವಸ್ಥೆ. ದೊಡ್ಡ ಮನುಷ್ಯರ ಸಹವಾಸದಲ್ಲೆಲ್ಲ ದೊಡ್ಡವು ಎನ್ನುವ ಹಾಗೆ ಒಂದೇ ರೀತಿಯ ಫೈಲ್‌ (ಸ್ಪ್ರೆಡ್‌ಶೀಟ್) ಅನ್ನು ಮೈಕ್ರೋಸಾಫ್ಟಿನ ಎರಡು ಎಕ್ಸೆಲ್ ವರ್ಷನ್‌ಗಳಲ್ಲಿ ಸೇವ್ (ಉಳಿಸಿ) ಮಾಡಿದರೆ ಅದರ ಸೈಜ್‌ನಲ್ಲಿ ಹೆಚ್ಚಿನ ವ್ಯತ್ಯಾಸ. ನನ್ನ ಬಳಿ ಇರೋ ಆಫೀಸ್ ೨೦೦೩ ರ ಫೈಲುಗಳಿಗೂ ಅವೇ ಆಫೀಸ್ ೨೦೦೭ ರಲ್ಲಿ ಉಳಿಸಿದ ಫೈಲುಗಳಿಗೂ ಕನ್ಸಿಡರೆಬಲ್ ವ್ಯತ್ಯಾಸವಿದೆ ಫೈಲ್ ಸೈಜ್‌ನಲ್ಲಿ ಎಂದರೆ ನಂಬಲಾಗದು. ದಿನೇ ದಿನೇ ಟೆಕ್ನಾಲಜಿ ಹೆಚ್ಚಿದಂತೆ ನನ್ನ ಕೆಲಸದ ಅಗತ್ಯಗಳಲ್ಲಿ ಬರೀ ಇ-ಮೇಲ್ ಓದುವುದು, ಬರೆಯುವುದನ್ನು ಬಿಟ್ಟರೆ ಉಳಿದ ಅಪ್ಲಿಕೇಶನ್ನು ಗಳನ್ನು ಹೆಚ್ಚು ಕಲಿಯುವುದಾಗಲೀ ಬಳಸುವುದಾಗಲೀ ನಿಂತೇ ಹೋಗಿರುವಾಗ ಫೈಲ್ ಹಾಗೂ ಇ-ಮೇಲ್ ಮ್ಯಾನೇಜ್‌ಮೆಂಟೇ ಬದುಕಾಗಿ ಹೋಗಿದೆ. ಆಶ್ಚರ್ಯವೆನ್ನುವಂತೆ ಒಂದು ಕಾಲದಲ್ಲಿ ಚೆನ್ನಾಗೇ ಓಡುತ್ತಿದ್ದ ಹಳೆಯ ಕಂಪ್ಯೂಟರ್ ಈಗ ಯಾವುದೋ ತಗಡು ಡಬ್ಬವಾಗಿ ಕಂಡುಬರುತ್ತಿರೋದು.

ಹಾರ್ಡ್ ಡಿಸ್ಕೇ ಇಲ್ಲದ ಕಂಪ್ಯೂಟರುಗಳಿಂದ ಹಿಡಿದು ಐವತ್ತು MB ಹಾರ್ಡ್‌ಡಿಸ್ಕ್ ಇರುವ ಪರ್ಸನಲ್ ಕಂಪ್ಯೂಟರ್ ಅನ್ನು ಬಳಸಿದವರಿಗೆ ಇಂದಿನ ಟೆರ್ರಾಬೈಟುಗಳನ್ನು ನೋಡಿ ಏನನಿಸುತ್ತೋ ಏನೋ. ಹಾಗಾದರೆ ನಮ್ಮ ಬದುಕಿನಲ್ಲಿ ಅಷ್ಟೊಂದು ಬದಲಾವಣೆಗಳಾಗಿವೆಯೇ? ಉದಾಹರಣೆಗೆ ಒಂದು ಕಾಲದಲ್ಲಿ ಒಂದು ಮೆಗಾಪಿಕ್ಸೆಲ್ ಕ್ಯಾಮರಾಗಳನ್ನು ಬಳಸಿ ಚಿತ್ರ ತೆಗೆಯುತ್ತಿದ್ದ ಫೋಟೋಗ್ರಾಫರುಗಳು ಇಂದಿನ ಹತ್ತು ಮೆಗಾಪಿಕ್ಸೆಲ್ ಕ್ಯಾಮಾರಾದಲ್ಲಿ ಅಂತಹದನ್ನೇನು ಅಚೀವ್ ಮಾಡುತ್ತಿದ್ದಾರೆ ಎನ್ನುವುದು ನನ್ನಲ್ಲಿನ ಗೊಂದಲ. ನಾನು ಚಿತ್ರವನ್ನು ಪ್ರಿಂಟ್ ಮಾಡಿದರೂ 8X10 ಸೈಜ್ ಬಿಟ್ಟು ಬೇರೆ ಸೈಜ್ ನಲ್ಲಿ ಪ್ರಿಂಟ್ ಹಾಕಿಸಿಲ್ಲ, ಅಂದ ಹಾಗೆ ಮೊದಲೆಲ್ಲ ಫಿಲ್ಮ್ ರೀಲುಗಳನ್ನು ಸಂಸ್ಕರಿಸುತ್ತಿದ್ದ ನಮಗೆ ಎಷ್ಟು ಮೆಗಾಪಿಕ್ಸೆಲ್ಲುಗಳು ಸಿಗುತ್ತಿದ್ದವು, ಇಂದಿನ ಡಿಜಿಟಲ್ ಯುಗದ ಚಿತ್ರಗಳು ಯಾವ ರೀತಿ ಭಿನ್ನ? ನನ್ನ ಸಹೋದ್ಯೋಗಿ ತನ್ನ ಆಫೀಸಿನಲ್ಲಿ ತನಗೆ ಬೇಕಾದ ಹಲವಾರು ಚಿತ್ರಗಳನ್ನು ಪ್ರಿಂಟ್‌ಹಾಕಿಸಿ ಇಟ್ಟುಕೊಂಡಿದ್ದಾನೆ, ಆತನ ಪ್ರಕಾರ ಸಾವಿರಾರು ಚಿತ್ರಗಳನ್ನು ತೆಗೆದರೆ ಒಂದಿಷ್ಟು ಚಿತ್ರಗಳು ಚೆನ್ನಾಗಿ ಬರುತ್ತವೆ, ಹಾಗಿದ್ದ ಮೇಲೆ ಇಂದಿನ ಡಿಜಿಟಲ್ ಯುಗದ ಕ್ಯಾಮೆರಾಗಳು ಟ್ರೈಯಲ್-ಎಂಡ್-ಎರರ್ ಮೆಥೆಡ್ಡುಗಳನ್ನು ಪುರಸ್ಕರಿಸುತ್ತವೆಯೆಂದು ಅರ್ಥವೇ? ಒಂದು ಕಾಲದಲ್ಲಿ ಬ್ಲಾಕ್ ಅಂಡ್ ವೈಟ್ ಚಿತ್ರಗಳಲ್ಲಿ ನಮ್ಮನ್ನು ನಾವು ಕಂಡುಕೊಳ್ಳುತ್ತಿದ್ದವರು, ಇಂದು ಅನೇಕ ಮೆಗಾಬೈಟುಗಳಲ್ಲಿ ನಮ್ಮನ್ನು ಅವಿಷ್ಕರಿಸಿಕೊಳ್ಳುತ್ತಿದ್ದೇವಷ್ಟೇ. ಆದರೆ, ಇತ್ತೀಚೆಗೆ ಬಳಕೆಗೆ ಬಂದಿರುವ HD ವಿಡಿಯೋ ಕಾರ್ಯಕ್ರಮಗಳನ್ನು ನೋಡಿದವರಿಗೆ ಗೊತ್ತು, ಸೆಕೆಂಡಿಗೆ 13.5 ರಿಂದ 19.8 (ಕಡಿಮೆ ಎಂದರೆ 13.5) ಮೆಗಾಬೈಟುಗಳನ್ನು ಹೊತ್ತು ತರುವ ಕಮ್ಮೂನಿಕೇಷನ್ ಮಾಧ್ಯಮ, ಅಲ್ಲಿನ ಚಿತ್ರ, ಸೌಂಡಿನ ಕ್ಲಾರಿಟಿಗೆ ಎಂಥವರ ಮನಸೋತು ಹೋಗೋದು ಖಂಡಿತ. ಸ್ಟ್ಯಾಂಡರ್ಡ್ ಡೆಫಿನಿಷನ್ನ್‌ನಲ್ಲಿ (ಸೆಕೆಂಡಿಗೆ 1.2 ಇಂದ 3.8 ಮೆಗಾಬೈಟುಗಳನ್ನು ಭಿತ್ತರಿಸುವ ಕಾರ್ಯಕ್ರಮಗಳು) ನೋಡುವ ಕಾರ್ಯಕ್ರಮಗಳು ಸೆಪ್ಪೆ ಎನಿಸೋದು ನಿಜ. ಎಲ್ಲ ಕಾರ್ಯಕ್ರಮಗಳೂ ಹೈ ಡಿಫನಿಷನ್ನಲ್ಲಿರೋದೇನೂ ಬೇಕಾಗಿಲ್ಲ, ಆದರೆ ಕೆಲವೊಂದು ಡಿಸ್ಕವರಿ ಕಾರ್ಯಕ್ರಮಗಳು, ಆಟೋಟಗಳನ್ನು ಹೈ ಡೆಫನಿಷನ್ನಿನ್ನಲ್ಲಿ ನೋಡಿದಾಗ ಅದರ ಅನುಭವವೇ ಬೇರೆ.

