ಕ್ರಿಸ್‌ಮಸ್ ಲೈಟೂ ಕ್ಲೀನ್ ಶೇವನ್ ಡ್ಯಾಡೂ...
೨೦೦೧ ನೇ ಸೆಪ್ಟೆಂಬರ್ ಹೊತ್ತಿಗೆ ನಾವಿನ್ನೂ ವಾಷಿಂಗ್ಟನ್ ಡಿಸಿ ಪ್ರಾಂತ್ಯದ ಹತ್ತಿರವೇ ಇದ್ದೆವು. ವರ್ಜೀನಿಯಾದ ಅಲೆಕ್ಸಾಂಡ್ರಿಯಾದಿಂದ ಡಿಸಿಯ ಜಾರ್ಜ್‌ಟೌನ್ ಯೂನಿವರ್ಸಿಟಿಗೆ ರೆಫೆರೆನ್ಸ್ ಪುಸ್ತಕಗಳಿಗೆಂದು ಹೋಗುತ್ತಿದ್ದ ನಮಗೆ ಅಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮುಸ್ಲಿಮ್ ಯುವಕ ಯಾವಾಗಲೂ ಕಣ್ಣಿಗೆ ಬೀಳುತ್ತಿದ್ದ. ಈತ ನಮಗೆ ಬೇಕಾದಷ್ಟು ಸಲ ನಾವು ಡಿಸಿ ಗೆ ಹೋಗುವ ಟ್ರೈನ್‌ನಲ್ಲಿ ಸಿಕ್ಕಿದ್ದೂ ಇದೆ. ಅಮೇರಿಕಾದ ಮೇಲೆ ಸೆಪ್ಟೆಂಬರ್ ೧೧ರ ಭಯೋತ್ಪಾದಕರ ಧಾಳಿ ನಡೆದ ಕೆಲವು ದಿನಗಳಲ್ಲಿ ಅಲ್ಲಲ್ಲಿ ಹೇಟ್‌ಕ್ರೈಮ್‌ಗಳ ಬಗ್ಗೆ ವರದಿಗಳು ಬರುತ್ತಿದ್ದು, ಸ್ಥಳೀಯರ ಹಾಗೆ ಎಷ್ಟೋ ಜನ ಭಾರತ ಅಥವಾ ಇತರೆ ದೇಶದ ಮೂಲದಿಂದ ಬಂದವರು ತಮ್ಮ ತಮ್ಮ ಕಾರು ಮನೆಯ ಮುಂದೆ ಅಮೇರಿಕನ್ ಧ್ವಜವನ್ನು ಹಾಕಿಕೊಳ್ಳುತ್ತಿದ್ದುದೂ ಕಂಡು ಬರುತ್ತಿದ್ದವು. ಸ್ಥಳೀಯರು ಸಾಲಿಡ್ಯಾರಿಟಿಗೆಂದು ಅಮೇರಿಕ ಧ್ವಜಗಳನ್ನು ತಮ್ಮ ಕಾರಿಗೆ ತಗುಲಿಸಿಕೊಂಡಿದ್ದರೆ ವಲಸೆ ಬಂದವರು ಹಲವಾರು ಕಾರಣಗಳಿಗೆ ಆ ರೀತಿ ತೋರಿಸಿಕೊಳ್ಳುತ್ತಿದ್ದುದು ಎದ್ದು ಕಾಣುತ್ತಿತ್ತು. ಯಾರೇ ತಮ್ಮ ತಮ್ಮ ಸ್ವರೂಪಗಳಲ್ಲಿ ಅದೇನೇ ಬದಲಾವಣೆಗಳನ್ನು ಮಾಡಿಕೊಂಡರೂ ಈ ಲೈಬ್ರರಿಯಲ್ಲಿ ಕೆಲಸ ಮಾಡುವ ಯುವಕ - ಆರು ಅಡಿಗಿಂತಲೂ ಎತ್ತರದ ನಿಲುವು, ಉದ್ದನೆಯ ಗಡ್ದದಾರಿ, ಯಾವಾಗಲೂ ಬಿಳಿ ನಿಲುವಂಗಿ (ಕುರ್ತಾ) ಧರಿಸಿರುವ, ಅವನದ್ದೇ ಆದ ಆಳವಾದ ಶುಭ್ರ ಕಣ್ಣುಗಳಲ್ಲಿ ಅದಮ್ಯ ಶಾಂತಿಯನ್ನು ಅಡಗಿಸಿಕೊಂಡು - ತಾನಾಯಿತು ತನ್ನ ಕೆಲಸವಾಯಿತು ಎಂದು ಬಾಹ್ಯ ನೋಟಕ್ಕೆ ನಿರ್ಲಿಪ್ತವಾಗಿದ್ದುದು ನನಗಂತೂ ಬಹಳ ಆಶ್ಚರ್ಯವನ್ನುಂಟುಮಾಡಿತ್ತು. ಆಗಷ್ಟೇ ಮಾಧ್ಯಮಗಳಲ್ಲಿ ತೋರಿಸುತ್ತಿದ್ದ ಬಿನ್ ಲಾಡೆನ್ ಚಿತ್ರಗಳಿಗೂ ಈ ಯುವಕನ ಗುರುತಿಗೂ ಬಹಳಷ್ಟು ಸಾಮ್ಯತೆಗಳಿದ್ದವು. ಅಪರೂಪಕ್ಕೆ ಟ್ರೈನ್‌ನಲ್ಲಿ ಸಿಕ್ಕುವ ಈತನನ್ನು ಸುತ್ತಲಿನ ಜನರು ಕಣ್ಣಿಟ್ಟು ನೋಡುವುದನ್ನು ನೋಡಿ ನನಗೇ ಮುಜುಗರವಾಗುತ್ತಿತ್ತು. ತನ್ನ ಸುತ್ತ ಮುತ್ತಲು ಅದೆಷ್ಟೇ ಕೋಲಾಹಲ ನಡೆದುಕೊಂಡಿದ್ದರೂ ಈತ ತನ್ನತನವನ್ನು ಬಿಡದೇ ಸಹಜವಾಗಿದ್ದುದು ನನಗೆ ಇಂದಿಗೂ ಆಶ್ಚರ್ಯವನ್ನು ಉಂಟು ಮಾಡುತ್ತದೆ ಜೊತೆಗೆ ಆತನ ಮೇಲಿನ ಅಭಿಮಾನವೂ ಹೆಚ್ಚುತ್ತದೆ.
***
ನಾವು ಜರ್ಸಿ ಸಿಟಿಯಿಂದ ಪ್ಲಾಂಡರ್ಸ್‌ಗೆ ಬಂದ ವರ್ಷ ಇದು. ನಾವಿರುವ ಮನೆಯ ಮೂಲ ಓನರ್ ಕ್ರಿಸ್‌ಮಸ್ ಸಮಯದಲ್ಲಿ ಬಹಳ ಚೆನ್ನಾಗಿ ಮನೆಯ ಹೊರಗೆ ಮತ್ತು ಒಳಗೆ ಲೈಟ್ ಹಾಕಿ ಅಲಂಕಾರ ಮಾಡಿರುತ್ತಿದ್ದರಂತೆ. ನಮಗೆ ಗೊತ್ತಿರುವ ಎಷ್ಟೋ ಜನ ಸ್ಥಳೀಯರು - ’ನೀವು ಕ್ರಿಸ್‌ಮಸ್ ಸೆಲೆಬ್ರೇಟ್ ಮಾಡುವುದಿಲ್ಲವೇ?’, ’ಹಿಂದಿನವರು ಚೆನ್ನಾಗಿ ಲೈಟ್ ಅಲಂಕಾರ ಮಾಡಿರುತ್ತಿದ್ದರು!’ ಎನ್ನುವ ಅರ್ಥ ಬರುವ ಮಾತುಗಳನ್ನಾಡಿದ್ದಾರೆ. ಜೊತೆಗೆ ಥ್ಯಾಂಕ್ಸ್‌ಗಿವಿಂಗ್ ಗಿಂತಲೂ ಮುಂಚೆಯೇ ಬರುವ ದೀಪಾವಳಿ ಸಂದರ್ಭದಲ್ಲಿ ನಾವು ಹೊರಗಡೆ ಹೊತ್ತಿಸಿದ ಲೈಟ್, ದೀಪಗಳನ್ನು ಪ್ರಶ್ನಿಸಿಯೂ ಇದ್ದಾರೆ. ನಮ್ಮ ನಂಬಿಕೆ ಸಂಪ್ರದಾಯಗಳ ಪ್ರಕಾರ ನಾವು ನಮ್ಮ ನಮ್ಮ ಹಬ್ಬ ಹರಿದಿನಗಳಿಗೆ ಬೇಕಾದ ಅಲಂಕಾರ ಮಾಡುವುದು ನಮಗೆ ಸೇರಿದ್ದು, ಜೊತೆಗೆ ನಮ್ಮ ನೆರೆಹೊರೆಯ ಆಚಾರ-ವಿಚಾರಗಳಿಗೆ ತಕ್ಕಂತೆ ಸ್ಪಂದಿಸಬೇಕಾದದ್ದೂ ನಮ್ಮ ಕರ್ತವ್ಯಗಳಲ್ಲೊಂದು ಎಂದು ನಂಬಿ ಥ್ಯಾಂಕ್ಸ್‌ಗಿವಿಂಗ್‌ನಿಂದ ಇಂದಿನವರೆಗೂ ಹೊರಗಡೆ ದೀಪಾಲಂಕಾರವನ್ನು ಮಾಡಿ ಅದನ್ನು ಉರಿಸಿಕೊಂಡೇ ಬಂದಿದ್ದೇವೆ. ಹಿಂದಿನ ಮನೆಯ ಮಾಲಿಕನಿಗೆ ಹೋಲಿಸಿದರೆ ನಮ್ಮ ಅಲಂಕಾರವೇನೂ ಇರಲಾರದು, ನಾವು ಕ್ರಿಸ್‌ಮಸ್ ಟ್ರೀ ಅನ್ನೂ ಇಟ್ಟಿಲ್ಲ ಆದರೆ ನಮ್ಮ ಕೈಲಾದಂತೆ ಸುತ್ತಲಿನವರಲ್ಲಿ ಒಂದಾಗಿ ಇರುವ ಪ್ರಯತ್ನವಷ್ಟೇ.
***
ನಮ್ಮ ಆಫೀಸಿನಲ್ಲಾಗಲೀ ಅಥವಾ ಹೊರಗಡೆ ಮತ್ತಿನ್ನೆಲ್ಲಾದರೂ ಸರದಾರ್‌ಜೀ ಗಳನ್ನು ನೋಡಿದಾಗ ಅವರ ಮೇಲೆ ಪ್ರಶಂಸೆಯೂ ಹಾಗೂ ಹಲವಾರು ಪ್ರಶ್ನೆಗಳು ಮನದಲ್ಲೇಳುತ್ತವೆ. ನಿಜವಾಗಿಯೂ ಪಗಡಿ ಧಾರಣೆ ಮಾಡಿರುವ ಮೀಸೆ-ಗಡ್ಡ-ತಲೆ ಕೂದಲನ್ನು ಹುಟ್ಟಿದಂದಿನಿಂದ ಬೋಳಿಸದಿರುವ ಇವರನ್ನು ತಮ್ಮ ಸಂಪ್ರದಾಯ ಹಾಗೂ ತಮ್ಮ ನೆರೆಹೊರೆ ಇವುಗಳ ನಡುವೆ ತೂಗಿ ನೋಡಿದಾಗ ದೈಹಿಕವಾಗಿ ಕೂದಲನ್ನು ಬೆಳೆಸಿಕೊಂಡು ಅದನ್ನು ಕಟ್ಟುನಿಟ್ಟಾಗಿ ಧರಿಸಿಕೊಂಡಿರುವುದು ಹುಟ್ಟಿದಂದಿನಿಂದ ಬಂದ ಅಭ್ಯಾಸವಾದರೂ ನಾವಿರುವ ನೆರೆಹೊರೆಯಲ್ಲಿ ’ಕ್ಲೀನ್‌ಶೇವನ್’ ಜನರಿಗೆ ಸಿಗುವ ಪ್ರಾಶಸ್ತ್ಯಗಳನ್ನು ನೋಡಿದಾಗ ಹಲವಾರು ರೀತಿಯಲ್ಲಿ ತರ್ಕಿಸಬಹುದು. ವಾಷಿಂಗ್ಟನ್ ಡಿಸಿಯ ಲೈಬ್ರರಿ ನೌಕರನಾಗಲೀ, ಅನ್‌ಶೇವನ್ ಸರ್ದಾರ್‌ಜೀಗಳಾಗಲೀ ನಿಜವಾಗಿಯೂ ತಮ್ಮ ಪರಂಪರೆಯನ್ನು ಪ್ರತಿಕ್ಷಣವೂ ಹೊತ್ತುಕೊಂಡೇ ತಿರುಗುತ್ತಾರೆ ಅನ್ನಿಸೋದಿಲ್ಲವೇ?
