ನಗುನಗುತಾ ನಲಿ
ಹಾಡು: ನಗುನಗುತಾ ನಲಿ
ಚಿತ್ರ: ಬಂಗಾರದ ಮನುಷ್ಯ, 1972
ಸಾಹಿತ್ಯ: ಹುಣಸೂರು ಕೃಷ್ಣಮೂರ್ತಿ
ಸಂಗೀತ: ಜಿ.ಕೆ ವೆಂಕಟೇಶ್
ಗಾಯನ: ಪಿ.ಬಿ.ಶ್ರೀನಿವಾಸ್
ಎಪ್ಪತ್ತರ ದಶಕದ ಸೂಪರ್ ಹಿಟ್ ಮೂವಿಯೆಂದು ನಾವೆಲ್ಲ ಅದೆಷ್ಟು ಬಾರಿ ನೋಡಿ ನಲಿದ ಬಂಗಾರದ ಮನುಷ್ಯ ಚಿತ್ರದ ಈ ಹಾಡು ಎಂದೂ ಯಾರನ್ನೂ ಮೋಡಿ ಮಾಡುವ ಹಾಡು. ಹುಣಸೂರು ಕೃಷ್ಣಮೂರ್ತಿಯವರು ಮುತ್ತು ಪೋಣಿಸಿದಂತೆ ಅಕ್ಷರಗಳನ್ನು ರಚಿಸಿ, ಒಬ್ಬ ಮನುಷ್ಯನ ಜೀವಿತಾವಧಿಯ ಮಹತ್ವದ ಹಂತಗಳನ್ನು ಅದೆಷ್ಟು ಸರಳವಾಗಿ ಈ ಹಾಡಿನಲ್ಲಿ ವರ್ಣಿಸಿದ್ದಾರೆ ಎಂದು ಖಂಡಿತ ಅನ್ನಿಸುತ್ತದೆ. ಅದಕ್ಕೆ ತಕ್ಕನಾಗಿ ಜಿ.ಕೆ.ವೆಂಕಟೇಶರ ಹಿನ್ನೆಲೆ ಸಂಗೀತ ಹಾಗೂ ಪಿ.ಬಿ. ಶ್ರೀನಿವಾಸ್ ಅವರ ಕಂಠ ಮಾಧುರ್ಯ, ನಿಮ್ಮನ್ನು ಎಂದೆಂದೂ ಈ ಹಾಡನ್ನು ಕೇಳುವಂತೆ ಮಾಡುತ್ತದೆ.
ಹಾಡಿನ ಮೊದಲಿನಲ್ಲಿ ರಾಜ್‌ಕುಮಾರ್ ಕೆಂಪು ಅಂಗಿ ಮತ್ತು ಬಿಳಿ ಪ್ಯಾಂಟು ತೊಟ್ಟು ರೈಲಿನ ಬೋಗಿಯಿಂದ ಹೊರಕ್ಕೆ ಇಣುಕುತ್ತಿದ್ದಂತೆ ಆಗಿನ ಚಿತ್ರ ಪ್ರೇಮಿಗಳು ಶಿಳ್ಳೆ ಹಾಕಿ ಸಂಭ್ರಮಿಸುತ್ತಿದ್ದಿರಬಹುದು. ಏಳು ನಿಮಿಷದ ಈ ಹಾಡಿನಲ್ಲಿ ಮೊದಲ ಒಂದು ನಿಮಿಷದ ಇಂಟ್ರೋ ಮ್ಯೂಸಿಕ್‌ನಲ್ಲಿ ಹೀರೋ ತನ್ನ ಸುತ್ತಲಿನ ರಮಣೀಯ ಸೌಂದರ್ಯವನ್ನು ಹೊಸ ಸ್ಥಳವನ್ನು ನೋಡಿದ ಸಹಜವಾದ ಉತ್ಸಾಹದಲ್ಲಿ ಕುಣಿದು ಕುಪ್ಪಳಿಸುವುದನ್ನು ಸುಂದರವಾಗಿ ಚಿತ್ರೀಕರಿಸಲಾಗಿದೆ. ’ಆಹಾಹಾ’ ಎನ್ನುವ ಮೊದಲ ಸಾಲಿನ ಆಲಾಪನೆಯನ್ನು ಎಲ್ಲ ಕೋನಗಳಿಂದ ಚಿತ್ರಿಸಿ, ಆ ಧ್ವನಿ ಪ್ರತಿಧ್ವನಿಸುವುದನ್ನು ತೋರಿಸಲಾಗಿದೆ.
ಆಹಾಹಾ.... ಆಹಾಹಾ....ಆಹಾಆಹಾಆಹಾ....