ತಂತ್ರಜ್ಞಾನ ಬದಲಾಗುತ್ತದೆ, ಆದರೆ ನಾವು? ನಾವು ಬದಲಾಗದಿದ್ದರೆ ಉಳಿಗಾಲವಿಲ್ಲ ಎನ್ನುವಂತಾಗಿದೆ, ವೈಯಕ್ತಿಕವಾಗಲ್ಲದಿದ್ದರೂ ಆಫೀಸಿನ ಕೆಲಸ ಕಾರ್ಯಗಳ ಹಿನ್ನೆಲೆಯಲ್ಲಿ, ಇಲ್ಲವೆಂದರೆ ಬದಲಾವಣೆಗಳನ್ನು ಎದುರಿಸಿ ಸೋತ ಹಣೆಪಟ್ಟಿ ನಮ್ಮನ್ನು ಅಂಟಿಕೊಂಡು ಬಿಡುತ್ತದೆ.

ಈಗಾಗಲೇ ನ್ಯೂ ಝೀಲ್ಯಾಂಡಿನವರು ಹೊಸವರ್ಷವನ್ನು ಆಚರಿಸಿ ನಾಳೆ ಇರುವುದನ್ನು ಸಾಭೀತುಪಡಿಸಿದ್ದಾರಾದ್ದರಿಂದ ನನಗೆ ನಾಳೆಯ ಬಗ್ಗೆ ಚಿಂತೆ ಇಲ್ಲವೇ ಇಲ್ಲ. ಬೇಡವೆಂದರೂ ಬರುವ ನಾಳೆಗಳು ಎಂದು ಭವಿಷ್ಯವನ್ನು ಸೂಚಿಸುವ ವಿಚಾರ ನಿಜ - ಈ ಕೆಳಗಿನ ನೈಜ ಘಟನೆಯನ್ನು ನೋಡಿ:
ನನ್ನ ಸಹೋದ್ಯೋಗಿ ಮೈಕಲ್ ತನ್ನ ಐದು ವರ್ಷದ ಮಗಳನ್ನು ನಿದ್ರೆ ಮಾಡಿಸುವಾಗ, ’ಹನಿ, ನೀನು ಕಣ್ಣು ಮುಚ್ಚಿ ಮಲಗಿಕೋ, ಕಣ್ಣು ಬಿಟ್ಟು ನೋಡುವಾಗ ನಾಳೆಯಾಗುತ್ತದೆ’ ಎಂದನಂತೆ. ಮಗಳು ಮರುದಿನ ಎದ್ದು ತಂದೆಯನ್ನು ಕೇಳಿದಳಂತೆ, ’ಡ್ಯಾಡೀ, is it tomorrow now?'
ಮೈಕಲ್, ’No, it is not tomorrow, it is Today!'
ಮಗಳು, ’then you lied to me! you said when I wake up it will be tomorrow, where is it?!'

