Wednesday, May 06, 2009

ಬೆಂಗಳೂರ್ ಹೋಯ್ತು ಬಫೆಲೋ ಬಂತು - ಡುಂ! ಡುಂ!

’ಲೋ, ಒಳ್ಳೇ ನಾಯ್ಕನನ್ನೇ ಆರ್ಸಿಕೊಂಡಿದ್ದೀರಿ ಕಣ್ರೋ!’ ಎಂದಿದ್ದು ಇನ್ಯಾರು ಅಲ್ಲ - ನಮ್ ಸುಬ್ಬ.
ಸುಮ್ನೇ ಕುಶಾಲಕ್ಕೆ ’ಹೆಂಗಿದ್ಯೋ?’ ಅಂತ ಫೋನ್ ಕಾಲ್ ಮಾಡಿದ್ರೆ ತಗಳಾಪ್ಪಾ ಪೂರ್ತಿ ರಾಮಾಯ್ಣನೇ ಶುರು ಹಚ್ಚಿಕೊಂಬಿಟ್ನಲ್ಲಾ!

ಮತ್ತೆ ಮುಂದುವರೆಸುತ್ತಾ, ’...ಬೆಂಗ್ಳೂರಿಗೂ ಬಫೆಲೋಗೂ ಎಲ್ಲಿಯ ಹೋಲಿಕೆ ಹೊಂದಾಣಿಕೆ, ಏನೋ ಕರಿಯರ ನಾಯ್ಕ ಅಂತ ಸುಮ್ನೇ ಇದ್ದಿದ್ದಕ್ಕೆ ಸಪೋರ್ಟ್ ಮಾಡಿದ್ದಕ್ಕೆ ತಂದ್ನಲ್ಲಪ್ಪಾ ಕಾಣಿ. ಒಂದಿಷ್ಟ್ ಜನ ಅವ್ನನ್ನ ಮುಸ್ಲಿಮ್ ಅಂತಾರೆ, ಒಂದಿಷ್ಟ್ ಜನ ಅವನನ್ನ ಬಿಳಿಯ ಅಂತಾರೆ, ಒಂದಿಷ್ಟು ಜನ ಅವನೇ ದೇವ್ರು ಅಂತ ಕೊಂಡಾಡ್ತಾರೆ, ಒಳ್ಳೇ ಬ್ರೂಸ್ ಆಲ್‌ಮೈಟ್ ಕಥೆ ಆಯ್ತು ನೋಡು!’ ಎಂದು ಸುಮ್ಮನಾದ.

’ಯಾರೋ ಮುಸ್ಲೀಮ್, ಅವನೋ ಚರ್ಚಿಗೆ ಹೋಗೋ ಒಳ್ಳೇ ಕ್ರಿಶ್ಚಿಯನ್ನ್ ಅಲ್ವೇ?’ ಎನ್ನೋ ಪ್ರಶ್ನೆಯನ್ನ ತಾಳಲಾರದೆ ತಾಳಿಕೊಂಡು,
’ಲೋ, ಹುಸೇನ್ ಅಂತ ಮಿಡ್ಲ್ ನೇಮ್ ಇಟ್ಟುಕೊಂಡು ಮಿಡ್ಲ್ ಈಸ್ಟ್ ನಲ್ಲಿ ಪಾಪ್ಯುಲ್ಲರ್ ಅಗೀರೊ ಬರಾಕ್ ಅಂದ್ರೆ ಏನ್ ಅಂತ ತಿಳುಕೊಂಡಿದೀಯಾ? ಬರಾಕ್‍ಗೆ ಬಹು ಪರಾಕ್! ಹಹ್ಹಹ್ಹ...’ ಎಂದು ದೊಡ್ಡದಾಗಿ ನಗಾಡಿದ.

’ಹ್ಞೂ, ಅದಿರ್ಲಿ, ಬೆಂಗ್ಳೂರಿನವರು ಏನಂತಾರೆ?’

’ಬೆಂಗ್ಳೂರಿಗೂ ಬಫೆಲ್ಲೋಗೂ ಏನು ತಾಳೆ ಗುರುವೇ? ವರ್ಷದ ಆರು ತಿಂಗಳು ಆರು ಅಡಿ ಸ್ನೋನಲ್ಲಿ ಮುಚ್ಚಿರೋ ನಗರಕ್ಕೂ ಸೌತ್ ಇಂಡಿಯನ್ ಸ್ವರ್ಗಕ್ಕೂ ಎಲ್ಲಿಂದೆಲ್ಲಿಯ ಸಂಬಂಧ? ಈ ನನ್ ಮಕ್ಳು ನಮ್ಮಲ್ಲಿನ ರಸವನ್ನೆಲ್ಲ ಹೀರಿಕೊಂಡು ಈಗ ಸಿಪ್ಪೆ ಬಿಸಾಡಿದ ಹಾಗಾಯ್ತು. ನನ್ ಕೇಳಿದ್ರೆ ಔಟ್‌ಸೋರ್ಸಿಂಗ್ ವಿರುದ್ಧ ತಿರುಗಿ ಬಿದ್ದಿರೋ ಅಮೇರಿಕನ್ಸ್ ನೀತಿ ವಿರೋಧಿಸಿ ದೊಡ್ಡ ರ್ಯಾಲಿ ಆಗಬೇಕು. ಏನ್ ಆದ್ರೆ ಏನಂತೆ, ಇವೆಲ್ಲ ಕ್ವಾಣನ ಮುಂದೆ ಕಿನ್ನರಿ ಬಾರಿಸಿದಂಗೇ ಸೈ’.

