ಬರಹದತ್ತ ಮುಖ ಮಾಡಿಸಿದ ಕೋವಿಡ್
ಇವತ್ತಿಗೆ ಬರೋಬ್ಬರಿ ಏಳು ವಾರವಾಯಿತು... ನನ್ನಂಥವರು ಮನೆಯಿಂದಲೇ ಕೆಲಸ ಮಾಡಲು ಶುರು ಮಾಡಿ. ಈ ಕೋವಿಡ್‌ನಿಂದ ಯಾರು ಯಾರಿಗೆ ಏನೇನು ಅನುಕೂಲ-ಅನಾನುಕೂಲವಾಗಿದೆಯೋ, ನನಗಂತೂ ಇದು ಬರಹ-ಓದು-ಸಂಭಾಷಣೆಗಳಲ್ಲಿ ತೊಡಗಿಸಿದೆ.
ಏನೇನು ಹೊಸತುಗಳು ಈ ಏಳು ವಾರದಲ್ಲಿ ಶುರುವಾದವು ಎಂದು ಪಟ್ಟಿ ಮಾಡುತ್ತಾ ಹೋದಾಗ ಈ ಕೆಳಗಿನವು ಕಂಡು ಬಂದವು:
- ಮೂರು ಹೊತ್ತೂ ಮನೆ ಊಟ ನಮಗೆ ಬೇಕಾದಂತೆ ಮಾಡಿಕೊಳ್ಳುವ ಸಲುವಾಗಿ ಇತ್ತೀಚೆಗೆ ಕುಕಿಂಗ್ ಶೋಗಳನ್ನು ನೋಡಲು ಶುರು ಮಾಡಿದ್ದು, ಜೊತೆಗೆ ರೆಸಿಪಿಗಳನ್ನು ಹುಡುಕಿದ್ದು
- ಮನೆಯಲ್ಲೇ ಇದ್ದುದರಿಂದ ನಾಲ್ಕೈದು ಜೊತೆ ಬಟ್ಟೆಗಳನ್ನೇ ಪುನರಾವರ್ತನೆಯಾಗಿ ಬಳಸಿದ್ದು
- ಈ ವರೆಗೆ ಮರೆತು ಹೋಗಿದ್ದ ಅನೇಕ ಬ್ಲಾಗುಗಳನ್ನು ತೆರೆದು ಓದಿದ್ದು
- ಈ ವರೆಗೆ ಮರೆತಂತಿದ್ದ "ಅಂತರಂಗ"ದ ಬಾಗಿಲು ತೆಗೆದು ಮತ್ತೆ ಬರೆಯಲು ಶುರು ಮಾಡಿದ್ದು (ಏಪ್ರಿಲ್ ತಿಂಗಳಿನಲ್ಲಿ ದಿನಕ್ಕೊಂದು ಲೇಖನವನ್ನು ಹಾಕಿದ್ದು)
- ಸ್ನೇಹಿತರ ಬಳಿ ಒಳ್ಳೆಯ ಸಿನಿಮಾಗಳ ರೆಕಮೆಂಡೇಷನ್ ಅನ್ನು ಕೇಳಿ ಸಿನಿಮಾ ನೋಡಿದ್ದು
- ಬಂಧುಗಳ ಜೊತೆ, ಸ್ನೇಹಿತರ ಜೊತೆ ದೀರ್ಘಕಾಲ ಮಾತನಾಡಿದ್ದು
- ವಾರದಲ್ಲಿ ಒಂದು ನಿಮಿಷವೂ ಕೂಡ ಕಾರಿನಲ್ಲಿ ಪ್ರಯಾಣಿಸದೇ ಇದ್ದದ್ದು
- ಬಂದಂತ ವಾಟ್ಸಾಪ್ ಮೆಸ್ಸೇಜುಗಳನ್ನೆಲ್ಲ ನೋಡಿದ್ದು
- ವೀಕೆಂಡ್ ದಿನಗಳನ್ನು ಹೇಗೆ ಕಳೆಯುವುದಪ್ಪಾ ಎಂದು ಚಿಂತಿಸಿದ್ದು
- ನಮ್ಮ ಪಕ್ಕದ ಮನೆಯವರ ಜೊತೆ ವೆಬೆಕ್ಸ್ ಕಾನ್‌ಫರೆನ್ಸಿನಲ್ಲಿ ಮಾತನಾಡಿದ್ದು
- ಮನೆಯ ಮೂಲೆ ಮೂಲೆಯನ್ನೂ (ಸ್ಟೆಪ್ಸ್ ಕೌಂಟ್ ಆಗಲೆಂದು) ತಿರುಗಿದ್ದು
- (ಅನೇಕ ವರ್ಷಗಳ ನಂತರ) ಮನೆಯನ್ನು ವ್ಯಾಕ್ಯೂಮ್ ಕ್ಲೀನ್ ಮಾಡಿದ್ದು
ಇವೆಲ್ಲ ಏನೋ ದೊಡ್ಡ ವಿಷಯ ಎಂದು ಮೇಲ್ನೋಟಕ್ಕೆ ಅನ್ನಿಸದೇ ಇರಬಹುದು. ಆದರೆ, ಎರಡು ತಿಂಗಳ ಹಿಂದಿನ (ವ್ಯವಸ್ಥಿತ) ವ್ಯಸ್ತ ಜೀವನ ಇಂದು ಅವ್ಯಸ್ತವಾಗಿದೆ ಎಂದು ಹೇಳಲು ಬಾರದು. ಆದರೆ, ನಮ್ಮೆಲ್ಲರಿಗೂ ಸಿಗುವುದು ಇಂತಿಷ್ಟೇ ಸಮಯವಾದರೂ ಅದನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರಲ್ಲಿ ನಮ್ಮ ವ್ಯಕ್ತಿತ್ವ ನಿರ್ಮಾಣಗೊಳ್ಳುತ್ತದೆ. ನಾವು ನಮ್ಮ ಬದುಕಿನಲ್ಲಿ ಸಾಧಿಸಿರುವುದು ಒಂದು ಸಾಸಿವೆ ಕಾಳು ಗಾತ್ರದಷ್ಟು ಮಾತ್ರ ಎನ್ನುವ ಭಾವನೆ ಮೂಡಲು ಗುರು ಶಂಕರಾಚಾರ್ಯರು ಕೇವಲ 32 ವರ್ಷದ ಅವರ ಜೀವಿತದಲ್ಲಿ ಎಷ್ಟೊಂದನ್ನು ಸಾಧಿಸಿದ್ದಾರೆ ಎಂದು ನೋಡಿದರೆ ಗೊತ್ತಾಗುತ್ತದೆ. ಆಗಿನ ಕಾಲದಲ್ಲಿ ಚಿಕ್ಕ ವಯಸ್ಸಿನಲ್ಲಿ ಸನ್ಯಾಸವನ್ನು ಸ್ವೀಕರಿಸಿ, ಭರತ ಖಂಡದ ಉದ್ದಕ್ಕೂ ಅಲೆದಾಡಿ ಅದೆಷ್ಟು ಸಾಧನೆಗಳನ್ನು ಮಾಡಿದ್ದಾರೆ ಎಂದು ಆಶ್ಚರ್ಯವಾಗುತ್ತದೆ.
***
ಈ ಕೋವಿಡ್ ದಯೆಯಿಂದ ನಿಮ್ಮ ನಿಮ್ಮ ಹೊಸ ಅನುಭವಗಳೇನೇನಿವೆ? ಹಂಚಿಕೊಳ್ಳಬಹುದೇ?

No comments:
Post a Comment