ಹವ್ಯಾಸ-ದೇವರು-ಸ್ವಾತಂತ್ರ್ಯ
ಯಾವುದೇ ಒಂದು ಹವ್ಯಾಸ ಬೆಳೆಯ ಬೇಕಾದರೂ ಕನಿಷ್ಠ ಮೂರು ವಾರಗಳ ಕಾಲ ಬೇಕಾಗುತ್ತದೆ ಎಂಬುದು ಹಲವರ ಅನುಭವ. ಈ ಕಳೆದ ಮೂರು ವಾರಗಳಲ್ಲಿ (ಮನೆಯಲ್ಲಿಯೇ ಕುಳಿತು) ಮನೆಯಿಂದಲೇ ಕೆಲಸ ಮಾಡುವ ನನ್ನಂಥ ಎಷ್ಟೋ ಜನ ಟೆಕ್ನಾಲಜಿ ಮ್ಯಾನೇಜರುಗಳು ಈ ಹೊಸ ಪರಿಯ ಕೆಲಸಕ್ಕೆ ರೂಢಿಯಾಗಿಲ್ಲ? ಆದರೆ, ಮನೆಯಲ್ಲಿಯೇ ಅಥವಾ ಮನೆಯಿಂದಲೇ ಕೆಲಸ ಮಾಡುವ ಜನರಿಗೆಲ್ಲ ’ಅಂತರಂಗ’ದ ಹೇಳಲೇ ಬೇಕಾದ ಕಿವಿ ಮಾತೊಂದಿದೆ: ಮನೆಯಿಂದಲೇ ಕುಳಿತು ಕೆಲಸ ಮಾಡುವುದೆಂದರೆ ಬೊಕ್ಕ ತಲೆಯ ವ್ಯಕ್ತಿ ಮುಖ ತೊಳೆದ ಹಾಗೆ! ಎಲ್ಲಿ ಶುರು ಮಾಡಿ ಎಲ್ಲಿ ನಿಲ್ಲಿಸಬೇಕು ಎಂಬುದು ಅಷ್ಟು ಸುಲಭವಾಗಿ ತಿಳಿಯದು. ಘಂಟೆಗೊಂದರಂತೆ ಟ್ಯಾಸ್ಕುಗಳು ನಮ್ಮ ತಲೆ ಏರಿ ಕುಳಿತಿರುವಾಗ, ಕೊನೆಯಿಲ್ಲದ ಹಾಗೆ ಇ-ಮೇಲ್‌ಗಳು ಇನ್‌ಬಾಕ್ಸ್‌ನಲ್ಲಿ ಬಂದು ಇಳಿಯುತ್ತಿರುವಾಗ, ಕಂಪನಿಯಲ್ಲಿದ್ದವರೆಲ್ಲ ನಾಳೆಯೇ ಪ್ರಪಂಚದ ಕೊನೆಯೆಂಬಂತೆ ಇನ್ಸ್ಟಂಟ್ ಮೆಸೇಜುಗಳಲ್ಲಿ ತಮ್ಮ ಕಥನಗಳನ್ನೇ ಹೆಣೆಯುತ್ತಿರುವಾಗ - ಎಲ್ಲಿಂದ ಆರಂಭಿಸುವುದು, ಎಲ್ಲಿ ನಿಲ್ಲಿಸುವುದು? ಆಫೀಸಿನಲ್ಲಿದ್ದವರಾದರೆ ಮನೆಗೆ ಹೋಗುತ್ತೇವೆಂದಾದರೂ, ಕಾಫಿ-ಟೀ-ಲಂಚ್ ಬ್ರೇಕ್‌ಗಳನ್ನು ತೆಗೆದುಕೊಳ್ಳುತ್ತೇವೆಂದಾದರೂ ಅತ್ತಿಂದಿತ್ತ ಓಡಾಡುತ್ತಿದ್ದೆವು. ಈಗ ಹಾಗಿಲ್ಲ. ಡೆಸ್ಕ್ ಅನ್ನು ಬಿಟ್ಟು ಬದಿಗೆ ಬಂದರೆ, ಯಾರದ್ದಾದರೊಬ್ಬರದ್ದು ಕಾಟ ತಪ್ಪಿದ್ದಲ್ಲ. ಮನೆಯೇ ಆಫೀಸು, ಆಫೀಸಿನ ಪಕ್ಕದಲ್ಲೇ ಅಡುಗೆ ಮನೆ, ಅದರ ಮಗ್ಗುಲಲ್ಲೇ ಬಾತ್‌ರೂಮು... ಹೀಗೆ ಗೂಟಕ್ಕೆ ಕಟ್ಟಿ ಹಾಕಿದ ಘೂಳಿಯಂತಾದ ಮನಸ್ಸು ಇದ್ದ ಸಣ್ಣ ಆವರಣದಲ್ಲೇ ಸದಾ ಗಿರಕಿ ಹೊಡೆಯುತ್ತಿರುತ್ತದೆ. ಮೊನ್ನೆ ಯಾವುದೇ ಕಾರಣಕ್ಕೋ ಏನೋ ಚಪ್ಪಲಿ ಇಡುವ ಕ್ಲಾಸೆಟ್ಟಿನ ಬಾಗಿಲು ತೆಗೆದು ನೋಡಿದರೆ, ಅಲ್ಲಿ ನಾನು ಹಾಕುವ ಡ್ರೆಸ್ ಶೂಗಳು, ಹಳೆಯ ಕಸ್ಟಮರ್ ಅನ್ನು ನಕ್ಕು ಸ್ವಾಗತಿಸುವ ಗೂಡು ಅಂಗಡಿಯ ಮಾಲಿಕನಂತೆ ಕಂಡುಬಂದವು. ನಾನು ಅವುಗಳನ್ನು ಮುಟ್ಟಿಯೂ ಸಹ ನೋಡಲಿಲ್ಲವಲ್ಲ ಎನ್ನುವ ಕಳಕಳಿಯಲ್ಲಿಯೇ ಕ್ಲಾಸೆಟ್ ಬಾಗಿಲು ಹಾಕುತ್ತಿದ್ದಂತೆ ಅನ್‌ಲೈನ್ ಅಡ್ವರ್‌ಟೈಸ್‌ಮೆಂಟ್‌ನಲ್ಲಿ ಬಂದು ಹೋಗುವ ಮುಖಗಳಾಗಿ ಮಾಯವಾದವು॒! ಇನ್ನು ಬಾಗಿಲ ಬಳಿಯೇ ಬಿಡುವ ಶೂಗಳ ಕಥೆ ಇದಾದರೆ, ಮೇಲೆ ಕೊಂಡೊಯ್ದು (ಅಚ್ಚುಕಟ್ಟಾಗಿ) ಇಟ್ಟಿದ್ದ ಕೋಟು-ಸೂಟುಗಳು, ನಾನು ಇನ್ಯಾರದೋ ಮನೆಯನ್ನು ಹೊಕ್ಕೆನೇನೋ ಎಂಬ ಆಶ್ಚರ್ಯ ಸೂಚಕ ಭಾವನೆಯನ್ನು ನನ್ನ ಮುಖದ ಮೇಲೆ ಹೊರಡಿಸಿದವು. ಕಳೆದ ಮೂರು ವಾರಗಳಲ್ಲಿ ನಾವು ಬಳಸಿದ ಸಂಪನ್ಮೂಲಗಳನ್ನು ನೆನೆದುಕೊಂಡರೆ "ಸಮರಸದ ಬಾಳುವೆಗೆ ಸರಳ ಜೀವನವೇ ಕಾರಣ॒!" ಎಂಬ ಪುಸ್ತಕವನ್ನು ಬರೆಯುವಷ್ಟು ಮಟೀರಿಯಲ್ ಸಿಗುವುದಂತೂ ಖಂಡಿತ!
***
ಈ ಕೋರೋನಾ ವೈರಸ್ಸಿನ ದೆಸೆಯಿಂದ ನಮ್ಮ ದೇವರುಗಳಿಗೆ ಒಂದು ಹೊಸದಾದ ಪ್ರೌಢಿಮೆ ಬಂದಿದೆ. ಸಂಕಟಕಾಲದಲ್ಲಿ ವೆಂಕಟರಮಣ ಎನ್ನುವಂತೆ ಎಲ್ಲ ಮಾನವ ಆತ್ಮಗಳೂ ಸಹ ಅವುಗಳ ನೆಚ್ಚಿನ ದೇವರನ್ನು ನೆನೆಯುತ್ತಿರುವಾಗ, ನಮ್ಮೆಲ್ಲರ ಮೊರೆಯನ್ನು ಏಕ ಕಾಲದಲ್ಲಿ ದೇವರುಗಳನ್ನು ತಲುಪಿಸುತ್ತಿರುವ ಕಮ್ಯುನಿಕೇಷನ್ ನೆಟ್‌ವರ್ಕ್‌ನಲ್ಲಿಯೂ ಸಹ ಕಂಜೆಷನ್ ಇರುವುದರಿಂದ, ಬ್ಯಾಂಡ್‌ವಿಡ್ತ್ ಸಮಸ್ಯೆಗಳು ಖಂಡಿತ ಇರಬಹುದು. ಅಂತೆಯೇ ವಿಶ್ವದ ಏಳೂ ಮುಕ್ಕಾಲು ಬಿಲಿಯನ್ ಮಾನವ ರೂಪದಲ್ಲಿನ ಆತ್ಮಗಳು ಅರ್ಧ ಸತ್ತ (ಅಥವಾ ಅರ್ಧ ಬದುಕಿರಬಹುದಾದ) ಜೀವಿಯ ವಿರುದ್ಧ ರಕ್ಷಿಸು ಎಂದು ಮೊರೆ ಹೊತ್ತಿರುವಾಗ, ದಶಾವತಾರದ ನಂತರ ಮುಂದಿನ ಅವತಾರ ಏನಾಗಬಹುದು ಎಂದು ದೇವರೂ ಯೋಚಿಸಬೇಕಾಗುತ್ತದೆ.