ನಾವು ಕಂಡ ನಮ್ಮ ದಕ್ಷಿಣ ಭಾರತದ ಆಚರಣೆ/ವಿಧಿಗಳ ಪ್ರಕಾರ ನಮ್ಮಲ್ಲಿನ ಗಂಡಸರು ಮುಖದ ಮೇಲೆ ಮೀಸೆಯೊಂದನ್ನು ಇಟ್ಟುಕೊಳ್ಳುವುದು ಸಹಜ. ಮೀಸೆಯ ಹೊರತಾಗಿ ಗಡ್ಡವೇನಾದರೂ ಇದ್ದರೆ ಅದು ರೋಗಿಗಳ, ವೈರಾಗಿಗಳ, ಸೋಮಾರಿಗಳ ಹಾಗೂ ಬುದ್ಧಿಜೀವಿಗಳ ಸೂಚಕವಾಗಿತ್ತಷ್ಟೇ. ನಮ್ಮಲ್ಲಿನ ಯುವಕರನ್ನು ಅವರು ಎಂದಾದರೂ ಮೀಸೆಯನ್ನು ಬೋಳಿಸಿಕೊಂಡರೆ ಉತ್ತರ ಭಾರತದ ಅಥವಾ ಹಿಂದಿ ಸಿನಿಮಾಗಳ ಹೀರೋಗಳಿಗೆ ಹೋಲಿಸಿ ಜನರು ಛೇಡಿಸುತ್ತಿದ್ದುದು ಸಾಮಾನ್ಯವಾಗಿತ್ತು. ಈಗಲೂ ಸಹ ಅಮೇರಿಕದಲ್ಲಿಯೂ ದಕ್ಷಿಣ ಭಾರತ ಮೂಲದ ಯುವಕರು ಮೀಸೆಯನ್ನು ಇಟ್ಟುಕೊಂಡಿರುವುದು ನಮ್ಮ ಕಣ್ಣಿಗೆ ಬೀಳುತ್ತದೆ, ಅದರ ಮತ್ಯಾವುದೇ ವೇರಿಯೇಷನ್ನುಗಳೂ ಸಹ ಉಳಿದ ಕಡೆಗಳಿಂದ ಅವರವರು ಪಡೆದ ಇನ್‌ಫ್ಲುಯೆನ್ಸ್‌ಗಳ ಮೇಲೆ ಅವಲಂಭಿತವಾರುತ್ತದೆ. ಭಿನ್ನ ಪ್ರಪಂಚ ಹಾಗೂ ಸಂಸ್ಕೃತಿಯ ಸಂಗಮದಲ್ಲಿ ಬೆಳೆಯುವ ನಮ್ಮ ಮುಂದಿನ ತಲೆಮಾರಿಗೆ ಅನ್ನಿಸಬಹುದು - ನಮ್ಮ ತಂದೆಯೂ ಇಲ್ಲಿಯವರ ಹಾಗೆ ಕ್ಲೀನ್ ಶೇವನ್ ಯಾಕಿರಬಾರದೆಂದು. ಬಾಹ್ಯವಾಗೇಳುವ ಅಂತಹ ಪ್ರಶ್ನೆಗಳಿಗೆ ನಮ್ಮ ಮುಖದ ಮೀಸೆ ಏಕಿದೆ ಎಂದು ಹಲವಾರು ರೀತಿಯ ವಿವರವನ್ನು ಕೊಡಬಹುದಾದರೂ ಮನದೊಳಗಿನ ವ್ಯಾಪಾರವನ್ನು ನಾವು ಯಾವತ್ತಿಗೂ ನಿಯಂತ್ರಿಸಲಾಗೋದೇ ಇಲ್ಲ.
