... ಎನ್ನಾರೈ ಗಳು ಒಂಥರಾ ಸಪ್ಪೆ ನಾಯ್‌ಗಳು...
ಬಹಳ ದಿನಗಳ ನಂತರ ಫೋನ್‌ನಲ್ಲಿ ಮಾತಾಡಕ್ ಸಿಕ್ಕಿದ್ದು ನನ್ನ ಹಳೆಯ ಸ್ನೇಹಿತ ಸುಬ್ಬ.
"ಏನೋ, ಸಮಾಚಾರ? ಹ್ಯಾಗಿದೀಯಾ? ಏನ್ ಕಥೆ?" ಅಂತ ಲೋಕೋಭಿರಾಮವಾಗಿ ಕೇಳಿದೆ,
"ಏನಿಲ್ಲ, ಚೆನ್ನಾಗಿದ್ದೀನಿ, ಬೆಳೆ, ಕೊಯ್ಲು, ಎಲೆಕ್ಷನ್ನು ಅಂತೆಲ್ಲಾ ಸ್ವಲ್ಪ ಬ್ಯುಸಿ ಅಷ್ಟೇ...ನೀನ್ ಹೆಂಗಿದಿ? ಅದೆಷ್ಟು ದಿನಾ ಆಯ್ತ್ ಮಾರಾಯ ನಿನ್ ಹತ್ರ ಮಾತಾಡೀ, ಬಾಳಾ ಖುಷಿ ಆಯ್ತು ನೋಡ್"
"ನಮಿಗೇನ್ ಆಗತ್ತೆ, ನಾವೆಲ್ಲಾ ಚೆನ್ನಾಗೇ ಇದ್ದೀವಿ, ಆರಕ್ಕೇರಲ್ಲ ಮೂರಕ್ಕಿಳಿಯಲ್ಲ" ಅಂದೆ.
"ಹೌದು, ಅದೇನೋ ಮಾರ್ಕೆಟ್ಟುಗಳು ಬೀಳ್ತಾ ಇದಾವೇ ಅಂತ ಕೇಳ್ದೆ, ಏನ್ ನಡೀತಾ ಇದೆ?" ಎಂದು ಕಾಳಜಿ ತೋರಿಸಿದ.
"ಅದೇನಿಲ್ಲ, ಲಾಸ್ಟ್ ಈಯರ್ ಮಾರ್ಕೆಟ್ಟುಗಳೆಲ್ಲ ಮೇಲ್ ಹೋಯ್ತಲ್ಲಾ, ಈ ವರ್ಷ ಒಂದಲ್ಲಾ ಒಂದು ಕಾರ್ಣ ಹಿಡಕೊಂಡು ಅವಕಾಶ ಸಿಕ್ಕಾಗೆಲ್ಲ ಕೆಳಗಡೆ ಬೀಳ್ತಾನೇ ಇವೆ. ಒಂದ್ಸರ್ತಿ ಚೈನಾದಲ್ಲಿ ಪ್ರಾಬ್ಲಮ್ಮು ಅಂತ ಬಿತ್ತು, ಇನ್ನೊಂದ್ಸರ್ತಿ ಎಮರ್ಜಿಂಗ್ ಮಾರ್ಕೇಟ್ಟಲ್ಲಿ ಪ್ರಾಬ್ಲಂ ಅಂತ ಬಿತ್ತು, ಮತ್ತೊಂದ್ ಸರ್ತಿ ರಷ್ಯಾದ ಪೂಟಿನ್ನ್ ದೆಸೆಯಿಂದ ಬಿತ್ತು...ಇನ್ನೂ ವರ್ಷ ಶುರುವಾಗಿ ಮೂರು ತಿಂಗಳು ಮುಗ್ದು ನಾಕಕ್ಕೆ ಬಿತ್ತು - ಆಗ್ಲೆ ನಾಕ್ ಸರ್ತಿ ಮಗುಚಿಕೊಂತು ನೋಡು..." ಎಂದು ಸಿಎನ್‌ಬಿಸಿ ಡಾಮಿನಿಕ್ ಚು ಥರ ನನ್ನ ಸ್ಟಾಕ್ ಮಾರ್ಕೆಟ್ ತತ್ವವನ್ನು ಅರುಹಿದೆ.
ನನ್ನ ಮಾತನ್ನ ಅರ್ಧದಲ್ಲೇ ತುಂಡು ಮಾಡಿ, "ಅಲ್ಲಾ ಮಾರಾಯಾ, ಆ ಪುಟಿನ್ ನೋಡು, ಹೆಂಗ್ ಗೆದ್ಕೋಂಬಿಟ್ಟಾ, ಕ್ರಿಮಿಯಾ ಅಂತಾ ಅಲ್ಲಿಗೇ ನಿಲ್ಲುಸ್ತಾನೋ, ಅಥವಾ ಇನ್ನೂ ತನ್ನದೇ ದೊಡ್ಡು ಅಂತ ಮಂತ ಶುರು ಹಚ್ಗೊಂತಾನೋ?"