***

Happy New Year everyone!
(I think I have given up...)

December 07, 2006 ರ ಬರಹ, ಸೂರ್ಯ-ಚಂದ್ರರ ನೆರಳಿನಲಿ ಇಂದ ಆಯ್ದುಕೊಂಡಿದ್ದು...

'ನಾನು ಜನವರಿ ಒಂದನ್ನು ಹೊಸ ವರ್ಷವನ್ನಾಗಿ ಆಚರಿಸೋದಿಲ್ಲ, ನನಗೇನಿದ್ದರೂ ಯುಗಾದಿಯೇ ಹೊಸವರ್ಷ' ಎಂದು ಮೂರು ವರ್ಷಗಳ ಹಿಂದೆ ಯಾವುದೋ ಪ್ರಶ್ನೆಗೆ ಉತ್ತರವಾಗಿ ಹೇಳಿದ ನನ್ನನ್ನು ಭೂಮಿಗೆ ತಂದವನು ಕೃಪೇಶ - 'ನಿನ್ನ ಬರ್ತ್ ಡೇ, ಆಫೀಸ್‌ನಲ್ಲಿನ ಆಗುಹೋಗುಗಳು ಮತ್ತೆಲ್ಲವೂ ಇಂಗ್ಲೀಷ್ ಕ್ಯಾಲೆಂಡರ್ ಪ್ರಕಾರ ನಡೆಯುತ್ತಿರುವಾಗ ಈ ಹೊಸವರ್ಷವೊಂದನ್ನು ಮಾತ್ರ ಉಪೇಕ್ಷಿಸುತ್ತೀಯೇಕೆ?'. ಅಂದಿನಿಂದ ಜನವರಿ ಒಂದರಂದು ನಾನು ಕುಡಿದು-ಕುಣಿದು ಕುಪ್ಪಳಿಸುವುದಿಲ್ಲವಾದರೂ 'ಹೊಸ' ವರ್ಷವನ್ನು ಕಣ್ಣು ಬಿಟ್ಟು ನೋಡುವುದನ್ನು ಕಲಿತಿದ್ದೇನೆ, ಬ್ರಹ್ಮಾಂಡದಲ್ಲಿ ಅನೇಕ ಬದಲಾವಣೆಗಳನ್ನು ತರುವ ನಮ್ಮ ಸಂಭ್ರಮದ ಯುಗಾದಿಯನ್ನು ಅದ್ಯಾವ ಕಾರಣಗಳಿಂದಲು ಡಿಸೆಂಬರ್ ೩೧ ಹಾಗೂ ಜನವರಿ ೧ ರ ನಡುವಿನ ವ್ಯತ್ಯಾಸಕ್ಕೆ ನಾನು ತುಲನೆ ಮಾಡಲಾಗದಿದ್ದರೂ 'ಗುಂಪಿನಲ್ಲಿ ಗೋವಿಂದ' ಎನ್ನುವಂತೆ ಹೆಚ್ಚು ಜನರು ಆಚರಿಸುವ ನಡವಳಿಕೆಯನ್ನು ಅನುಮೋದಿಸುವ ಬೃಹತ್ ಮನಸ್ಸನ್ನು ಹೊಂದಿಸಿಕೊಂಡಿದ್ದೇನೆ. ನಮ್ಮದೇ ಸರಿ ಎನ್ನುವುದು ಒಂದು ಹಂತ, ಸರಿಯನ್ನು ಹೆಚ್ಚು ಜನರು ಒಪ್ಪಿಕೊಳ್ಳುವ ಬದಲಾವಣೆಯನ್ನು ಹುಟ್ಟು ಹಾಕುವ ಪ್ರವಾದಿಯಾಗುವುದು ಮತ್ತೊಂದು ಹಂತ. ಪಾಡ್ಯಬಿದಿಗೆಗಳಿಗೆ ಜನರನ್ನು ಹೊಂದಿಸುವುದಾಗಲೀ, ಇಂಗ್ಲೀಷ್ ಕ್ಯಾಲೆಂಡರಿನಲ್ಲಿ ತಿಂಗಳ ಮಧ್ಯೆ (೨೦ ನೇ ತಾರೀಖಿನ ಆಜುಬಾಜು) ಹೊಸ ಮಾಸವನ್ನು ಸೃಷ್ಟಿಸುವುದಾಗಲೀ, ಚೈತ್ರವನ್ನು-ವಸಂತವನ್ನು ಬದಲಾವಣೆಯ ಏಜೆಂಟರನ್ನಾಗಿ ಜಗತ್ತಿಗೆ ಸಾರುವುದು ನನ್ನ ಕರ್ಮವಂತೂ ಅಲ್ಲ, ಈ ಜನ್ಮದಲ್ಲಿ ಆ ಶಕ್ತಿಯೂ ನನಗಿಲ್ಲ ಎಂದು ಜಾರಿಕೊಂಡು ಹಾಡುಹಗಲೇ ಗುಂಪನ್ನು ಅನುಮೋದಿಸುವ ಪ್ರವೃತ್ತಿ ಸ್ವಭಾವವಾಗಿ ಪರಿವರ್ತನೆಯಾಗಿ ಹೋಗಿದೆ.

