ಈಗಿನ ಹುಡ್ರು ಕಥೆ
ಪಾಪ, ಈಗಿನ ಹುಡ್ರು ತಮ್ ತಮ್ ಒಳಗೆ ಹಿಂಗೂ ಮಾತಾಡ್‌ಕೊಂತರೆ ನೋಡಿ, ಕರ್ರಗಿದ್ದೋರನ್ನ ಕರಿಯಾ ಅನ್ನೋದರಲ್ಲಿ ಅಫೆನ್ಸ್ ಏನಿದೆ? ದಿನಕ್ಕೆ ಐವತ್ತು ಸೆಂಟ್ಸ್ ಕೊಟ್ಟು ವಾರಕ್ಕೊಂದು ಸರ್ತಿ ಉದಯಾ ಟಿವಿ ನೋಡೋ ಭಾಗ್ಯದ ದೆಸೆಯಿಂದ ಈ ಹಾಡು ಕಿವಿಗೆ ಬಿದ್ದು ಹೀಗೆ ಬರೀಬೇಕಾಯ್ತು ನೋಡಿ.
ಕರಿಯಾ ಐ ಲವ್ ಯೂ
ಕರುನಾಡ ಮೇಲ್ ಆಣೆ
ಬೆಳ್ಳಿ ಐ ಲವ್ ಯೂ
ಬಿಳಿ ಮೋಡದಾ ಮೇಲ್ ಆಣೆ
ಭಾಳಾ ಹಿಂದಕೆ ಏನಿಲ್ಲ ಪ್ರೇಮಿಗಳೆಲ್ಲ ಇನ್ನೂ ಏನೇನನ್ನೋ ಇಟ್ಟು ಆಣೆ ಮಾಡಿಕೊಂತಿದ್ರು ಇಂದಿನ್ ಕಾಲ್ದಲ್ಲಿ ಅವೆಲ್ಲಾ ಶಾನೆ ಬದ್ಲಾಗಿರಂಗಿದೆ ಬಿಡಿ, ಏನ್ ಮಾಡಣ. ಇವತ್ತಿನ್ ಹುಡ್ರೆಲ್ಲಾ ಟೈಪ್‌ರೈಟರ್ ಕುಟ್ಟಿ ನೋಡಿಲ್ಲ, ರೆಕಾರ್ಡ್ ಪ್ಲೇಯುರ್ ತಟ್ಟೇನೆಲ್ಲ ಕಂಡೇ ಇಲ್ಲ. ನಮ್ ಕಾಲ್ದ ರೆಕಾರ್ಡ್ ತಟ್ಟೆಗಳ ಮೇಲ್ ಧೂಳೂ ಪಾಳೂ ಕುಂತಿದ್ದೇ ಆದ್ರೆ ಬರೀ ಹೇಳಿದ್ದೇ ಹೇಳ್ತಿತ್ತು, ಅದೇ ಈಗಿನ ಕಾಲ್ದ ತಟ್ಟೆಗಳೋ ಕೆಲ್ಸಾ ಮಾಡೋದೇ ನಿಲ್ಲಿಸ್ತವೆ. ಹೇಳಿದ್ದೇ ಹೇಳೋದ್ ಬೆಷ್ಟೋ ಅಥ್ವಾ ಕೆಲ್ಸಾ ನಿಲ್ಸೋದ್ ಬೆಷ್ಟೋ ನಿಮ್ ನಿಮ್ಗೇ ಬಿಟ್ಟಿದ್ದು. ಕೆಲವಂದ್ ಸರ್ತಿ ಹೇಳಿದ್ದೇ ಹೇಳೋ ಕಿಸ್‌ಬಾಯ್ ದಾಸ್ರೇ ಸರಿ, ಸುಮ್ಕಿರ್ ಮಂಗ್ಯಾನ್ ಮಕ್ಳೀಗ್ ಹೋಲ್ಸಿ ನೋಡಿದ್ರೆ ಅನ್ಸಲ್ಲಾ?