"ಅವ್ನು ಏನ್ ಮಾಡ್ತಾನೋ ಕಾಣೇ, ಆದ್ರೆ ನಮ್ ಕಡೆಯವ್ರು ಸ್ಯಾಂಕ್ಷನ್ನು, ಗೀಂಕ್ಷನ್ನು ಅಂತ ಫೋರ್ಸ್ ಹಾಕ್ತಾನೇ ಅವ್ರೆ" ಅನ್ನೋಷ್ಟರಲ್ಲಿ,
"ಏ ಸುಮ್ನಿರೋ, ನಿಮ್ ಸ್ಯಾಂಕ್ಷನ್ನುಗಳ ಮುಖಾ ನೋಡ್ಕೊಂಡು ಅದುಮಿಕ್ಯಂಡ್ ಇರೋಕೇ ಅವ್ನೇನು ಸದ್ದಾಮ್ ಹುಸೇನ್ ಕೆಟ್ಟೋದ್ನೇ? ಒಂದ್ಸರ್ತಿ ಕಮ್ಯುನಿಷ್ಟ್ ಆದ್ರೇ ಯಾವಾಗ್ಲೂ ಕಮ್ಮುನಿಷ್ಟೇ ತಿಳಕಾ" ಎಂದು ಅವನ ಪ್ರಪಂಚದ ಇತಿಹಾಸದ ಪ್ರಹಸನವನ್ನು ನಿವೇದಿಸಿದ.
ಇನ್ನು ಇವನ ಹತ್ರ ರಷ್ಯದ ವಿಚಾರ ಮಾತಾಡ್ಬಾರ್ದು ಅಂದುಕೊಂಡು, ನಿಧಾನವಾಗಿ ಟಾಪಿಕ್ ಬದಲಾಯಿಸಿದೆ, "ಹೌದು, ಅಡಿಕೆ ಬೆಳೆ ಬಂಪರ್ ಬಂದಿದೆ ಅಂತ ಕೇಳ್ದೆ, ಹೆಂಗಿದೆ ವ್ಯವಹಾರ?"
"ಕೆಂಪ್ ಅಡಿಕೆಗೆ ಸ್ವಲ್ಪ ಬೆಲೆ ಬಂದ್ ನಾವ್ ಬಚಾವಾದ್ವಿ, ಇಲ್ಲಾಂದ್ರೆ ಈ ವರ್ಷ ಬಾಳ ಕಷ್ಟ ಇತ್ತು. ಎಲ್ಲ ಕಡೆ ಬೆಲೆ ಜಾಸ್ತಿ, ದುಡ್ಡೀಗ್ ಬೆಲೇನೇ ಇಲ್ಲ, ಹೆಂಗ್ ನಮ್ ಜೀವ್ನ ನಡೀತಾ ಇದೆ ಅಂತ ಬಿಡಿಸಿ ಹೇಳೋದೇ ಕಷ್ಟಾ"
"ಬರೀ ಕೃಷಿ ಅಂತ ನಂಬ್ಕೊಳ್ಳೋದ್ ಬಿಟ್ಟು, ನೀನು ಒಂದಿಷ್ಟು ಎಲೆಕ್ಷನ್ನ್ ಟೈಮಲ್ಲಿ ಕಾಸ್ ಮಾಡ್ಕೊಳ್ಳೋದಪ್ಪಾ"
"ಏ ಸುಮ್ನಿರೋ ಮಾರಾಯಾ, ಇವರು ಕೊಡೋ ಎಂಜಲು ಕಾಸಿಗೆ ನಾವ್ ಕೈ ಚೆಲ್ಲಿಕೊಂಡು ಕೂತ್ರೆ ತೋಟದ ಕೆಲ್ಸಾ ಎಲ್ಲಾ ಮಠ ಹತ್ತ್ ಹೋಗುತ್ತೆ, ಅದರ ಸವಾಸ ಅಲ್ಲ..."