5 comments:

Sheela Nayak said...

ಪ್ರಿಯ ಸತೀಶ್,
ನನ್ನ ಅಭಿಪ್ರಾಯದಲ್ಲೂ ನಾವು ಭಾರತೀಯರು ಯುಗಾದಿಯಲ್ಲೇ ಹೊಸ ವರ್ಷದಾಚರಣೆ ಮಾಡಬೇಕು. ಆದರೆ ನಮ್ಮ ಸುತ್ತಲಿನ ಜನರೆಲ್ಲಾ ಜನವರಿ ಒಂದನ್ನು ಹೊಸ ವರ್ಷವೆಂದು ಆಚರಿಸುವಾಗ ನಾವೇಕೆ ವಿಚಿತ್ರಪ್ರಾಣಿಯಂತೆ ಕಾಣಬೇಕು. ಅಲ್ಲದೆ ನಮ್ಮ ದಿನನಿತ್ಯದ ಕಾರ್ಯಕ್ಕೆ ನಾವು ಇದೇ ಕ್ಯಾಲೆಂಡರನ್ನು ಅವಲಂಬಿಸಿರುವಾಗ ಈ ಒಂದು ವಿಷಯಕ್ಕೆ ಬಿಂಕ ತೋರಬೇಕು? ಹೇಗು ನಾವು ಯುಗಾದಿಯನಂತೂ ಆಚರಿಸುತ್ತೇವೆಯಲ್ಲವೆ? ಹಾಗಾಗಿ ನಮಗೆ ಎರಡೆರಡು ಹೊಸ ವರ್ಷದ ಆಚರಣೆ! ಹಾಗೆ ನೋಡಿದರೆ ಈ ಕ್ಯಾಲೆಂಡರ್ ಕೂಡ ನಮ್ಮ ಭಾರತೀಯ ಪದ್ಧತಿಯ ಪ್ರಕಾರವೇ ಇದೆ. ದಶಂಬರ್ ಅಂದರೆ ೧೦ ಎಂದರ್ಥವಲ್ಲವೆ? ಈ ವಿಷಯವಾಗಿ ತರಂಗ ಪತ್ರಿಕೆಯವರು ಲೇಖನವೊಂದನ್ನು ಪ್ರಕಟಿಸಿದ್ದಾರೆ.

ಇಲ್ಲೇ ನಾನು ನಿಮ್ಮ ಕ್ರಿಸ್ ಮಸ್ ಪೋಸ್ಟ್ ಬಗ್ಗೆನೂ ಬರೆಯುತ್ತೇನೆ. ಗುಂಪಿನಲ್ಲಿ ಗೋವಿಂದವಾಗುವ ಬರದಲ್ಲಿ ನಮ್ಮತನ, ನಮ್ಮದೇಶ ಭಾಷೆಯನ್ನು ಬಿಡಲಾಗುತ್ತದೆಯೇ? ಅದರ ಬಗ್ಗೆ ಅಭಿಮಾನವಿಟ್ಟುಕೊಳ್ಳಬೇಕು ಅಲ್ಲವೇ? ವಿದೇಶದಲ್ಲಿರುವ ನೀವು ಅಲ್ಲಿನ ಹಬ್ಬಗಳನ್ನು ಆಚರಿಸುವುದು ಸಹಜವೇ ಅಗಿರುತ್ತದೆ. ಆದರೆ ಅದರ ಜೊತೆಗೆ ನಮ್ಮ ಹಬ್ಬಗಳನ್ನು ಕೂಡ ನಿಮ್ಮ ಕರ್ತವ್ಯವಾಗಿದೆ. ಸಣ್ಣ ಮಟ್ಟವಾದರೂ ಸರಿ.
ದಯವಿಟ್ಟು ಆಪಾರ್ಥಮಾಡಿಕೊಳ್ಳಬೇಡಿ. ನನ್ನದೇ ಸಂಬಂಧಿಗಳನ್ನು ಉದ್ದೇಶಿಸಿ ಹೇಳಿದ್ದು. ಅವರು ಮನೆಯಲ್ಲಿ ಕ್ರಿಸ್ಮಸ್ ಗಿಡಕ್ಕೆ ಅಲಂಕಾರಮಾಡಿ ಅದರ ಬಗ್ಗೆ ಹೇಳಿದ್ದೇಹೇಳಿದ್ದು. ಆದರೆ ದೀಪಾವಳಿ..... ಹುಹುಂಂಂಂ ಪುರುಸೊತ್ತು ಇಲ್ಲ. ಆ ವಿಷಯದಲ್ಲಿ ಈ ಸಿಖ್ ಜನಾಂಗದವರೇ ಆಗಬಹುದು. ತಮ್ಮ ಪದ್ಧತಿಯನ್ನು ಎಲ್ಲೇ ಹೋಗಲಿ ಜೊತೆಯಲ್ಲೇ ಒಯ್ಯುತ್ತಾರೆ!
ನಿಮ್ಮ ಈ೨ ಬರಹಗಳು ಸಕಾಲಿಕವಾಗಿದೆ. ಅಲ್ಲಿನ ಸಂಸ್ಕೃತಿಯ ಜೊತೆಗೆ ನಾವು ನಮ್ಮದನ್ನೂ ಬೆಳೆಸುವುದು ನಮ್ಮ ಆದ್ಯತೆಯಾಗಬೇಕು.

ಸುಪ್ತದೀಪ್ತಿ suptadeepti said...

