ಮೋಡ ಕರಗುವ ಸಮಯ
ಸೋಶಿಯಲ್ ಅಥವಾ ಫಿಸಿಕಲ್ ಡಿಸ್ಟನ್ಸಿಂಗ್?
ಈ ಕರೋನಾ ವೈರಸ್ ಹಾವಳಿಯಿಂದಾಗಿ ಇತ್ತೀಚೆಗೆ ಇನ್ನೊಂದು phrase ನಮ್ಮನ್ನೆಲ್ಲ ಆಳುತ್ತಿದೆ: ಸೋಶಿಯಲ್ ಡಿಸ್ಟನ್ಸಿಂಗ್ (social distancing). ನಾವೆಲ್ಲರೂ ಈ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಒಬ್ಬರಿಂದ ಮತ್ತೊಬ್ಬರ ಕಾಂಟ್ಯಾಕ್ಟ್ ಅನ್ನು ಕಡಿಮೆ ಮಾಡುವುದು, ಗ್ರೂಪ್/ಗ್ಯಾದರಿಂಗ್‌ಗಳಿಂದ ಸಂಪೂರ್ಣವಾಗಿ ದೂರವಿರುವುದು ಎಂದರ್ಥ.
ಒಂದು ಕುಟುಂಬದ ಸದಸ್ಯರಲ್ಲಿ ಯಾರಿಗೂ ಖಾಯಿಲೆ ಅಥವಾ ರೋಗದ ಲಕ್ಷಣಗಳು ಇಲ್ಲದಿದ್ದರೆ, ಅವರೆಲ್ಲರೂ ಒಟ್ಟಿಗೆ ಇರಬಹುದು. ಆದರೆ, ಅದೇ ಕುಟುಂಬದಲ್ಲಿ ಯಾರೊಬ್ಬರಿಗಾದರೂ ಸೋಂಕು ತಗಲಿದರೆ ಅವರನ್ನು ಕೂಡ ಪ್ರತ್ಯೇಕಿಸಿ ಇಡಬೇಕಾಗುತ್ತದೆ.
ಇದು ನಮ್ಮೆಲ್ಲರ ಸೋಶಿಯಲ್ ಡಿಸ್ಟನ್ಸಿಂಗ್ ಅಥವಾ ಇದು ಭೌತಿಕವಾದ ಡಿಸ್ಟನ್ಸಿಂಗ್? ಇದಕ್ಕೇಕೆ ಫಿಸಿಕಲ್ ಡಿಸ್ಟನ್ಸಿಂಗ್ ಅನ್ನೋದಿಲ್ಲ ಎಂದು ಕೆಲವರು ಯೋಚಿಸಬಹುದು. Social distancing, ಎಂದು ಹೇಳುವಾಗ ಅಲ್ಲಿ ಜನರು ಒಬ್ಬರಿಂದ ಮತ್ತೊಬ್ಬರಿಗೆ ಇಂತಿಷ್ಟು ದೂರದಲ್ಲಿ ಇರಿ ಎಂದು ಹೇಳುತ್ತಿದ್ದಾರೆ, ಗುಂಪುಗಳಲ್ಲಿ ಸೇರಬೇಡಿ ಎಂದು ಹೇಳುತ್ತಿದ್ದಾರೆ - ಇಲ್ಲಿ ಅವರು Social ಎಂದು ಬಳಸುತ್ತಿರುವುದು ’ಸಾಮಾಜಿಕ’ ಎನ್ನುವ ಪದದ ಸಮನಾರ್ಥಕ. ಆದರೆ, ಒಬ್ಬರಿಂದ ಮತ್ತೊಬ್ಬರು ದೂರವಿದ್ದ ಮೇಲೆ, ಅಲ್ಲಿ ಭೌತಿಕವಾಗಿ (physically) ಯಾವುದೇ ಕಾಂಟ್ಯಾಕ್ಟ್ ಬರುವುದೇ ಇಲ್ಲವಾದ್ದರಿಂದ, ಈ ಕೊರೋನಾ ವೈರಸ್ ಸಂಬಂಧವಾಗಿ ಎಲ್ಲರೂ Social Distancing ಎಂತಲೇ ಹೇಳುತ್ತಿರುವುದು.