"ಏ ಯಾಕೋ ಹಂಗಂತಿ? ನಾನು ಎಲೆಕ್ಷನ್ನ್ ಕಮೀಷನ್ನ್ ವೆಬ್ ಸೈಟ್ ನೋಡಿದ್ನಪ್ಪಾ, ಒಂದೊಂದು ಕ್ಯಾಂಡಿಡೇಟ್‌ಗಳು ಫೈಲ್ ಮಾಡಿರೋ ಅಫಿಡೇವಿಟ್ಟ್ ನೋಡಿದ್ರೆ, ಎಲ್ಲೆಲ್ಲೂ ಕೋಟಿ ಕೋಟೀ, ಎಲ್ಲಿಂದ ಬಂತೋ ಇವುಗಳ್ ಹತ್ರ ಇಷ್ಟೊಂದು? ಒಬ್ಬೊಬ್ರ ಹತ್ರ ನೂರು, ಸಾವಿರ ಕೋಟಿ..." ಎಂದು ನಿಜವಾಗಿ ಆಶ್ಚರ್ಯ ವ್ಯಕ್ತಪಡಿಸಿದೆ.
"ಅದೇ ನಿಜವಾದ ಮರ್ಮ ನೋಡು. ಎಷ್ಟೋ ಜನ ನೆಟ್ಟಗೆ ಹೈಸ್ಕೂಲೂ ಪಾಸಾಗಿರಂಗಿಲ್ಲ, ಲೆಕ್ಕಕ್ಕೆ ತೋರಿಸಿರೋದೆ ಕೋಟಿಗಟ್ಟಲೆ ಅಂದ್ರೆ ಇನ್ನು ಒಳಗೆಷ್ಟು ಇಟ್ಟಿರಬಹುದು?"
"ಹಂಗಂದ್ರೆ ಇವುಗಳ ಮುಂದೆ ನಮ್ಮ ವಾರನ್ನ್ ಬಫೆಟ್ಟು, ಬಿಲ್ ಗೇಟ್ಸ್ ಇವ್ರೆಲ್ಲ ಲೆಕ್ಕಕ್ಕೇ ಇಲ್ಲ..." ಅಂತ ಲೇವಡಿ ಮಾಡಿದೆ, ಅವನು ಅದನ್ನು ನಿಜ ಅಂದುಕೊಂಡು,
"ಮತ್ತಿನ್ನೇನು, ಆ ಫೋರ್ಬ್ಸು, ಫಾರ್ಚೂನ್ ನವರಿಗೆಲ್ಲ ಇಂಡಿಯಾದ್ ಬಗ್ಗೆ ಒಂದು ವರದಿ ಮಾಡೋಕ್ ಹೇಳು, ನಮ್ಮಲ್ಲಿ ನಿಜವಾಗಿ ಎಷ್ಟು ದುಡ್ಡಿದೇ ಅಂತ ಗೊತ್ತಾಗುತ್ತೆ?"
"ಹಾಗಾದ್ರೆ, ನಮ್ ಅಮೇರಿಕದ ಬಿಲಿಯನ್ನುಗಳೆಲ್ಲ ಲೆಕ್ಕಕ್ಕೇ ಇಲ್ಲ ಅನ್ನು?" ಎಂದು ಮೂದಲಿಸಿದ್ದಕ್ಕೆ...
"ಗುರುವೇ, ನಿನಗೇನ್ ಗೊತ್ತಿದೆ ಹೇಳು, ಒಂಥರ ಇನ್ನೂ ಹೈಸ್ಕೂಲ್ ಹುಡುಗನಂಗೆ ಮಾತಾಡ್ತಿ ನೋಡು. ಕಳೆದ ವರ್ಷ ನಿನ್ನ ಅಮೇರಿಕದ ಇಂಡೆಕ್ಸ್‌ಗಳು ಅಬ್ಬಬ್ಬ ಅಂದ್ರೆ ಎಷ್ಟು ಪರ್ಸೆಂಟ್ ಮೇಲಕ್ಕ್ ಹೋದ್ವು ಹೇಳೂ, ಇಪ್ಪತ್ತೋ ಮೂವತ್ತೋ ಪರ್ಸೆಂಟ್ ತಾನೆ? ಕಳೆದ ಐದು ವರ್ಷದಲ್ಲಿ ಮಾರ್ಕೆಟ್ಟು ಕೆಳಗ್ ಬಿದ್ದದ್ದು ಡಬ್ಬಲ್ಲೋ ತ್ರಿಬ್ಬಲ್ಲೋ ಆಯ್ತಲ್ಲಾ? ಅದೇ ದೊಡ್ದು ತಾನೆ? ಹುಚ್ಚಪ್ಪಾ, ಕೇಳು...2009 ರಲ್ಲಿ ಹಾಕಿರೋ ಎಲೆಕ್ಷನ್ನ್ ಪೇಪರ್‌ಗಳನ್ನ 2014 ರಲ್ಲಿ ಹಾಕಿರೋ ಎಲೆಕ್ಷನ್ನ್ ಪೇಪರುಗಳಿಗೆ ಕಂಪೇರ್ ಮಾಡಿ ನೋಡು. ನಮ್ಮ ದೇಶದ ಒಬ್ಬೊಬ್ಬ ರಾಜಕೀಯ ನಾಯಕನ ಪರ್ಸನಲ್ಲ್ ಸ್ವತ್ತು ಅದೆಷ್ಟು ಸಾವಿರ ಪರ್ಸೆಂಟ್ ಬೆಳೆದಿದೆ ಅಂತ? ಒಂದ್ ಕೆಲ್ಸಿಲ್ಲ, ಉದ್ಯಮಾ ಇಲ್ಲಾ, ಹೇಳಿ-ಕೇಳಿ ಸಮಾಜ ಸೇವೆ ರಾಜಕೀಯದ ಕೆಲ್ಸ, ಎಲ್ಲಿ ನೋಡಿದ್ರೂ ಇನ್‌ಫ್ಲೇಷನ್ನ್ ಜಾಸ್ತಿ ಅಗಿರೋ ಹೊತ್ನಲ್ಲಿ ಅದ್ ಹೆಂಗೆ ಐದು ವರ್ಷದ ಹಿಂದೆ ಹತ್ತು ಕೋಟಿ ಡಿಕ್ಲೇರ್ ಮಾಡ್ದೋನು ಈ ಸರ್ತಿ ನೂರು ಕೋಟಿ ಡಿಕ್ಲೇರ್ ಮಾಡ್ತಾನೆ? ಅದನ್ನ್ ಯಾವ್ ಇಂಡೆಕ್ಸಿಗೆ ಹೋಲಿಸ್ತಿ?"
"ಹೌದೋ ಸುಬ್ಬಾ ಎಲ್ಲಿಂದ ಬರುತ್ತೆ ದುಡ್ಡು ಇವ್ರಿಗೆ? ಕೆಲವ್ರದ್ದಂತೂ 760, 800 ಕೋಟಿಗಳಷ್ಟು ಒಟ್ಟು ಮೊತ್ತ ಅಂತಲ್ಲಪ್ಪಾ?"
"ಏಳ್ನೂರು ಕೋಟಿ ಬಾಳಾ ಕಡಿಮೆ ಆಯ್ತು, ಇನ್ನೂ ಸಾವ್ರ ಸಾವ್ರ ಕೋಟಿಗಟ್ಟಲೇ ಇದ್ದೋರು ಇದಾರೆ, ತಿಳ್ಕಾ"
"ಮತ್ತೆ ಇವ್ರ ಹತ್ರ ಇಷ್ಟೊಂದು ದುಡ್ಡು ಇರೋರ್, ರಾಜಕೀಯಾನಾದ್ರೂ ಯಾಕ್ ಮಾಡ್ತಾರೆ, ಸುಮ್ನೆ ತಾವ್ ತಮ್ದು ಅಂತ ಇರಬಾರ್ದಾ?"
"ಅದೇ ವಿಶೇಷ ನೋಡು, ಅದು ನಿಮ್ಮಂತೋರಿಗೆ ಅರ್ಥ ಆಗಲ್ಲ, ಯಾರು ರಾಜಕೀಯಕ್ಕ್ ಬರ್ತಾರೆ ಅಂತ ತಿಳಕಂಡೀ? ದುಡ್ಡ್ ಇಲ್ದೋನ್ ದುಡ್ಡು ಮಾಡೋಕ್ ಬರ್ತಾನೆ, ದುಡ್ಡ್ ಮಾಡ್ದೋನ್ ಅದನ್ನ ಉಳಸ್ ಕೊಳೋಕ್ ಬರ್ತಾನೆ".
