Monday, February 12, 2007

ರಾಜ್ ಸಮಾಧಿ

ಪ್ರತೀ ಸಾರಿ ರಾಜ್‌ಕುಮಾರ್ ಸಮಾಧಿ ಹತ್ತಿರ ಹೋಗಿ ಬರಬೇಕು, ಅವರು ಜೀವಂತವಾಗಿದ್ದಾಗಲಂತೂ ನನಗೆ ನೋಡುವ ಭಾಗ್ಯ ಸಿಗಲಿಲ್ಲ ಎಂದು ಅಂದುಕೊಂಡಾಗಲೆಲ್ಲ ಒಂದಲ್ಲ ಒಂದು ರೀತಿಯಲ್ಲಿ ಕಾರ್ಯಕ್ರಮ ಬದಲಾಗಿ ಹೋಗೋದು. ಅದೂ ಅಲ್ಲದೆ ಬೆಂಗಳೂರಿನಲ್ಲಿ ಎಲ್ಲಿಂದ ಎಲ್ಲಿಗಾದರೂ ಹೋಗಿ ಬಂದರೆ ಕೊನೇ ಪಕ್ಷ ಅದಕ್ಕೋಸ್ಕರ ಒಂದರ್ಧ ದಿನವಾದರೂ ಹೋಗದೇ ಇರೋದಿಲ್ಲ. ನನ್ನ ಅದೃಷ್ಟಕ್ಕೆ ಜನವರಿ ಹನ್ನೆರಡರಂದು ಬೆಂಗಳೂರಿನಿಂದ ಕೆಜಿಎಫ್‌ಗೆ ಹೋಗೋದಕ್ಕೆ ಟಾಟಾ ಸುಮೋ ಬುಕ್ ಮಾಡಿದಾಗ ನಮಗೆ ಸಿಕ್ಕ ಡ್ರೈವರ್ ರಾಜ್‌ಕುಮಾರ್ ಮನೆಯಲ್ಲಿ ಬಟ್ಟೆ ಇಸ್ತ್ರಿ ಹಾಕಿಕೊಂಡಿದ್ದವನೆಂದು ಅವನಿಂದಲೇ ತಿಳಿಯಿತು. ಹಾಗೇ ಕೆಜಿಎಫ್‌ನಿಂದ ಹಿಂತಿರುಗುವಾಗ ಮಧ್ಯಾಹ್ನ ಪೀಣ್ಯಾದ ಹತ್ತಿರವಿರುವ ಕಂಠೀರವ ಸ್ಟುಡಿಯೋದ ಆವರಣದಲ್ಲಿ ಸಿಕ್ಕ ಚಿತ್ರಗಳಿವು.

ಪ್ರತಿ ತಿಂಗಳು ಹನ್ನೆರಡರಂದು ರಾಜ್‌ಕುಮಾರ್ ಸಮಾಧಿ ಬಳಿ ವಿಶೇಷ ಪೂಜೆ ಇರುತ್ತಂತೆ, ಆದ್ದರಿಂದ ರಾಜ್ ಅವರ ಸಮಾಧಿಯನ್ನು ವಿಶೇಷವಾಗಿ ಅಲಂಕರಿಸಿದ್ದರು. ರಿಂಗ್ ರೋಡಿಗೆ ಅಂಟಿಕೊಂಡೇ ಇರುವ ಆವರಣದಲ್ಲಿ ರಾಜ್ ಸಮಾಧಿ ಎದ್ದು ಕಾಣುತ್ತಿತ್ತು, ಸುತ್ತಲೂ ನಾನಾ ರೀತಿಯ ಬ್ಯಾನರ್‌ಗಳು ಮುಖ ಚಾಚಿಕೊಂಡಿದ್ದವು.

ಕಳೆದ ಏಪ್ರಿಲ್‌ನಲ್ಲಿ ನಡೆದ ಹಿಂಸಾಚಾರವನ್ನು ನೆನೆಸಿಕೊಂಡ ನನಗೆ ಈ ವರ್ಷ ಏಪ್ರಿಲ್ ಹನ್ನೆರಡರಂದು ಬೆಂಗಳೂರಿನಲ್ಲಿ ಗಲಾಟೆಗಳಾಗದಿದ್ದರೆ ಸಾಕು ಎಂದೆನಿಸಿತು.






4 comments:

PU the person said...

Wonderful!!! Staying so close never made an attempt to visit this place. Its beautiful. :) You should stay away to realise the importance of your place i guess :)

Anonymous said...

"ಅಕ್ಕ" ದವರು ರಾಜ್‍ಗೆ ಶ್ರದ್ಧಾಂಜಲಿ ಅರ್ಪಿಸಿರುವುದನ್ನು ನೋಡಿ ಖುಷಿಯಾಯಿತು.

Satish said...

ಪುದಪ (pu the person),

ದೂರ ಇರಬೇಕು ಎಂದೇನಿಲ್ಲ, ಹತ್ತಿರವಾಗ ಬೇಕೆಂದು ದೂರ ಹೋದರೆ ಬಹುದೂರ ಹೋಗಿ ಬಿಡುವ ಸಂಭವನೀಯತೆಯೇ ಹೆಚ್ಚು!

Satish said...

sritri,

ಹೌದು ನೋಡಿ, ನನಗೂ ಖುಷಿಯ ಜೊತೆ ಆಶ್ಚರ್ಯವೂ ಆಯಿತು. :-)