ಜೊತೆಗೆ, ಇಲ್ಲಿ ಸೋಶಿಯಲ್ ಡಿಸ್ಟನ್ಸಿಂಗ್ ಅನ್ನು ಒಂದು ಸಮುದಾಯದ ಪರವಾಗಿ ಹೇಳುವಂತೆಯೂ ಪರಿಗಣಿಸಬಹುದು. ಜನರು ಗುಂಪುಗಳಲ್ಲಿ ಭಾಗವಹಿಸುತ್ತಿರುವಾಗ ಒಬ್ಬರನ್ನು ಪರಸ್ಪರ ಮುಟ್ಟದೇ ಇದ್ದರೂ ಸಹ, ಅವರೆಲ್ಲರೂ ಒಂದು ಕೋಣೆಯಲ್ಲಿ ಸೇರಿಕೊಂಡರೆಂದರೆ, ಅಲ್ಲಿ ಕೋವಿಡ್‌ನಂತಹ ಸಾಂಕ್ರಾಮಿಕ ರೋಗಗಳು ಹರಡಲು ಸಾಧ್ಯವಿದೆ. ಈ ಕಾರಣದಿಂದಲೇ, ಹತ್ತಕ್ಕಿಂತ ಹೆಚ್ಚು ಜನರು ಒಟ್ಟಿಗೆ ಸೇರಬಾರದು ಎಂದು ಹೇಳುತ್ತಿರುವುದು.
***
ರಾಜ್ಯಗಳ ಬಾರ್ಡರುಗಳು
ಉತ್ತರ ಅಮೇರಿಕದ ಹೆಗ್ಗಳಿಕೆಯಾಗಿ ನಾವೆಲ್ಲ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ "ಫ್ರೀ" ಆಗಿ ಓಡಾಡಿಕೊಂಡಿದ್ದೆವು. ಈ ಕೋವಿಡ್ ದಯೆಯಿಂದ, ಜನರ ಸ್ವಾತಂರ್ತ್ಯಕ್ಕೆ ಮೊಟ್ಟ ಮೊದಲ ಸಲ ಉತ್ತರ ಅಮೇರಿಕದಲ್ಲಿ ಸಂಕಷ್ಟ ಬಂದಿದೆ. ಈಗ ಅಮೇರಿಕದ ಸಣ್ಣ ರಾಜ್ಯಗಳಲ್ಲೊಂದಾದ ರೋಡ್ ಐಲ್ಯಾಂಡ್, ತನ್ನ ರಾಜ್ಯಕ್ಕೆ ಬರುವ ಹೊರ ರಾಜ್ಯದ ಪ್ರಯಾಣಿಕರನ್ನು (ಅದರಲ್ಲೂ ನ್ಯೂ ಯಾರ್ಕ್‌ನವರನ್ನು) ೧೪ ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕೆಂದು ಸೂಚಿಸುತ್ತಿದೆ. ಇದೇ ಮಾದರಿ ಉಳಿದ ರಾಜ್ಯಗಳಲ್ಲೂ ನಡೆಯುತ್ತಿದೆ, ಎಂದು ಕೇಳಿಬರುತ್ತಿದೆ.
ನಮ್ಮ ಕರ್ನಾಟಕದಿಂದ ತಮಿಳು ನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪದೇಶ ರಾಜ್ಯಗಳಿಗೆ ಹೋಗಿ ಬಂದವರಿಗೆ ಗೊತ್ತಾಗುತ್ತದೆ. ಒಂದು ಗಡಿ ದಾಟಿ ಬಂದ ಮೇಲೆ ಅದೆಷ್ಟು ಬದಲಾವಣೆಗಳು ಕಾಣಸಿಗುತ್ತವೆ ಎಂದು. ಆದರೆ, ಇಂದು ಮೊಟ್ಟ ಮೊದಲ ಬಾರಿ ಅಮೇರಿಕದಲ್ಲಿ ಗಡಿಯನ್ನು ಮುಚ್ಚುವುದರ ಮೂಲಕ ಅಲ್ಲದೇ ರಾಜ್ಯಗಳ ಗಡಿಗಳಲ್ಲಿ ಪೋಲೀಸರು ಕಾಯುತ್ತಿರುವುದರ ಮೂಲಕ free ಯಾಗಿದ್ದ ದೇಶ ಮೊಟ್ಟ ಮೊದಲ ಬಾರಿಗೆ ಕೋವಿಡ್ ವೈರಸ್ಸಿನ ಸಂಕೋಲೆಗಳಲ್ಲಿ ಸುತ್ತಿಕೊಂಡು ಬಳಲುತ್ತಿದೆ ಎನ್ನುವಂತಾಗಿದೆ.