"ಅಲ್ಲಾ ಮಾರಾಯಾ, ನಾವ್ ಸುಮ್ನೇ ಊರೂ-ಕೇರೀ, ದೇಶ-ಮನೆ ಬಿಟ್ಟು ಅದನ್ನ ಇದನ್ನ ಓದಿ, ಇತ್ಲಾ ಕಡೇ ಬಂದಿದ್ದೆಲ್ಲಾ ವೇಷ್ಟ್ ಆಯ್ತು ಅನ್ನು, ಸುಮ್ನೇ ಯಾವ್ದಾರ ಪಾರ್ಟಿ ಪಕ್ಷದ ಹೆಸ್ರು ಹಿಡಕೊಂಡ್ ಒಂದಿಪ್ಪತ್ತ್ ವರ್ಷ ಓಡಾಡಿದ್ರೆ ನಾವೂ ಕೋಟಿ-ಕೋಟಿ ಎಣಿಸ್ಬೋದಿತ್ತು..." ಈ ಮಾತಿನಿಂದ ಸುಬ್ಬನಿಗೆ ಸ್ವಲ್ಪ ಸಿಟ್ಟು ಬಂತು ಅಂತ ಅನ್ಸುತ್ತೆ, ನನ್ನ ಮಾತಿನ್ನ ಮಧ್ಯೆ ಹೀಗನ್ನೋದೇ,
"ಅವಾಗ ಇದು ಎಲ್ಲಿಗೆ ಬರುತ್ತೆ ಗೊತ್ತೇನೋ? ನಿನ್ನಂಥಾ ಎನ್ನಾರೈಗಳು ಒಂಥರಾ ಸಪ್ಪೆ ನಾಯ್‌ಗಳು ಇದ್ದಂಗೆ, ಇತ್ಲಾಗ್ ಬೊಗೊಳೋದೂ ಇಲ್ಲ, ಅತ್ಲಾಗ್ ಕಚ್ಚೋದೂ ಇಲ್ಲ. ನಾಯಿ ಅಂದ್ರೆ ನಾಯಿ ಇದ್ದ ಹಾಗೆ ಇರ್‌ಬಕು, ಇವೆಲ್ಲ ನಮಿಗ್ ಬ್ಯಾಡಾ ಅಂತ ಬಿಟ್ಟ್ ವಿರಾಗಿಗಳಾಗ್ ಹೋದ್‌ಮೇಲೆ ಅವಾಗವಾಗ ಇಂಥಾ ಚಿಂತಿ ಯಾಕ್ ಹಚ್‌ಗಂತೀರ್ ಹೇಳು? ಅದರಿಂದ ಏನ್ ಉದ್ದಾರಾಗಿದೆ? ಒಂದ್ಸರ್ತಿ ಮೂಡ್ ಬಂದಾಗ ದುಡ್ಡೇನು ಸರ್ವಸ್ವ ಅಲ್ಲಾ ಅಂತಾ ಬಾಷ್ಣಾ ಬಿಗೀತಿ, ಈಗ ಇಲೆಕ್ಷನ್ನ್ ಅಂಕಿ-ಅಂಶ ನೋಡ್ಕೊಂಡು ದುಡ್ಡೇ ದುಡ್ಡೂ ಅಂತೀ, ನಿನಗೂ ಈ ರಾಜಕಾರ್ಣಿಗಳಿಗೂ ಏನರ ವ್ಯತ್ಯಾಸ ಐತಾ?" ಎಂದು ಎಲೆ-ಅಡಿಕೆ ಹಾಕ್ಕೊಂಡು ಚೆನ್ನಾಗ್ ಉಗದಾ... ಆದ್ರೆ ನಾನು ಬಿಟ್ಟು ಕೊಡ್ಲಿಲ್ಲಾ,
"ನಿಮ್ದು ದೊಡ್ಡ ವ್ಯಾಪಾರೀ ಮನೋಭಾವ್ನೆ ದೇಶ, ನಿನ್ನಂಥೋರ್ ಹತ್ರ ತಪ್ಪೂ-ಸರಿ ಅಂತ ಏನ್ ಮಾತಾಡೋದ್ ಹೇಳು? ಭ್ರಷ್ಟಾಚಾರ ವ್ಯವಸ್ಥೆನಲ್ಲಿ ಪ್ರತಿ ಓಟಿಗೆ ಎರಡೆರಡು ಸಾವ್ರ ಅಂತ ಮಾರ್ಕೋಳ್ಳೋರು ನೀವು" ಅಂತ ನಾನು ಧ್ವನಿ ಜೋರು ಮಾಡಿದೆ,
’ನೋಡು, ಸುಖಾ ಸುಮ್ನೇ ಅನ್ನಬ್ಯಾಡ. ಭ್ರಷ್ಟಾಚಾರ ವ್ಯವಸ್ಥೇ ಎಲ್ಲಾ ಕಡೆ ಇದೆ, ನಿಮ್ಮಲ್ಲಿ ನಾಜೂಕಾಗಿ ಸಗಣೀನ ಫೋರ್ಕ್ ತೊಗೊಂಡ್ ತಿಂತೀರಿ, ಆ ಚೈನಾದವ್ರು ಚಾಪ್ ಸ್ಟಿಕ್ಕ್‌ನಲ್ಲಿ ತಿಂತಾರೆ, ಮತ್ತೊಂದ್ ಕಡೆ ಚಮಚಾದಲ್ಲಿ ತಿಂತಾರೆ, ಆದ್ರೆ ನಮ್ ಕಡೆ ಅವಕಾಶ ಸಿಕ್ಕಾಗ ನೀಟಾಗಿ ಕೈ ಹಾಕಿ ಕಲಸಿಗೊಂಡು ತಿಂತಾರೆ. ಅಲ್ಟಿಮೇಟ್ಲಿ ಅಂತಾ ಏನ್ ವ್ಯತ್ಯಾಸ ಇಲ್ಲ, ಎಲ್ಲಾ ಒಂದೇ"
"ಏನ್ ಅಂತ ಮಾತಾಡ್ತಿಯೋ, ಏನೇ ಆದ್ರೂ ಅಮೇರಿಕದ ಜನ ನಿಮ್ ಥರ ದುಡ್ಡಿಗ್ ಓಟ್ ಹಾಕೋದಿಲ್ಲ, ತಿಳಕಾ..."
