ಬಂಡವಾಳಶಾಹಿ ವಚನಗಳು!
ನಾವು ಕರ್ನಾಟಕದ ಹಳ್ಳಿಯ ಶಾಲೆಗಳಿಂದ ಬಂದವರು. ನಾವೆಲ್ಲ ವಚನಕಾರರ ಹೆಸರುಗಳು ಗೊತ್ತಿಲ್ಲದೇ ಅದೆಷ್ಟೋ ವಚನಗಳನ್ನು ಜಾನಪದ ಗೀತೆಗಳಂತೆ ಕಲಿಯುತ್ತಿದ್ದೆವು, ಅವುಗಳನ್ನು ಪ್ರಾರ್ಥನೆಯಾಗಿ ಹಾಡುತ್ತಿದ್ದೆವು...ಕರ್ನಾಟಕದ ಇತಿಹಾಸದಲ್ಲಿ ಹನ್ನೊಂದು-ಹನ್ನೆರಡನೇ ಶತಮಾನದಲ್ಲಿ ಜನಿಸಿದ ವಚನಕಾರರು, ಅವರ ಸಾಹಿತ್ಯ, ಅವರ ಜೀವನ ಶೈಲಿ, ಅವರ ಪರಂಪರೆ ಇವೆಲ್ಲವೂ ನಮ್ಮನ್ನು ಭಾರತದ ಸಾಮಾಜಿಕ ಪ್ರಗತಿಯ ಪಥದಲ್ಲಿ ಮುಂಚೂಣಿಯಲ್ಲಿ ನಿಲ್ಲಿಸುತ್ತವೆ. ಈ ಹಿನ್ನೆಲೆಯಲ್ಲಿ ಬೆಳೆದು ಬಂದ ನಾವು ನಮ್ಮ "ವಚನ" ಶೈಲಿಯನ್ನು ಇಂದಿನ ಕ್ಯಾಪಿಟಲಿಸ್ಟಿಕ್ (ಬಂಡವಾಳಶಾಹಿ) ವ್ಯವಸ್ಥೆಯಲ್ಲಿ ಹೇಗೆ ಬದಲಾಯಿಸಿಕೊಳ್ಳುತ್ತೇವೆ ಎಂಬುದನ್ನು ಕುರಿತು ಒಂದು ವಿಡಂಬನಾತ್ಮಕ ಬರಹ - ವಚನಕಾರರ ಕ್ಷಮೆಯನ್ನು ಕೋರಿ!
***
Twice a year, during performance review time...
ಕಳಬೇಕು
ಕೊಲಬೇಕು
ಹುಸಿಯ ನುಡಿಯಲು ಬೇಕು
ಮುನಿಯಬೇಕು
ತನ್ನ ಬಣ್ಣಿಸ ಬೇಕು
ಇದಿರ ಹಳಿಯಲು ಬೇಕು
ಇದೇ ಅಂತರಂಗ ಶುದ್ಧಿ
ಇದೇ ಬಹಿರಂಗ ಶುದ್ಧಿ
ಇದೇ ನಮ್ಮ (ಬಾಸ್ ಎಂಬ) ಕ್ಯಾಪಿಟಲಿಸ್ಟಿಕ್
ದೇವನ ಒಲಿಸುವ ಪರಿ.
End of year, around Ratings & Rankings
ಸ್ಕಿಲ್ ಇದ್ದವರು ಕೋಡ್ ಅನ್ನು ಬರೆಯುವರು
ನಾನೇನು ಮಾಡಲಯ್ಯ ಬಡವನಯ್ಯಾ
ನಾನು ಆಫೀಸಿಗೆ ಬರುವುದೇ ಹೆಚ್ಚು,
ಬಂದು ಕಾಲ ಕಳೆಯುವುದೇ ದೊಡ್ಡದು,
ನನ್ನ ಇರುವಿಕೆಯೇ ಹೊನ್ನ ಕಳಸವಯ್ಯಾ,
ಎಲಾ ಬಾಸ್ ಕೇಳಾ,
ನಿಂತೋರಿಗೆ ಸುಖವಿಲ್ಲ, ಹಾರಾಡಿದವರಿಗೆ ಹಸಿವಿಲ್ಲ.