***
ನಾನೂ ಒಂದು ಕ್ರಿಸ್‌ಮಸ್ ಟ್ರೀ ಅನ್ನು ಇಡಬಲ್ಲೆ, ಅದನ್ನು ವಿಧವಿಧವಾಗಿ ಅಲಂಕಾರ ಮಾಡಬಲ್ಲೆ, ಅದನ್ನು ದುಡ್ಡಿನಿಂದಲೇ ಮುಚ್ಚಬಲ್ಲೆ, ಅದರ ಕೆಳಗೆ ಗಿಫ್ಟ್‌ಗಳನ್ನು ಥರಥರವಾಗಿ ಪೇಪರ್‌ಗಳಿಂದ ರ್ಯಾಪ್ ಮಾಡಿ ಅದನ್ನು ಸ್ಯಾಂಟಾಕ್ಲಾಸ್ ಹೆಸರಿನಲ್ಲಿ ಮಕ್ಕಳಿಗೆ ಹಂಚಬಲ್ಲೆ. ಆದರಿಂದ ನಮ್ಮ ಮನೆಯ ಕ್ರಿಸ್‌ಮಸ್ ಟ್ರೀಗೂ ಡಿಪಾರ್ಟ್‌ಮೆಂಟ್ ಸ್ಟೋರ್ ಕ್ರಿಸ್‌ಮಸ್ ಟ್ರೀಗೂ ಏನು ವ್ಯತ್ಯಾಸ ಉಳಿಯಿತು? ನಮ್ಮ ಮನೆಯಲ್ಲಿ ಅಲಂಕೃತಗೊಂಡ ಟ್ರೀ ನೋಡಲು ಚೆನ್ನಾಗಿರಬಹುದು, ಆದರೆ ಅದರಲ್ಲಿ ಯಾವುದೇ ಪರಂಪರೆಯಿಲ್ಲ, ಸಂಪ್ರದಾಯವಿಲ್ಲ, ಹಿನ್ನೆಲೆಯಿಲ್ಲ. ಶಾಲೆಯಲ್ಲಿ ನಮ್ಮ ಮಕ್ಕಳನ್ನು ಅವರ ಸಹಪಾಠಿಗಳು ಕೇಳಿಯಾರು ಎಂಬ ಒಂದೇ ಕಾರಣಕ್ಕೆ, ನಾವು ನಮ್ಮ ನೆರೆಹೊರೆಯವರಲ್ಲಿ ಮಿಳಿತವಾಗಿ ಬದುಕಬೇಕು ಎಂಬುದಕ್ಕೆ ನಾವು ಇನ್ನೂ ಏನೇನನ್ನು ತ್ಯಾಗ ಮಾಡಬೇಕು, ಎಷ್ಟರ ಮಟ್ಟಿಗೆ ನಮ್ಮ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎನ್ನುವ ಪ್ರಶ್ನೆಗೆ ಅಮೇರಿಕದಲ್ಲೇ ಬೇಕಾದಷ್ಟು ಕಡೆ ಇರುವ ಭಾರತೀಯ ಮೂಲದ ಜನರು ಬೇಕಾದಷ್ಟು ಉತ್ತರಗಳನ್ನು ಕಂಡುಕೊಳ್ಳಬಹುದು. ನ್ಯೂ ಜೆರ್ಸಿ, ನ್ಯೂ ಯಾರ್ಕ್ ಅಂತ ಪ್ರದೇಶಗಳಲ್ಲಿ ಹೆಚ್ಚು ಜನರಿರುವ ದೇಸೀ ಸ್ಥಳಗಳಲ್ಲಿ ನಮ್ಮ ಆಚರಣೆಗಳಿಗೆ ಸಂವೇದನೆಗಳಿಗೆ ಆದ್ಯತೆ ಪ್ರಾಧಾನ್ಯತೆ ಸಿಕ್ಕರೆ ಅದೇ ಅಮೇರಿಕದ ಉಳಿದೆಡೆ ಹೆಚ್ಚು ಭಾರತೀಯರಿಲ್ಲದ ಕಡೆ ಅಂತಹ ಪ್ಲೆಕ್ಸಿಬಿಲಿಟಿ ಇರದೇ ಇರಬಹುದು. ನಾವೆಲ್ಲಿ ಹೋದರೂ ಅಲ್ಲಿಯವರಾಗಿರುವುದು ಒಂದು ರೀತಿಯ ಸೂಕ್ಷ್ಮ, ನಾವು ಭಿನ್ನರಾಗಿದ್ದುಕೊಂಡೇ ನಮ್ಮ ತನವನ್ನು ಬೆಳೆಸಿ ಪೋಷಿಸಿಕೊಂಡು ಹೋಗುವುದು ಮತ್ತೊಂದು ರೀತಿಯ ಅಗತ್ಯ.
ನಮ್ಮತನವೆನ್ನುವುದನ್ನು ನಾವು ಬಿಡುವುದೋ ಹಿಡಿದುಕೊಳ್ಳುವುದೋ ಎನ್ನುವುದು ಕೆಲವರಿಗೆ ಅನಿವಾರ್ಯತೆಯ ಪ್ರಶ್ನೆ, ಇನ್ನು ಕೆಲವರಿಗೆ ಅದು ಬದಲಾವಣೆಗಳ ಅಗತ್ಯ - ಬೇರೆಲ್ಲಿ ಹೇಗಾದರೂ ಇರಲಿ ನಮ್ಮ ಮನೆಯಲ್ಲಿನ ಅನ್-ಕ್ಲೀನ್‌ಶೇವನ್ ಡ್ಯಾಡ್ ಬದಲಾಗದಿದ್ದರೆ ಸಾಕು!
4 comments:
ಸತೀಶ್,
ತುಂಬ ಕ್ಲಿಷ್ಟಕರವಾದ ವಿಷಯವನ್ನು ಮೂರು illustrationsಗಳ ಮೂಲಕ ಸೂಕ್ಷ್ಮವಾಗಿ ಬರೆದಿದ್ದೀರಾ?
ಕೇಶವ (www.kannada-nudi.blogspot.com)
ಕೇಶವ್,
ಧನ್ಯವಾದಗಳು.
ನೀವು ನಿಮ್ಮ ಮನೆಯಲ್ಲಿ ಕ್ರಿಸ್‌ಮಸ್ ಟ್ರೀ ಇಡ್ತೀರೋ ಹೇಗೆ?! :-)
Hello, there. This is a quick summary of the goodness of buying wow gold from wow gold reviews, wow power level reviews, the World of Warcraft network of trust wow power leveling reviews, warcraft power leveling reviews and understanding for WoW PL'ers warcraft gold reviews. Come to here for wow leveling reviews. If you are in the mood for Final Fantasy XI gil, then please go to FFXI Gil reviews, Buy FFXI Gil reviews, FFXI Gil Sale reviews, Cheapest FFXI Gil reviews, Buy Cheap FFXI Gil reviews, final Fantasy XI Gil reviews, Cheap FFXI Gil reviews.
Conan Barbarian
Conan the Barbarian Wallpapers
Age of Conan Classes
Game multiplayer online rpg
multiplayer online game like runescape
free online multiplayer game
age of conan gold
aoc gold
Age of Conan Torrent
Age of Conan Trial
Age of Conan Free Trial
Hibernia
Midgard
Albion
DAOC 3 Accounts
DAOC How to Run 3 Accounts
DAOC Triple Log
daoc plat
daoc platinum
wow gold
DAOC Emissary Broken Visions
DAOC Champ Exp Quest
DAOC Artifacts
DAOC templates
Dark Ages of Camelot
EQ2 Plat
EQ2 Gold
EverQuest ii platinum Venekor
Sea Salt EQ2
EQ2 Tradeskill Seasalt
EQ2 recipie
Tier 8 EQ2 Food
Tier 9 EQ2 Food
Fading memories Everquest
Mentor everquest
eq2 guild permafrost
free warcraft servers
world of warcraft private servers
world of warcraft gold exploit
making wow gold
world of warcraft easy gold
gold wow fastest guide
free world of warcraft gold farming guides
world warcraft gold farming
wow pvp
wow arena season 4
wow s3 arena power leveling service
Post a Comment