"ನೀ ಏನ್ ಮಾತಾಡ್ತಿದಿಯೋ, ಇಷ್ಟು ವರ್ಷ ಅಲ್ಲಿದೀ, ಇಷ್ಟೋ ಗೊತ್ತಾಗಂಗಿಲ್ಲ ಅಂದ್ರೆ ಹೆಂಗೆ? ಗುರುವೇ ಎಲೆಕ್ಷನ್ನ್ ಕ್ಯಾಂಫೇನ್ ಫಂಡು ಅಂಥ ಕಾರ್ಪೋರೇಷನ್ನುಗಳು ಪಕ್ಷಕ್ಕೆ ಕೊಡೋ ದುಡ್ಡೂ ಎಲ್ಲಿಂದ ಬರುತ್ತೆ ಎಲ್ಲೀಗ್ ಹೋಗುತ್ತೆ?"
"ಅದು ಲೀಗಲೈಜ್ಡ್ ವ್ಯವಸ್ಥೆ ಅಲ್ವಾ..."
"ನಿನ್ ತಲೆ, ಲೀಗಲ್ಲು... ನಾವು ನಿಮ್ಮನ್ನ ಸಪೋರ್ಟ್ ಮಾಡ್ತೀವಿ ಅಂತ ಪಾರ್ಟಿಗಳಿಗೆ ದೇಣಿಗೆ ಕೋಡೋದರಲ್ಲಿ ಕಂಪನಿಗಳ ಸ್ವ ಇಚ್ಚೆ ಸ್ವಾರ್ಥ ಒಂದಿಷ್ಟೂ ಇಲ್ಲಾ ಅಂದ್ರೆ ಅವರ್ಯಾಕೆ ಕೊಡ್ತಾರೆ?"
"ಅದು ಕಂಪನಿಗಳ ಲೆಕ್ಕ, ನಮ್ಮ ಜನಸಾಮಾನ್ಯರದ್ದೇನು ಅದ್ರಲ್ಲಿ ಪಾತ್ರ ಇಲ್ಲ"
"ಥೂ ನಿನ್ನ, ಅದೇ ತಪ್ಪು, ನೀನು ಕಂಪನೀನಲ್ಲಿ ಇನ್ವೆಷ್ಟ್ ಮಾಡ್ದಿ ಅಂದ್ರೆ, ಅದ್ರಲ್ಲಿ ನೀನೂ ಶಾಮೀಲೂ ಅಂತ ತಾನೇ ಅರ್ಥ. ನಿನಗೆ ಬೇಕೋ ಬೇಡ್ವೋ ನೀನಿರೋ ವ್ಯವಸ್ಥೆ ನಿನ್ ಸುತ್ಲೂ ಸುತ್ತ್ ಕೊಳ್ಳೋದೇ ಮಾಡರ್ನ್ ಸೋಷಿಯಲ್ಲಿಸ್ಸಮ್ಮು ನೋಡು, ಒಂಥರಾ ಡೊಕೋಮೋ ಅಂಥ ನೆಟ್‌ವರ್ಕ್ ಕರೀತಾನೇ ಇರುತ್ತೆ ಎಲ್ಲ್ ಹೋದ್ರೂ ಬಿಡಂಗಿಲ್ಲ" ಎಂದು "ಡೊಕೋಮೋ..." ಅಡ್ವರ್ಟೈಸ್‌ಮೆಂಟ್ ಇಮಿಟೇಟ್ ಮಾಡಿ ಜೋರಾಗಿ ನಕ್ಕ.
"ಹಂಗಂದ್ರೆ ಎಲೆಕ್ಷನ್ನು ಅಂದ್ರೆ ಬರೀ ರೊಕ್ಕ ಇರೋರ್ ಆಟ ಅನ್ನು, ಇನ್ನು ಸಾಮಾನ್ಯರ ಪಾಲು ನಾಯಿ ಪಾಲು ?"