ಬೆಟ್ಟದ ಮಗ್ಗುಲಿನಲ್ಲಿ ನಾಯಕ ಓಡಿ ಬಂದು ದಿಢೀರನೆ ನಿಂತು ಹೊರಳುವ ದೃಶ್ಯ ಹಾಗೂ ಹಾಡಿನ ವೇಗ ಕೇಳುಗರ ಹೃದಯ ಬಡಿತವನ್ನು ಹೆಚ್ಚುವಂತೆ ಮಾಡುತ್ತದೆ. ಇಲ್ಲಿಯವರೆಗೆ ಇಷ್ಟೊಂದು ವೇಗವಾಗಿ ಹಾಡಿನ ಪಲ್ಲವಿ ಮೂಡಿ ಮರೆಯಾಯಿತೇ ಎಂದು ನೀವು ಎಣಿಸುವುದರೊಳಗೆ, ಜೀವನದ ಮಹತ್ವವಾದ ಸಂದೇಶವನ್ನು ಕವಿ ಸಾರುತ್ತಾರೆ, ಅದಕ್ಕೆ ತಕ್ಕನಾಗಿ ನೂರಕ್ಕೆ ನೂರು ಪಟ್ಟು ಹಿನ್ನೆಲೆ ಸಂಗೀತ, ಗಾಯನ ಹಾಗೂ ನಟನೆ ಸಾಥ್ ನೀಡುವುದರ ಸಂಗಮವನ್ನು ನೀವು ಬರಿ ಪಲ್ಲವಿಯಲ್ಲೇ ಕಾಣಬಹುದು.
ನಗುನಗುತಾ ನಲಿ ನಲಿ
ಎಲ್ಲಾ ದೇವನ ಕಲೆಯೆಂದೇ ನೀ ತಿಳಿ
ಅದರಿಂದ ನೀ ಕಲಿ
ನಗುನಗುತಾ ನಲಿ ನಲಿ
ಏನೇ ಆಗಲಿ.
ಈ ಹಾಡಿನ ಉದ್ದಕ್ಕೂ ರಾಜ್‌ಕುಮಾರ್ ಅವರ ನಟನಾ ಕೌಶಲ್ಯದ ಜೊತೆಗೆ ಅವರ ವೇಗವಾಗಿ ಓಡುವ, ಕುಣಿಯುವ, ಹಾರುವ ದೃಶ್ಯಗಳನ್ನು ಜೋಡಿಸಲಾಗಿದೆ. ಒಂದು ತೆರೆದ ಬಯಲಿನಲ್ಲಿ ಈ ಹಾಡನ್ನು ಚಿತ್ರೀಕರಿಸಲು, ಹಾಗೂ ಹಾಡಿನ ಉದ್ದಕ್ಕೂ ತನ್ನ ಉತ್ಸಾಹ, ವೇಗವನ್ನು ಕಾಯ್ದುಕೊಂಡಿರಲು ಚಿತ್ರದ ತಂಡ ಅದೆಷ್ಟು ಕಷ್ಟಪಟ್ಟಿರಬೇಡ? ರಾಜ್‌ಕುಮಾರ್ ಅವರ ಉತ್ಸಾಹದ ಸೆಲೆಯೇ ಈ ಹಾಡಿನ ಚಿತ್ರೀಕರಣದ ಜೀವಾಳ. ಈ ಹಾಡಿನ ನಂತರ, ಈ ರೀತಿ ಅದೆಷ್ಟೇ ಹಾಡುಗಳು ಬಂದಿದ್ದರೂ ಕೂಡ, ಇದು ಎಂದೂ ಮುಂಚೂಣಿಯಲ್ಲಿ ನಿಲ್ಲುತ್ತದೆ.
ಜಗವಿದು ಜಾಣ ಚೆಲುವಿನ ತಾಣ
ಎಲ್ಲೆಲ್ಲೂ ರಸದೌತಣ
ನಿನಗೆಲ್ಲೆಲ್ಲೂ ರಸದೌತಣ
ಲತೆಗಳು ಕುಣಿದಾಗ
ಹೂಗಳು ಬಿರಿದಾಗ.
ಮುಂದಿನ ಪಂಕ್ತಿಗಳಲ್ಲಿ ಜೀವನದ ಮಹತ್ವದ ಘಟ್ಟಗಳನ್ನು ವರ್ಣಿಸುವುದಕ್ಕೆ ಮೊದಲು, ಸುತ್ತಲಿನ ಹಸಿರು ಹಾಗೂ ತರು-ಲತೆಗಳ ಹಿನ್ನೆಲೆಯಲ್ಲಿ ಜಗವನ್ನು ಚೆಲುವಿನ ತಾಣವೆಂದು ವರ್ಣಿಸಿ, ಮುಂದಿನ ಚಿತ್ರಗಳನ್ನು ಹಾಡಿಗೆ ತಕ್ಕಂತೆ ಬದಲಾಗಿಸಲಾಗಿರುವುದನ್ನು ಗಮನಿಸಬಹುದು. ಹಸಿರು ಪರಿಸರ ಕಾಂಕ್ರೀಟು, ಕಲ್ಲು ಕ್ವಾರಿಯ ಹಿನ್ನೆಲೆಗೆ ನಾಟಕೀಯವಾಗಿ ಬದಲಾಗುವುದನ್ನೂ, ಜೊತೆಯಲ್ಲಿ ಒಂದು ಚಿಕ್ಕ ಬೆತ್ತಲೆ ಮಗು ಅಳುತ್ತಾ ಹಸಿದು ಅಮ್ಮನ್ನನ್ನು ಹುಡುಕಿಕೊಂಡು ಬರುವುದನ್ನೂ, ಆ ಮಗುವಿಗೆ ತಾಯಿ ಹಾಲುಕುಡಿಸುವ ದೃಶ್ಯವನ್ನು ಮನಮುಟ್ಟುವ ರೀತಿಯಲ್ಲಿ ಚಿತ್ರಿಸಲಾಗಿದೆ.