’ಅಂದ ಹಾಗೆ, ನ್ಯೂ ಯಾರ್ಕ್ ರಾಜ್ಯದ ಬಫೆಲ್ಲೋಗೂ ಕಾಡು ಎಮ್ಮೆಗೂ ವ್ಯತ್ಯಾಸವಿದೆ ಗೊತ್ತಲ್ವಾ? ನಮ್ ನ್ಯೂಸ್ ಪೇಪರ್ರ್‌ಗಳು ಎಮ್ಮೆ-ಕ್ವಾಣ ಅಂತ ಬರೆಯೋಕ್ ಮುನ್ನ ಸ್ವಲ್ಪ ಯೋಚಿಸ್ಲಿ ಅಂತ ಹೇಳ್ದೆ ಅಷ್ಟೇ...’

’ಏನಾದ್ರೂ ಹಾಳಾಗ್ ಹೋಗ್ಲಿ ಬಿಡು, ಈಗಿನ ಕಾಲ್ದಲ್ಲಿ ನ್ಯೂಸ್ ಪೇಪರ್ ಓದೋರ್ ಯಾರು? ಎಲ್ಲರೂ ದಿವಾಳಿ ಆಗ್ಲಿ, ಅಡ್ವರ್‌ಟೈಸ್ ರೆವಿನ್ಯೂ ನಂಬಿಕೊಂಡಿರೋ ನ್ಯೂ ಯಾರ್ಕ್ ಟೈಮ್ಸ್ ಬಂಡವಾಳವೇ ಅಲುಗಾಡ್ತಾ ಇರುವಾಗ ಇನ್ನು ರೀಜನಲ್ಲ್ ನ್ಯೂಸ್ ಪ್ರಿಂಟ್‌ಗಳ ಕಥೆ ದೇವ್ರೆ ಕಾಪಾಡ್‌ಬೇಕು.’

’ಮತ್ತೇನಾದ್ರೂ ಇದೆಯಾ? I got to go' ಎಂದೆ.

’ಏನೂ ಇಲ್ಲ, ಬೆಂಗ್ಳೂರ್ ಹೋಯ್ತು, ಬಫೆಲ್ಲೋ ಬಂತು, ಡುಂ, ಡುಂ!’ ಎಂದ, ಕಾಲ್ ಕತ್ತರಿಸಿದೆ.

6 comments:

  1. Nne of us knw whs gonna hpn in cmng ftre

    all i cn se is hpe and pry fr da bst

    ReplyDelete
  2. ಭಾರತೀಯರು ತಮ್ಮ domestic productionಅನ್ನು ಹೆಚ್ಚಿಸಿಕೊಳ್ಳುವದನ್ನು ಬಿಟ್ಟು ಪರದೇಶಗಳಿಗೆ service sector ಆಗಿದ್ದರ ಪರಿಣಾಮವಿದು.

    ReplyDelete
  3. ಗುರು ಒಂದೇ ಮಾತು.
    ಅಜ್ಜಿ ಕೋಳಿ ಇಂದ ಬೆಳಕಾಗಲ್ಲ..
    ಅಮೆರಿಕನ್ ಪ್ರಾಜೆಕ್ಟ್ಸ್ ನೆ ನೆಚ್ಕೊಂಡು ಭಾರತೀಯರು ಜೀವನ ಮಾಡ್ತಿಲ್ಲ...
    ನಮಗೆ ಕೆಲಸ outsource ಮಾಡಲ್ಲ ಅಂದ್ರೆ ಅಲ್ಲಿರೋರು ಮಾಡಬೇಕು ... ಅಲ್ಲಿ ಇರೋರ್ಗೆ ನಾವು ಮಾಡೋ ಕೆಲಸ ಬಂದಿದ್ರೆ ಇಸ್ಟ್ ವರ್ಷ ಯಾಕೆ outsource ಮಾಡ್ತಿದ್ರು???
    ಅಮೆರಿಕದವ್ರ್ಗು ಗೊತಾಗ್ಲಿ ನಮ್ ಬೆಲೆ ಏನು ಅಂತ...
    ಬಫೆಲೋ ಅಂತೆ ಬಫೆಲೋ.. ಅಮೆರಿಕಾದವ್ರೆಲ್ಲ ಬಫೆಲೋಗಳೇ!!!!!!!!

    ReplyDelete
  4. ಒಂದು ದಿನ ಹೀಗೆ ಕುಳಿತು ಗೊಗಲ್ಲಿನಲ್ಲಿ ಅಂತರಂಗ ಬ್ಲಾಗ್ ನೋಡಿದೆ ಚೆನ್ನಾಗಿ ಮೂಡಿಬಂದಿದೆ

    ReplyDelete
  5. veenz,
    All the best!

    ಸುನಾಥ್,
    ಅದು ಬಹಳ ದೊಡ್ಡ ಮಾತು, ಜೊತೆಗೆ ಪರದೇಶಿಯರೂ ಭಾರತೀಯರನ್ನು ಆಧರಿಸಿ ಮೂಗಿಗೆ ಬೆಣ್ಣೆ ಸವರಿದಂತಾಗಲಿಲ್ಲವೇ?

    ಸಂತೋಷ್,
    ’ಅಮೇರಿಕಾದವರೆಲ್ಲ?’ ನೀವು ಯಾವಾಗ ಬರ್ತೀರಿ ಇಲ್ಲಿಗೆ?

    ಪದ್ಮಾವತಿ,
    ಧನ್ಯವಾದಗಳು.

    ReplyDelete
  6. naanu america ge sadyadalle bartha idini NewYork ge. bandaga Buffalo City gu beti kodana antha idini. But i will be an INDIAN wherever i will be.

    ReplyDelete