"ಇದು ಹೆಂಗೆ ಗೊತ್ತಾ, ಇದು ಬೈ ಡೆಫನಿಷನ್ ಯಾರು ಬೇಕಾದ್ರೂ ಭಾಗವಹಿಸೋ ಪ್ರಜಾಪ್ರಭುತ್ವ ವ್ಯವಸ್ಥೇನೇ, ಆದ್ರೆ ದುಡ್ಡಿರೋರು ದೊಡ್ಡಪ್ಪ ಅಷ್ಟೇ. ಒಂಥರಾ ಈ-ಟಿವಿ ಡ್ಯಾನ್ಸ್ ಪ್ರೋಗ್ರಾಂ ತಕಧಿಮಿತ ಬರುತ್ತಲ್ಲ ಹಂಗೆ, ಅವರ ಸ್ಲೋಗನ್ನ್ ಏನ್ ಹೇಳು? ’ಯಾರು ಬೇಕಾದ್ರು ಕುಣೀಬೋದು’ - ಆದ್ರೆ ನಾವು ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ಕೊಡ್ತೀವಿ ಅಂತ ಹಂಗೆ.
"ಸರಿ ಬಿಡು, ಇನ್ನೇನು ಎಲೆಕ್ಷನ್ನು ಮುಗಿಯುತ್ತೇ, ಅಮೇಲೇ ಕುದುರೆ ವ್ಯಾಪಾರ ಶುರು, ಒಬ್ಬೊಬ್ಬ ಎಮ್ಮೆಲ್ಲೆಗಳನ್ನ ಎಂಪಿಗಳನ್ನ ಕೊಡೊ-ಕೊಳ್ಳೋ ಆಟ ನಡೆಯುತ್ತೇ" ಅಂದೆ,
"ಈ ಎಮ್ಮೆಲ್ಲೆಗಳನ್ನ ಹೆಂಗೆ ಕೊಳ್ತಾರೆ ಅನ್ನೋದಕ್ಕೆ ತೆಲುಗಿನಲ್ಲಿ ಲೀಡರ್ ಅಂತ ಒಂದು ಸಿನಿಮಾ ಇದೆ ನೋಡು, ಅದ್ರಲ್ಲಿ ಒಂದು ಫ್ಯಾಟ್ ಕೀ ಕೊಟ್ಟು ಅದ್ರಲ್ಲಿರೋ ಎಲ್ಲಾ ಬೀರು ಅಲ್ಮೇರಾಗಳಲ್ಲಿ ನೋಟುಗಳನ್ನ ತುಂಬಿ ಇಟ್ಟಿರ್ತಾರೆ, ಅಂತದನ್ನ ಬ್ಯಾಡ ಅನ್ನೋದಕ್ಕೆ ಬಾಳಾ ಗಟ್ಟಿ ಎದೆ ಬೇಕು, ಸೋ ಐ ಡೋಂಟ್ ಬ್ಲೇಮ್ ದೆಮ್"
"ಸರಿ, ಟೈಮ್ ಆಯ್ತು...ಈ ಎಲೆಕ್ಷನ್ನಲ್ಲಿ ನಿನ್ ಪ್ರಿಡಿಕ್ಷನ್ನ್ ಏನು, ಕರ್ನಾಟಕದಲ್ಲಿ ಯಾರ್ ಬರ್ತಾರೆ, ದೇಶದ ಚುಕ್ಕಾಣೀ ಯಾರ್ ಹಿಡೀತಾರೆ?"
"ನನ್ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ಕಷ್ಟ, ಗಣಿ ದೊರೆಗಳ ಸವಾಸದಿಂದ ಬಾಳ ಗಬ್ಬಿಟ್ಟ್ ಹೋಗವ್ರೆ ನಮ್ ನಾಯಕ್ರು. ಅಲ್ದೇ ಆಳೋ ಪಕ್ಷದ ಪರವಾಗಿ ಕಾಂಗ್ರೆಸ್ ಮೆಜಾರಿಟಿ ಬರ್ಬೋದು. ಆದ್ರೆ ದೇಶದಲ್ಲಿ ಸ್ವಲ್ಪ ಮೋದಿ ಅಲೆ ನಡೀತಾ ಇದೆ. ಏನಾಗತ್ತೋ ಗೊತ್ತಿಲ್ಲ"
"ಮತ್ತೇ, ಆಪೂ... ಪಾಪೂ, ಇವೆಲ್ಲ?"
"ಏ, ತೆಗಿ ತೆಗಿ, ಆಪ್ ಬರ್ಬೇಕು ಅಂದ್ರೆ, ಇನ್ನೊಂದು ಇಪ್ಪತ್ತೈದು ವರ್ಷಾನಾದ್ರೂ ಬೇಕು, ಒಬ್ಬ ಕಪಾಳ ಮೋಕ್ಷದ ನಾಯಕನಿಂದ ಇಡೀ ದೇಶದ ರಾಜ್‌ಕಾರ್ಣ ಬದಲಾಗೋಕ್ಕೆ ಸಾಧ್ಯವೇ?"
