Take (good) care of yourself...
ಈ ಸ್ಪ್ರಿಂಗ್ ತರೋ ಅಲರ್ಜಿ ಸೀಜನ್ನ್ ದೆಶೆಯಿಂದ ಈ ಮಾತನ್ನ ಹೇಳ್ತಾ ಇಲ್ಲ, ನನ್ನದೊಂದು ಫಂಡಮೆಂಟಲ್ ನಂಬಿಕೆ ಇಲ್ಲಿನ ಅನುಭವಗಳ ಮೂಲಕ ಬದಲಾದ ಬಗೆಯನ್ನು ಹೇಳ್ತಾ ಇದ್ದೇನೆ ಅಷ್ಟೇ. ನೀವು ಯಾರನ್ನಾದರೂ ’Take care...' ಎಂದು ಅಮೇರಿಕದಲ್ಲಿ ಬೀಳ್ಕೊಡಬಹುದು ಅದು ’how are you?' ಅನ್ನೋ ಔಪಚಾರಿಕ ಮಾತಿನ ಹಾಗೇ ಕಂಡು ಬಂದರೂ ನನ್ನ ಮಟ್ಟಿಗಂತೂ ಅದು ಯಾವುದೋ ಒಂದು ಫಾಸಿಟಿವ್ ಫೀಡ್‌ಬ್ಯಾಕ್ ಅನ್ನು ಆಗಾಗ್ಗೆ ರೀಇನ್‌ಫೋರ್ಸ್ ಮಾಡ್ತಾ ಇರುತ್ತೆ ಅನ್ಸುತ್ತೆ ಒಂದು ರೀತಿಯಲ್ಲಿ ಟಿವಿಯಲ್ಲಿ ಬರೋ ಕಮರ್ಷಿಯಲ್ಲ್ ನೋಡಿ ನಮಗೆ ಹೌಸ್‌ಹೋಲ್ಡ್ ಕೆಲಸಗಳು ನೆನಪಿಗೆ ಬರೋಲ್ವೇ ಹಾಗೆ.
ನಮ್ಮ ಹಿಂದಿನ ತಲೆಮಾರಿನಲ್ಲಿ ಜನರು ಒಂದೇ ಕಂಪನಿಗೆ ಅಥವಾ ಸರ್ಕಾರಕ್ಕೆ ತಮ್ಮ ಪೂರ್ಣ ಸೇವೆಯನ್ನು ಸಲ್ಲಿಸಿ ಅಲ್ಲೇ ನಿವೃತ್ತರಾಗೋ ವ್ಯವಸ್ಥೆ ಅಥವಾ ನಡವಳಿಕೆ ಇತ್ತು, ಆದರೆ ಈಗಿನ ಕ್ಯಾಪಿಟಲಿಸ್ಟಿಕ್ ವ್ಯವಸ್ಥೆಯ ಇತಿ-ಮಿತಿಗಳು ನಮ್ಮನ್ನು ಸದಾ ’ಈ ಕೆಲಸ ಕೈ ಬಿಟ್ಟು ಹೋದರೆ ಮುಂದೇನು...’ ಅನ್ನೋ ಯೋಚನೆಯನ್ನು ಯಾವಾಗಲೂ ಜಾಗೃತವಾಗೇ ಇಟ್ಟಿರುತ್ತವೆ. ಹಿಂದಿನ ಪರಂಪರೆಯ ಹಾಗೆ ನಿಮ್ಮ ಬಾಸ್ ಆಗಲಿ ನಿಮ್ಮ ಸಹೋದ್ಯೋಗಿಗಳಾಗಲಿ ನಿಮ್ಮ ಯೋಗಕ್ಷೇಮವನ್ನು ನೋಡಿಕೊಂಡಾರು ಅನ್ನೋದು ಮರೀಚಿಕೆಯಾಗಿ ನಿಮ್ಮ ಕೆಲಸ ಹೇಗೇ ಇದ್ದರೂ ನಿಮ್ಮ ಫರ್‌ಫಾರ್ಮೆನ್ಸ್ ಯಾವ ರೀತಿ ಇದ್ದರೂ ಕಾರ್ಪೋರೇಟ್ ಲ್ಯಾಡರ್ರ್‌ನಲ್ಲಿ ಮೇಲೆ ಹೋಗಲೂ ಅನೇಕ ಕಸರತ್ತುಗಳನ್ನು ಮಾಡಬೇಕಾಗುತ್ತದೆ.