೧. ಮೀನಾಗಿ ಬಂದವನು ಪ್ರಳಯದಿಂದ ರಕ್ಷಿಸಿದ
೨. ಆಮೆಯಾಗಿ ಬಂದವನು ಸಮುದ್ರ ಮಂಥನದ ಭಾರವನ್ನು ಹೊತ್ತ
೩. ಹಂದಿಯಾಗಿ ಬಂದವನು ಹಿರಣ್ಯಾಕ್ಷನಿಂದ ಭೂಮಿಯನ್ನು ರಕ್ಷಿಸಿದ
೪. ನರಸಿಂಹನಾಗಿ ಬಂದವನು ಸಾವೇ ಇಲ್ಲದ ಹಿರಣ್ಯಕಷ್ಯಪುವನ್ನು ಸಂಹರಿಸಿದ
೫. ಕುಳ್ಳನಾಗಿ ಬಂದವನು ಬಲಿಯನ್ನು ಪಾತಾಳಕ್ಕೆ ತಳ್ಳಿದ
೬. ಕೊಡಲಿ ರಾಮನಾಗಿ ಬಂದು ಕ್ಷತ್ರಿಯ ಸಂಹಾರಕ್ಕೆ ಇಳಿದು, ಮಹೇಂದ್ರಗಿರಿಯಲ್ಲಿ ಚಿರಂಜೀವಿಯಾಗಿ ನೆಲೆಸಿದ
೭. ರಾಮನಾಗಿ ರಾವಣ ಸಂಹಾರ ಮಾಡಿದ
೮. ಕೃಷ್ಣನಾಗಿ ಕೌರವ ಸಂಹಾರ ಮಾಡಿದ (ಬಲರಾಮನ ಶೇಷನ ಅವತಾರವೂ ಇದೇ ಅವಧಿಯಲ್ಲಿ ಸೇರುತ್ತದೆ)
೯. ಬುದ್ಧನಾಗಿ ಎಲ್ಲರಿಗೂ ಬೋಧಿಸಿದ
೧೦. ಕಲ್ಕಿಯಾಗಿ ಬಿಳಿಯ ಕುದುರೆಯನ್ನೇರಿ ಕಲಿಯುಗದ ಉದ್ದಕ್ಕೂ ಉಲ್ಕಾಪಾತವಾಗಿ ತಿರುಗುತ್ತಿದ್ದಾನೆ... ಕಲಿಯುಗದಲ್ಲಿ ಅಧರ್ಮ ತಾಂಡವವಾಡಿದರೆ ಮತ್ತೆ ಬಂದೇ ಬಿಟ್ಟಾನು, ಉಲ್ಕೆಯಾಗಿ ಅಪ್ಪಳಿಸುವ ಮುಖೇನ ಪ್ರಜ್ವಲಿಸಿಬಿಟ್ಟಾನು!
ಪ್ರಭೂ! ಈ ಕಣ್ಣಿಗೆ ಕಾಣದ ಜೀವಿಯಿಂದ ನಮ್ಮೆಲ್ಲರ ರಕ್ಷಣೆ ಹೇಗೆ ಸಾಧ್ಯ? ನೀನೇನಾದರೂ ವಿಶೇಷ ವಿಕಿರಣಗಳನ್ನು ಹೊರಸೂಸಿ ಗಾಳಿಯಲ್ಲಿನ ಈ ಅಣುಜೀವಿಗಳನ್ನು ಮಾತ್ರ ನಾಶಪಡಿಸಿದರೆ ಆಗಬಹುದು! (ಮಾನವನಿಂದ ನಿರ್ನಾಮವಾಗುತ್ತಿರುವ ಜೀವಿಗಳ ಮೊರೆಯನ್ನೇಕೆ ನೀನು ಆಲಿಸುತ್ತಿಲ್ಲ? ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ, ಅದೇಕೆ? ಮಾನವರಲ್ಲದ ಜೀವಿಗಳು ನಿನ್ನ ಮಕ್ಕಳಲ್ಲವೇನು?)