"ಯಾಕ್ ಆಗ್‌ಬಾರ್ದು?"
"ಅದೇ ನಿಂಗೊತ್ತಾಗೋಲ್ಲ ಅನ್ನೋದು. ದುಡ್ಡಿಗೆ ಓಟ್ ಮಾರ್ಕೊಳ್ಳೋ ಜನರಲ್ಲಿ ಒಂಥರ ಎನ್‌ಟೈಟಲ್ಲ್‌ಮೆಂಟ್ ಬರುತ್ತೆ. ಅದ್ಕೇ ನಮ್ ಜನ ಗಾದೆ ಮಾಡಿರೋದು - ಉಪ್ಪು ತಿಂದ ಮನೆಗೆ ಎರಡು ಬಗೆಯ ಬೇಡಾ - ಅಂತ" ಎಂದು ದೊಡ್ಡದಾಗಿ ನಕ್ಕ.
"ಮತ್ತೇನಪ್ಪಾ ಸಮಾಚಾರ..."
"ಮತ್ತೇನಿಲ್ಲ ಗುರುವೇ, ಅಯ್ಯೋ ಅಡಿಕೇ ಮಂಡಿಗ್ ಹೋಗ್ಬೇಕು, ನಿನ್ ಹತ್ರ ಮಾತಾಡಿ ಹೊತ್ ಹೋಗಿದ್ದೇ ಗೊತ್ತಾಗಿಲ್ಲ, ಅವಾಗವಾಗ ಫೋನ್ ಮಾಡ್ತಾ ಇರು" ಎಂದು ನನ್ನ ಉತ್ತರಕ್ಕೂ ಕಾಯ್ದೆ ಫೋನ್ ಇಟ್ಟೇಬಿಟ್ಟ...ನಾನು ಒಂಥರಾ ಟಿ.ವಿ. ನೈನ್ ಬ್ರೇಕಿಂಗ್ ನ್ಯೂಸ್ ನೋಡಿದ ಶಾಕ್‌ನಲ್ಲಿ ಆಫೀಸಿನ ಕೆಲಸಕ್ಕೆ ತಿರುಗಿದೆ.

5 comments:
ಎನ್ನಾರೈಗಳು ಒಂದು ರೀತಿ ಸಪ್ಪೆಗಳೆ ಹಹಹ... ಚೆನ್ನಾಗಿದೆ ಸಂಭಾಷಣೆ. ಏನು ಓದದೆ ಕೋಟಿಗಟ್ಟಲೆ ಆಸ್ತಿ ಮಾಡಬಹುದು...
ಎನ್(ನಾಯ)ರೈ...ಅಹಹ ನಿಜಕೂ ಚನ್ನಾಗಿದೆ ಲೇಖನ. ದೇಶದಲ್ಲಿ ಬಡತನ ಕೇವಲ ಬಡವರಿಗೆ...ಅಂದರೆ ಸುಮಾರು 10 ಶೇ ದೇಶದ ಪ್ರಜೆ ಕೋಟ್ಯಾಧಿಪ...ನಾವೇ ಅತ್ತ ದೇಶಕ್ಕೂ ಲೆಕ್ಕಕ್ಕಿಲ್ಲ, ತಂದೆ-ತಾಯಿಗೂ ಸಲ್ಲ, ಇಲ್ಲಿ ದುಡಿದು ಅಲ್ಲಿ ಲಂಚ ತಿನಸಿ ಅವ್ರನ್ನ ಬೆಳೆಸಿ...ತ್ರಿಶಂಕು ಆಗ್ತಿದ್ದೀವಿ.
ವಾವ್ !!! ಸುಬ್ಬನ್ನ ನೋಡಿ ಎಷ್ಟು ದಿನವಾಗಿತ್ತು. ಮುಂಚೆ thatskannada ದಲ್ಲಿ ಹಾಗು ಹೇಗೂ ಸಿಕ್ತ ಇದ್ದ.
ಅವನ ಮಾತು ಮತ್ತು ಮೊನಚಾದ ವ್ಯಂಗ್ಯ ಇಂದಿನ ಸಮಾಜದ ದಿಕ್ಸುಚಿ. ಆದರೆ ಹಾಳಾದೊನು ಒಮ್ಮೊಮ್ಮೆ ರಾತ್ರಿಯೆಲ್ಲಾ ಯೋಚಿಸೋ ಹಾಗೆ ಮಾಡ್ತಾನೆ.
Anyway ಅವನ್ನ ಮಾತಾಡಿಸುತ್ತಾ ಇರಿ
ಸತ್ಯ
Welcome back Subba :-) :-)
(Liked the cowdung reference - very apt)
- Jayashree
Good article..
http://www.hotel-booking-in.com
Post a Comment