ನಿನಗೊಂದು ಪ್ರೇಮದ ಪತ್ರಾ
ಬರೆಯೋದು ನನಗಾಸೆ
ನಾನೆ ಇರುವೇ ಹತ್ರ
ಬಿಡು ಆಸೆ ಓ ಕೂಸೇ
ಆಯ್ತಲ್ಲಾ ಕಥೇ, ಪ್ರೇಮದ ಪತ್ರಾ ಇರ್ಲಿ, ಪತ್ರದ ಗೋಜಿಗೇ ಹೋಗಂಗಿಲ್ಲ ಈಗಿನ ಹುಡ್ರೂ ಅಂತೀನಿ. ಎಲ್ಲೋ ಇ-ಮೇಲೂ ಪಾಮೇಲೂ ಅಂತ ಕುಟ್ಟಿಗಂಡು ಬದುಕ್ಯಂಡಿದ್ದ್ ಬಡ್ಡಿ ಹೈಕ್ಳು ಈಗೀಗ ಎಸ್‌ಎಮ್ಮೆಸ್ ದಾರಿ ಹಿಡಕಂಡು ಒಂಥರಾ ಕಾಡುಕುದ್ರೆ ದಾರಿ ಹಿಡಿದವೆ ಇವರ ಕಮ್ಮ್ಯೂನಿಕೇಷನ್ನು. ಜೊತೆಗೆ ಸೆಂಟ್ರಲೈಜ್ಡ್ ಪೋಸ್ಟ್ ಆಫೀಸ್ ಕಥೆ ಏನ್ ಹೇಳಾಣ, ಅವರ ಪತ್ರಗಳ ಎಣಿಕೆ ಕಡಿಮೆ ಆದಂತೆ ಅವರ ಕಮ್ಮೀ ಆದ ಆದಾಯ ನೋಡಿ ಇಂದಿನ ಪೋಸ್ಟ್ ಮಾಸ್ಟರ್ ಜನರಲ್ಲುಗಳಿಗೆ ರಾತ್ರಿ ನಿದ್ದೇನೇ ಬರಂಗಿಲ್ಲಂತೆ ನಿಜವೇ? ಇವತ್ತಿನ ಮೊಬೈಲ್ ಫೋನ್ ಜಮಾನಾದಾಗೆ ಜನಗಳು ಲೆಟ್ರು ಬರೆಯೋದಿರ್ಲಿ ಮಾತೇ ಆಡೇ ಬರೀ ಫಿಂಗರ್ರುಗಳ ಮಸಲ್ಲುಗಳನ್ನು ಬೆಳೆಸ್ತಾ ಇದಾರಂತೆ ಹಿಂಗೇ ನಡೆದ್ರೆ ಇನ್ನು ಮುಂದಿನ ಪೀಳಿಗೆಗಳಿಗೆ ಒಂದೊಂದು ಬೆರಳು ಹೆಚ್ಚು ಹುಟ್ಟುತ್ತೋ ಏನೋ - ವಿಕಾಸವಾದದ ದೊರೆಗಳ್ನೇ ಕೇಳ್ಬೇಕು. ಬ್ಲ್ಯಾಕ್‌ಬೆರಿ ಅಂತಂದು ಜೀವನದುದ್ದಕ್ಕೂ ಯಾವ್ದೇ ಬೆರ್ರಿನ್ನೂ ಚೆರ್ರಿನ್ನೂ ನೋಡ್ದೇ ಇರೋರಿಗೆ ಕಮ್ಮ್ಯೂನಿಕೇಷನ್ನ್ ಫಿವರ್ರ್ ಹುಟ್ಟಿಸಿರೋರನ್ನ ಜೈಲಿಗೆ ಹಾಕ್ಬೇಕು, ಮತ್ತೇನು. ಇಷ್ಟೆಲ್ಲಾ ಮಾಧ್ಯಮಾ, ಕಮ್ಮ್ಯೂನಿಕೇಷನ್ನೂ ಅಂತಾ ಇದ್ರೂ ಜನಗಳ ನಡ್ವೆ ಸಂಬಂಧಗಳ ಅಪಸ್ವರ ಹೆಚ್ತಾನೇ ಇರೋದು ಇನ್ಯಾವ ವಾದದ ಮಾತೂ ಅಂತೀನಿ.
ಇವತ್ತಿನ ಕಾಯಂಗಿಲ್ಲ, ಕೆನೆ ಕಟ್ಟಂಗಿಲ್ಲ. ನೋಡಿಕ್ಯಂತಿರಿ ಇವತ್ತಲ್ಲ ನಾಳೆ ಒಂದು ನಿಮಿಷದೊಳಗೆ ಹಾಲು ಕೆನೆಕಟ್ಟೋ ಯಂತ್ರ ಕಂಡ್ ಹಿಡಿತಾರೋ ಇಲ್ಲಾ ಅಂತ. ಮೊಸರಿಗೆ ಇಡೋವಾಗ ಹಾಲನ್ನು ಬಿಸಿ ಮಾಡಿ ಆಮೇಲೆ ತಣ್ಣಗೆ ಮಾಡಿ ಅದರ ಮೇಲೆ ಹೆಪ್ಪು ಯಾಕ್ ಹಾಕಬೇಕು, ಯಾರ್ ಮಾಡಿದ್ರಪ್ಪಾ ಆ ನೀತೀನ.
1 comment:
ಕಾಲ ಬದ್ಲಾಗ್ಹೋಯ್ತಲ್ವೆ!
ಚೆನ್ನಾಗಿ ವಿವರಿಸಿದ್ದೀರಿ.
Post a Comment