***
ಒಂದು ವಸ್ತು ಇಲ್ಲದಾಗಲೇ ಅದರ ಬೆಲೆ ಗೊತ್ತಾಗುವುದಂತೆ. ಈ "ವಸ್ತು"ಗಳ ಪಟ್ಟಿಯಲ್ಲಿ ನಮ್ಮ "ಸ್ವಾತಂತ್ರ್ಯ"ವೂ ಸೇರಿದೆ. ನಾವೆಲ್ಲ ಸಂಘಜೀವಿಗಳು. ನಮ್ಮ ನಮ್ಮ ಮನೆಗಳಲ್ಲಿ ನಮಗೆ ಬೇಕಾದ ಐಶಾರಾಮ, ಭೌತಿಕವಸ್ತುಗಳು, ನಮ್ಮವರು, ಮುಖ್ಯವಾಗಿ ಸಮಯ, ಇವೆಲ್ಲ ಇದ್ದಾಗಲೂ ಕೂಡ ನಮ್ಮಲ್ಲಿ ಏನೋ ಒಂದು ಅಪರಿಪೂರ್ಣ ಭಾವನೆ ತುಂಬಿಕೊಳ್ಳೋದಿಲ್ಲವೇ? ಹಾಗೆ. ಈ ಆಯ್ಕೆಯನ್ನು - ಸ್ವಾತಂತ್ರ್ಯ, ಮುಕ್ತಿ, ತೆರವು, ಬಿಡುಗಡೆ, ಅನಿರ್ಬಂಧಿತ ಸ್ಥಿತಿ, ವಿಮೋಚನೆ, ಸ್ವಚ್ಛಂದತೆ, ಸ್ವತಂತ್ರತೆ - ಎನ್ನುವ ಅನೇಕ ಪದಗಳಲ್ಲಿ ನಾವು ಅಳೆದರೂ ಅದರ ಮಹತ್ವವನ್ನು ಅಷ್ಟು ಸುಲಭವಾಗಿ ಸಾರಲಾಗುವುದಿಲ್ಲ. ಚಿಕ್ಕ-ದೊಡ್ಡ ಸ್ಕ್ರೀನುಗಳಲ್ಲಿರುವ ಯಾವುದೇ ಮಾಹಿತಿ-ಮನರಂಜನೆಯನ್ನು ನೋಡಿದರೂ ಮನ ತುಂಬದು. ಅದೇ, ಅಪರೂಪಕ್ಕೊಮ್ಮೆ ಕರೆ ಮಾಡುವ ಹಳೆಯ ಸ್ನೇಹಿತರನ್ನು ಯಾವಾಗ ಬೇಕಾದರೂ ಆಗ ಕರೆ ಮಾಡಿ ಮಾತನಾಡಿ, ನಿಮಗೆ ಗೊತ್ತಿಲ್ಲದಂತೆ ಒಂದು ಘಂಟೆ ಆರಾಮವಾಗಿ ಕಳೆದುಹೋಗುತ್ತದೆ. ನಮ್ಮ ನಮ್ಮ ಗೂಡುಗಳಲ್ಲಿ ನಮ್ಮನ್ನು ಕಟ್ಟಿ ಹಾಕಿದ್ದರೂ ಸಹ, ಈ ಕೋವಿಡ್ ದೆಸೆಯಿಂದ ನಾವೆಲ್ಲರೂ ದೂರವಿದ್ದೂ ಹತ್ತಿರವಾಗಿದ್ದೇವೆ ಎನ್ನಬಹುದು. ಆಯ್ಕೆ, ಸ್ವಾತಂತ್ರ್ಯ, ಸಹಬಾಳ್ವೆಯ ಸಮತೋಲನದಲ್ಲಿ ನಮಗೆಲ್ಲ ಬದುಕಿನ ಗಂಭೀರ ಮುಖವನ್ನು ದರ್ಶನ ಮಾಡಿಸಿದ ಕೋವಿಡ್‌ಗೆ ಜೈ॒!

No comments:
Post a Comment