ಸತೀಶ್, ನಿಮಗೂ ನಿಮ್ಮ ಮನೆಯವರೆಲ್ಲರಿಗೂ ನನ್ನ ಹಾರೈಕೆಗಳು:

ಹೊಸ ವರುಷ ಹರುಷದಾಯಕವಾಗಿರಲಿ.
ಸುಖ, ಸಂತಸ, ಶಾಂತಿ ತರಲಿ,
ನಗು ಹಬ್ಬಲಿ, ಬಿಗು ತಗ್ಗಲಿ,
ಸಮೃದ್ಧಿಯ ಆಪ್ತ ತೋಳು ಎಲ್ಲರನು ತಬ್ಬಲಿ.

Satish said...

ಶೀಲಾ ಅವರೇ,

ನಮಗೇನೋ ನಮ್ಮ ಹೊಸವರ್ಷದ ಆಚರಣೆಯಲ್ಲೇ ವಿಶ್ವಾಸ, ಚೈತ್ರ-ವಸಂತಗಳ ಆಗಮನದ ಬದಲಾವಣೆಯ ಮುಂದೆ ಇವತ್ತಿದ್ದದ್ದು ನಾಳೆ ಎನ್ನುವ ಡಿಸೆಂಬರ್ ಜನವರಿ ಬದಲಾವಣೆಗಳು ನಮ್ಮ ಚರ್ಮವನ್ನು ಬಿಟ್ಟು ಮುಂದೆ ಹೋಗಿಲ್ಲ ಎಂದರೂ ತಪ್ಪೇನಿಲ್ಲ.

ನೀವು ಹೇಳಿದಂತೆ ನಮ್ಮ ಹಬ್ಬಗಳನ್ನು ಆಚರಿಸೋದು ನಮ್ಮ ಪದ್ಧತಿ ಹಾಗೂ ನಮ್ಮ ಕರ್ತವ್ಯ.

ಹೊಸ ವರ್ಷದ ಶುಭಾಶಯಗಳು!

ಜ್ಯೋತಿಯವರೇ,

ಹೊಸ ವರ್ಷದ ಶುಭಾಶಯಗಳನ್ನು ಬಹಳ ಚೆನ್ನಾಗಿ ನಾಲ್ಕು ಸಾಲುಗಳಲ್ಲಿ ಹೇಳಿದ್ದೀರಿ.

ನಿಮಗೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು!

Anonymous said...

Hello, there. This is a quick summary of the goodness of buying wow gold from wow gold reviews, wow power level reviews, the World of Warcraft network of trust wow power leveling reviews, warcraft power leveling reviews and understanding for WoW PL'ers warcraft gold reviews. Come to here for wow leveling reviews. If you are in the mood for Final Fantasy XI gil, then please go to FFXI Gil reviews, Buy FFXI Gil reviews, FFXI Gil Sale reviews, Cheapest FFXI Gil reviews, Buy Cheap FFXI Gil reviews, final Fantasy XI Gil reviews, Cheap FFXI Gil reviews.

Anonymous said...

Conan Barbarian
Conan the Barbarian Wallpapers
Age of Conan Classes


Game multiplayer online rpg
multiplayer online game like runescape
free online multiplayer game

age of conan gold
aoc gold

Age of Conan Torrent
Age of Conan Trial
Age of Conan Free Trial

Hibernia
Midgard
Albion

DAOC 3 Accounts
DAOC How to Run 3 Accounts
DAOC Triple Log

daoc plat
daoc platinum
wow gold

DAOC Emissary Broken Visions
DAOC Champ Exp Quest

DAOC Artifacts
DAOC templates
Dark Ages of Camelot

EQ2 Plat
EQ2 Gold
EverQuest ii platinum Venekor

Sea Salt EQ2
EQ2 Tradeskill Seasalt
EQ2 recipie
Tier 8 EQ2 Food
Tier 9 EQ2 Food

Fading memories Everquest
Mentor everquest
eq2 guild permafrost

free warcraft servers
world of warcraft private servers

world of warcraft gold exploit
making wow gold
world of warcraft easy gold
gold wow fastest guide
free world of warcraft gold farming guides
world warcraft gold farming

wow pvp
wow arena season 4
wow s3 arena power leveling service