When promotions are few and far between
ಕೆಲ್ಸವಿದ್ದು ಫಲವೇನು? ಗ್ರೋತ್ ಇಲ್ಲದನ್ನಕ?
ಗ್ರೋತ್ ಇದ್ದು ಫಲವೇನು? ದುಡ್ಡಿಲ್ಲದನ್ನಕ?
ದುಡ್ಡಿದ್ದು ಫಲವೇನು? ಟೈಟಲ್ ಇಲ್ಲದನ್ನಕ?
When all else fail...
ಮೋಕ್ಷಕ್ಕೆ ಹೋರಾಡುವಣ್ಣಗಳಿರಾ, ಒಂದು ಹೆಜ್ಜೆ ಮುಂದೆ ಹೋದರೆ
ಮೋಕ್ಷಕ್ಕೆ ನೀವೇ ನಿಚ್ಚಣಿಗೆ
ಮೋಕ್ಷಕ್ಕೋಸ್ಕರ ಹೋರಾಡಿ ಮುಂದೆ ಹೋಗದಿರ್ದೆಡೆ
ಆ ಹರನಿಲ್ಲನೆಂದನಂಬಿಗ ಚೌಡಯ್ಯ.
During training time
ಮೂರ್ಖಂಗೆ ಯಾರು ಬುದ್ದಿ ಹೇಳಿದರೂ
ಗೋರ್ಕಲ್ಲ ಮೇಲೆ ನೂರ್ಕಾಲ ಮಳೆಕರೆದಂತೆ ಸರ್ವಜ್ಞ.
When deliverables are not delivered on time...
ರಿಸೋರ್ಸುಗಳನು ಕೊಂಬಾಗ ಹಾಲೋಗರ ಉಂಡಂತೆ
ಕ್ಲೈಂಟುಗಳು ಬಂದು ಎಳೆವಾಗ, ಕಿಬ್ಬದಿಯ
ಕೀಲು ಮುರಿದಂತೆ ಸರ್ವಜ್ಞ.
When deliverables fail to function as per requirements...
ಹೊಸ ಹೊಸ ಟೆಕ್ನಾಲಜಿಯನು ಬಳಸಿಕೊಂಡು
ವೆಬ್ ಸೈಟು ವರ್ಕ್ ಆಗದಿರೆ ಎಂತಯ್ಯ?
ಹೊಸ ಹೊಸ ಕೆಲಸದವರನ್ನು ಸೇರ್ಸಿಕೊಂಡು
ಕೆಲಸ ಪೂರ್ತಿ ಮಾಡದೇ ಇದ್ದರೆ ಎಂತಯ್ಯ?
ಓಪನ್ ವರ್ಕ್ ಸ್ಪೇಸ್ ಎಂದು ಕೊಂಡು
ಗದ್ದಲಕೆ ನಾಚಿದೊಡೆ ಎಂತಯ್ಯ?
ಟೆಕ್ನಾಲಜಿ ಕೆಲಸಗಾರನಾದ ಮೇಲೆ
ಸ್ತುತಿ-ನಿಂದೆಗಳು ಬಂದರೆ ಸಮಾಧಾನಿಯಾಗಿರಬೇಕು.
***
Twice a year, during performance review time...
ಕಳಬೇಕು
ಕೊಲಬೇಕು
ಹುಸಿಯ ನುಡಿಯಲು ಬೇಕು
ಮುನಿಯಬೇಕು
ತನ್ನ ಬಣ್ಣಿಸ ಬೇಕು
ಇದಿರ ಹಳಿಯಲು ಬೇಕು
ಇದೇ ಅಂತರಂಗ ಶುದ್ಧಿ
ಇದೇ ಬಹಿರಂಗ ಶುದ್ಧಿ
ಇದೇ ನಮ್ಮ (ಬಾಸ್ ಎಂಬ) ಕ್ಯಾಪಿಟಲಿಸ್ಟಿಕ್
ದೇವನ ಒಲಿಸುವ ಪರಿ.