ಒಂದು ಕಡೆ ಹೊಸ ನೀರು ಅಂದರೆ ಹೊಸ ಕೆಲಸ ಮಾಡುವ ತಲೆಮಾರು ಕಂಪನಿಗಳಲ್ಲಿ ಬರುವ ಸಾಧ್ಯತೆ ಅಥವಾ ಸಂಖ್ಯೆ ಕಡಿಮೆಯಾಗಿದ್ದು, ಮತ್ತೊಂದು ಈಗಾಗಲೇ ಕಂಪನಿಯಲ್ಲಿ ಸೇರಿಕೊಂಡು ಬೆಳೆದ ತಿಮಿಂಗಲಗಳು ಅಲ್ಲೇ ಬೀಡುಬಿಟ್ಟಿರೋದರಿಂದ ಒಬ್ಬ ಮಧ್ಯ ವರ್ಗದ ಕೆಲಸಗಾರ ಮೇಲೆ ಹೋಗುವ ಸಾಧ್ಯತೆಗೆ ಕುತ್ತು ಬರುತ್ತದೆ. ತಾನು ಮಾಡುವ ಕೆಲಸವನ್ನು ಮತ್ತೊಬ್ಬರಿಗೆ ಕೊಡಲು ಅಲ್ಲಿ ತನ್ನ ಲೆವೆಲ್ಲ್‌ನಲ್ಲಿ ಬೇರೆ ಯಾರೂ ಇಲ್ಲ, ಜೊತೆಗೆ ತಾನು ಮೇಲೆ ಹೋಗಲೂ ಅವಕಾಶವಿಲ್ಲ ಎನ್ನೋ boxed up ಮನಸ್ಥಿತಿ ಎದುರಾಗುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ಆದ ಆರ್ಥಿಕ ಏರುಪೇರುಗಳಲ್ಲಿ ಸುಧಾರಿಸಿಕೊಳ್ಳಲು ಕಂಪನಿಗಳು ಇನ್ನೂ ಹೆಣಗುತ್ತಿರುವಾಗ ಬೇರೆ ಕಡೆಗೆ ಅಥವಾ ಕಂಪನಿಗೆ ವಲಸೆ ಹೋಗಿ ಸೇರಿಕೊಳ್ಳುವ ಸಾಧ್ಯತೆಗಳು ಕಡಿಮೆ ಆಗುತ್ತವೆ ಅಥವಾ ರಿಸ್ಕೀ ಆಗಿರುತ್ತವೆ.
ಒಂದಂತೂ ನನಗೆ ಚೆನ್ನಾಗಿ ಮನದಟ್ಟಾಗಿದೆ: ಇಲ್ಲಿ ಯಾರೂ ನಮ್ಮ ಬಗ್ಗೆ ಕೇರ್ ಮಾಡೋದಿಲ್ಲ, ಯಾರೂ ನಮ್ಮ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳೋದಿಲ್ಲ - ನಮ್ಮ ಊರಿನ ಬಸ್ಸುಗಳಲ್ಲಿ ಬರೆದಿರುವ ಹಾಗೆ ’ನಮ್ಮ ಲಗೇಜಿಗೆ ನಾವೇ ಜವಾಬ್ದಾರರು!’. ಸರ್ಕಾರಗಳು, ಅವು ಯಾವುದೇ ಪಕ್ಷದ್ದಿರಲಿ ಯಾರ ನಾಯಕತ್ವದಲ್ಲೇ ಇರಲಿ, ತಮ್ಮ ತಮ್ಮ ಬೇಳೇಕಾಳುಗಳನ್ನು ಬೇಯಿಸಿಕೊಳ್ಳುವುದರಲ್ಲಿ ಮಗ್ನರಾಗಿರುತ್ತವೆ, ತಮ್ಮ ಓಟುಬ್ಯಾಂಕುಗಳನ್ನು ಓಲೈಸುವತ್ತ ಪಾಲಿಸಿಗಳು ವಾಲಿರುತ್ತವೆ. ಎಂಪ್ಲಾಯರ್ಸ್, ಅವರಿಗೆ ನಾವೊಂದು ಕಮಾಡಿಟಿ, ಹ್ಯೂಮನ್ ರಿಸೋರ್ಸ್, ಸ್ಪ್ರೆಡ್‌ಶೀಟ್ ಹಾಗೂ ಎಕ್ಸ್‌ಪೆನ್ಸ್ ವಿಚಾರದಲ್ಲಿ ಬಂದಾಗ ಕತ್ತರಿಸಿ ತೆಗೆದು ಬಿಸಾಡಲು ಒಂದು ಬಾಡಿ ಅಷ್ಟೇ. ಫೈನಾನ್ಶಿಯಲ್ ಅಡ್ವೈಸರ್ಸ್, ಯಾವತ್ತೂ ನಮ್ಮ ಸ್ನೇಹಿತರಂತೂ ಅಲ್ಲ, ಇವರೆಲ್ಲ hyped ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಷ್ಟೇ, ನಿಮ್ಮ ದುಡ್ಡು ಕಾಸಿನ ವಿಚಾರಕ್ಕೆ ಬಂದಾಗ ಅವರ ತರ್ಕದಲ್ಲಿ ಯಾವುದೇ ಭಾವನೆಗಳಾಗಲೀ ನೋವಾಗಲಿ ಇರೋದಿಲ್ಲ. ಸಹೋದ್ಯೋಗಿಗಳು, ನಾನು ಈ ಹಿಂದೆ ಬರೆದ ಹಾಗೆ ಸ್ನೇಹಿತರೆಂದೂ ಆಗೋದಿಲ್ಲ, ಯಾವತ್ತಿದ್ದರೂ ರ್ಯಾಟ್‌ರೇಸ್ ಅನ್ನು ನೆನಪಿಸೋ ಹಾಗೆ ಅವರವರ ಏಳಿಗೆ ಅವರವರಿಗೆ ಮುಖ್ಯ. ಹೀಗೆ ನಾವು ಒಡನಾಡುವ external circle ಅನ್ನೋ ಪರೀಕ್ಷಿಸಿ ನೋಡಿದಾಗ ಎಲ್ಲರೂ ತಮ್ಮ ಕೆಲಸದಲ್ಲಿ ಮಗ್ನರು ಅನ್ನಿಸೋದಿಲ್ಲವೇ? ಇದು ಭಾರತದಲ್ಲಿ ಕೆಲಸ ಮಾಡುವವರಿಗೂ ಅನ್ವಯವಾಗಬಹುದು, ನಮ್ಮಂಥ ಅನಿವಾಸಿಗಳಿಗೆ, ಯಾಕೆಂದರೆ ಅನಿವಾಸಿತನವನ್ನು ನೋವಿರದ ನಾಗರಿಕತೆ ಎಂದು ನಾನು ಕರೆಯೋದರಿಂದ, ಇಲ್ಲಿನ ಪಾಲಿಸಿಗಳಲ್ಲಿ ಎಲ್ಲೂ feel for pain ಇದೆ ಎಂದು ಅನ್ನಿಸೋದೇ ಇಲ್ಲ.
ಅದಕ್ಕೆ, ನಮ್ಮ ಕೇರ್ ಅನ್ನು ನಾವೇ ಮಾಡಿಕೊಳ್ಳಬೇಕು, ನೋಡಿಕೊಳ್ಳಬೇಕು ಎಂದಿದ್ದು; ಬೇರೆ ಯಾರಾದರೂ ನಿಮ್ಮ ಯೋಗಕ್ಷೇಮವನ್ನು ಮಾಡುತ್ತಾರೆ ಎಂದುಕೊಂಡಿದ್ದರೆ ತಟ್ಟನೆ ಆ ಮನಸ್ಥಿತಿಯಿಂದ ಹೊರಬನ್ನಿ.
5 comments:
’ನಮ್ಮ ಲಗೇಜಿಗೆ ನಾವೇ ಜವಾಬ್ದಾರರು!’. ..ನಿಜ, ನಮ್ಮ ಜೀವ ಹಾಗೂ ಜೀವನಕ್ಕೂ ನಾವೇ ಜವಾಬುದಾರರು !
ತುಂಬಾ ಸತ್ಯವಾದ ಮಾತು..."ನಮ್ಮ ಲಗೇಜಿಗೆ ನಾವೇ ಜವಾಬ್ದಾರರು"... ನಮಗೆ ಖಾಯಿಲೆ ಬಂದರೆ ನಾವೇ ತಾನೇ ಅನುಭವಿಸಬೇಕು..? ಚೆನ್ನಾಗಿದೆ...
ಸುಬ್ರಹ್ಮಣ್ಯ,
ಧನ್ಯವಾದಗಳು.
ಶ್ಯಾಮಲ,
ಧನ್ಯವಾದಗಳು.
ನಮ್ಮ ಲಗೆಜಿಗೆ
ನಮ್ಮೆ ಬದುಕಿಗೆ
ನಮ್ಮ ಉನ್ನತಿಗೆ
ನಮ್ಮ ಅವನತಿಗೆ
ನಾವೇ ಕಾರಣರಾ... ?
-------------------
http://avanati.blogspot.com
Nija Satish, tumba saralawagi badukina bagge tiliskottiddira!!! dhanyawadagalu
Post a Comment