ನಗುನಗುತಾ ನಲಿ ನಲಿ ಏನೇ ಆಗಲಿ.
ತಾಯಿ ಒಡಲಿನ ಕುಡಿಯಾಗಿ ಜೀವನ
ತಾಯಿ ಒಡಲಿನ ಕುಡಿಯಾಗಿ ಜೀವನ
ಮೂಡಿಬಂದು ಚೇತನ ತಾಳಲೆಂದು ಅನುದಿನ
ಮೂಡಿಬಂದು ಚೇತನ ತಾಳಲೆಂದು ಅನುದಿನ
ಅವಳೆದೆ ಅನುರಾಗ ಕುಡಿಯುತ ಬೆಳೆದಾಗ.
ನಗುನಗುತಾ ನಲಿ ನಲಿ ಏನೇ ಆಗಲಿ.
ಈ ಕೆಳಗಿನ ಪ್ರತಿಯೊಂದು ದೃಶ್ಯಾವಳಿಗಳಿಗೂ ಕಥಾ ನಾಯಕ ಮೊಟ್ಟ ಮೊದಲನೇ ಬಾರಿ ಇವನ್ನೆಲ್ಲ ನೋಡಿ ಅನುಭವಿಸಿರುವುದರ ಜೊತೆಗೆ, ದೃಶ್ಯಕ್ಕೆ ತಕ್ಕನಾದ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುವಂತೆ ಚಿತ್ರಿಸಲಾಗಿದೆ. ಒಂದೊಂದು ಚಿತ್ರದಲ್ಲಿ ಜೀವನದ ಬೆಳವಣಿಗೆಯ ಹಂತಗಳನ್ನು, ನೋವು-ನಲಿವುಗಳನ್ನು ಸಮನಾಗಿ ತೋರಿಸುವ ಜಾಣ್ಮೆ ಮರೆದಿದ್ದಾರೆ.
ಕಳಸಾಪುರದ ಶಾಲೆಯಿಂದ ಮಕ್ಕಳು ಹೊರಗಡೆ ಓಡಿಬರುವ ದೃಶ್ಯ:
ಗೆಳೆಯರ ಜೊತೆಯಲಿ ಕುಣಿಕುಣಿದು
ಬೆಳೆಯುವ ಸೊಗಸಿನ ಕಾಲವಿದು
ಗೆಳೆಯರ ಜೊತೆಯಲಿ ಕುಣಿಕುಣಿದು
ಬೆಳೆಯುವ ಸೊಗಸಿನ ಕಾಲವಿದು
ಮದುವೆ ಮಂಟಪ, ಎತ್ತಿನ ಬಂಡಿಯಲ್ಲಿ ದಿಬ್ಬಣ ಹೋಗುವ ದೃಶ್ಯ:
ಮುಂದೆ ಯೌವನ ಮದುವೆ ಬಂಧನ...
ಎಲ್ಲೆಲ್ಲೂ ಹೊಸ ಜೀವನ
ಅಹ ಎಲ್ಲೆಲ್ಲೂ ಹೊಸ ಜೀವನ
ಜೊತೆಯದು ದೊರೆತಾಗ ಮೈಮನ ಮರೆತಾಗ.
ನಗುನಗುತಾ ನಲಿ ನಲಿ ಏನೇ ಆಗಲಿ.
ವೃದ್ದಾಪ್ಯದ ಎರಡು ದೃಶ್ಯಗಳು:
ಏರುಪೇರಿನ ಗತಿಯಲ್ಲಿ ಜೀವನ
ಏರುಪೇರಿನ ಗತಿಯಲ್ಲಿ ಜೀವನ
ಸಾಗಿ ಮಾಗಿ ಹಿರಿತನ
ತಂದಿತಯ್ಯ ಮುದಿತನ
ಅದರೊಳು ಹೊಸದಾದ
ರುಚಿಯಿದೆ ಸವಿಮೋದ.
ನಗುನಗುತಾ ನಲಿ ನಲಿ ಏನೇ ಆಗಲಿ.
ನೀವು ಈ ಹಾಡನ್ನು ಇಲ್ಲಿ ಕೇಳಬಹುದು/ನೋಡಬಹುದು.

No comments:
Post a Comment