End of year, around Ratings & Rankings
ಸ್ಕಿಲ್ ಇದ್ದವರು ಕೋಡ್ ಅನ್ನು ಬರೆಯುವರು
ನಾನೇನು ಮಾಡಲಯ್ಯ ಬಡವನಯ್ಯಾ
ನಾನು ಆಫೀಸಿಗೆ ಬರುವುದೇ ಹೆಚ್ಚು,
ಬಂದು ಕಾಲ ಕಳೆಯುವುದೇ ದೊಡ್ಡದು,
ನನ್ನ ಇರುವಿಕೆಯೇ ಹೊನ್ನ ಕಳಸವಯ್ಯಾ,
ಎಲಾ ಬಾಸ್ ಕೇಳಾ,
ನಿಂತೋರಿಗೆ ಸುಖವಿಲ್ಲ, ಹಾರಾಡಿದವರಿಗೆ ಹಸಿವಿಲ್ಲ.
When promotions are few and far between
ಕೆಲ್ಸವಿದ್ದು ಫಲವೇನು? ಗ್ರೋತ್ ಇಲ್ಲದನ್ನಕ?
ಗ್ರೋತ್ ಇದ್ದು ಫಲವೇನು? ದುಡ್ಡಿಲ್ಲದನ್ನಕ?
ದುಡ್ಡಿದ್ದು ಫಲವೇನು? ಟೈಟಲ್ ಇಲ್ಲದನ್ನಕ?
When all else fail...
ಮೋಕ್ಷಕ್ಕೆ ಹೋರಾಡುವಣ್ಣಗಳಿರಾ, ಒಂದು ಹೆಜ್ಜೆ ಮುಂದೆ ಹೋದರೆ
ಮೋಕ್ಷಕ್ಕೆ ನೀವೇ ನಿಚ್ಚಣಿಗೆ
ಮೋಕ್ಷಕ್ಕೋಸ್ಕರ ಹೋರಾಡಿ ಮುಂದೆ ಹೋಗದಿರ್ದೆಡೆ
ಆ ಹರನಿಲ್ಲನೆಂದನಂಬಿಗ ಚೌಡಯ್ಯ.
During training time
ಮೂರ್ಖಂಗೆ ಯಾರು ಬುದ್ದಿ ಹೇಳಿದರೂ
ಗೋರ್ಕಲ್ಲ ಮೇಲೆ ನೂರ್ಕಾಲ ಮಳೆಕರೆದಂತೆ ಸರ್ವಜ್ಞ.
When deliverables are not delivered on time...
ರಿಸೋರ್ಸುಗಳನು ಕೊಂಬಾಗ ಹಾಲೋಗರ ಉಂಡಂತೆ
ಕ್ಲೈಂಟುಗಳು ಬಂದು ಎಳೆವಾಗ, ಕಿಬ್ಬದಿಯ
ಕೀಲು ಮುರಿದಂತೆ ಸರ್ವಜ್ಞ.
When deliverables fail to function as per requirements...
ಹೊಸ ಹೊಸ ಟೆಕ್ನಾಲಜಿಯನು ಬಳಸಿಕೊಂಡು
ವೆಬ್ ಸೈಟು ವರ್ಕ್ ಆಗದಿರೆ ಎಂತಯ್ಯ?
ಹೊಸ ಹೊಸ ಕೆಲಸದವರನ್ನು ಸೇರ್ಸಿಕೊಂಡು
ಕೆಲಸ ಪೂರ್ತಿ ಮಾಡದೇ ಇದ್ದರೆ ಎಂತಯ್ಯ?
ಓಪನ್ ವರ್ಕ್ ಸ್ಪೇಸ್ ಎಂದು ಕೊಂಡು
ಗದ್ದಲಕೆ ನಾಚಿದೊಡೆ ಎಂತಯ್ಯ?
ಟೆಕ್ನಾಲಜಿ ಕೆಲಸಗಾರನಾದ ಮೇಲೆ
ಸ್ತುತಿ-ನಿಂದೆಗಳು ಬಂದರೆ ಸಮಾಧಾನಿಯಾಗಿರಬೇಕು.
No comments:
Post a Comment