***
ಮೋಡ ಕರಗುವ ಸಮಯ
ಇಂದು ಮಧ್ಯಾಹ್ನ ಒಳ್ಳೆಯ ಬಿಸಿಲಿನ ಸಮಯ ನಮ್ಮ ಮನೆಯ ಹೊರಗಡೆಯ ಥರ್ಮಾಮೀಟರಿನಲ್ಲಿ 66 ಡಿಗ್ರಿ (ಸುಮಾರು 17 ಡಿಗ್ರಿ ಸೆಲ್ಸಿಯಸ್) ತೋರಿಸುತ್ತಿತ್ತು. ನಮ್ಮ ಮನೆಯ ಹಿಂದಿನ ಡೆಕ್‌ನಲ್ಲಿ ಒಳ್ಳೆಯ ಗಾಳಿ ಬೀಸುತ್ತಿತ್ತು. ಮೇಲೆ ಶುಭ್ರವಾದ ಆಕಾಶ. ಯಾರು ಹೊರಗೆ ಬರಲಿ ಬಿಡಲಿ, ಸೂರ್ಯದೇವ ತನ್ನ ದೈನಂದಿನ ಕಾರ‍್ಯಾಚರಣೆಯನ್ನು ಮುಂದುವರೆಸಿ ಮೇಲೇರಿ ಕೆಳಗಿಳಿಯುತ್ತಿದ್ದ. ಪಶ್ಚಿಮದ ಕಡೆ ಒಂದಿಷ್ಟು ಬಿಳಿಯ ಮೋಡಗಳು ಹಿಂಡು ಹಿಂಡಾಗಿ ತುಂಬಿಕೊಂಡಿದ್ದವು ಎನ್ನುವುದನ್ನು ಬಿಟ್ಟರೆ, ಉಳಿದ ಕಡೆಯೆಲ್ಲ ಶುಭ್ರವಾದ ನೀಲಾಕಾಶವಿತ್ತು.
ಇಷ್ಟು ದಿನ ಹೊರಗೆ ಬರದೆ ಇದ್ದುದರಿಂದಲೋ ಏನೋ, ನನಗೆ ಈ ತಿಳಿ ಬಿಸಿಲು ಬಹಳ ಅಪ್ಯಾಯಮಾನವಾಗಿ ಗೋಚರಿಸಿತು. ಜೊತೆಗೆ ಹದವಾಗಿ ಕಾದ ಡೆಕ್ಕಿನ ಮರದ ಹಲಗೆಗಳು ಬರಿಗಾಲಿಗೂ ಮುದವನ್ನು ನೀಡುತ್ತಿದ್ದವು. ಆ ಸಮಯಕ್ಕೆ ಖಾಲಿ ಇದ್ದ ಡೆಕ್ ಮೇಲೆ ಮಲಗಿದರೆ ಹೇಗೆ ಎನ್ನಿಸಿದ್ದೇ ತಡ, ತಡ ಮಾಡದೆ ಅಲ್ಲೇ ಒಂದು ಕಡೆ ಮೇಲ್ಮುಖವಾಗಿ ಮಲಗಿಕೊಂಡು, ಸೂರ್ಯ ತಮ್ಮನ್ನೇನು ತಿಂದು ಬಿಡುತ್ತಾನೇನೋ ಎಂದು ಸ್ವಲ್ಪ ಹೆದರಿದಂತೆ ನಿಧಾನವಾಗಿ ಚದುರುತ್ತಿದ್ದ ಮೋಡಗಳ ಕಡೆಗೆ ಗಮನಕೊಟ್ಟೆ.
ಒಂದಿಷ್ಟು ಮೋಡಗಳು ಒಟ್ಟಿಗಿದ್ದವು, ಸ್ವಲ್ಪ ಹೊತ್ತು ಬಿಟ್ಟು ನೋಡುವುದರಲ್ಲಿ, ಅವುಗಳ ಯಾವುದೋ ಒಂದು ತುಣುಕು ಗುಂಪಿನಿಂದ ಮತ್ತೊಂದು ಕಡೆ ಚಲಿಸಿತು. ಸ್ವಲ್ಪ ಹೊತ್ತಿನಲ್ಲಿ ಅದು ಇದ್ದಲ್ಲಿಯೇ ಕರಗಿ ಮಾಯವಾಯಿತು! ಇನ್ನು ಸ್ವಲ್ಪ ಹೊತ್ತಿನಲ್ಲಿ ಮತ್ತೆ ಹಾಗೆಯೇ, ಮೋಡದ ತುಣುಕೊಂದು ಗುಂಪಿನಿಂದ ಬೇರ್ಪಡುತ್ತದೆ, ಸ್ವಲ್ಪ ಹೊತ್ತಿನಲ್ಲಿ ಅದು ನಿಧಾನವಾಗಿ ಕರಗಿ ಗಾಳಿಯೊಳಗೆ ಲೀನವಾಗುತ್ತದೆ - ಒಂದು ರೀತಿಯಲ್ಲಿ ಕಾಟನ್‌ಕ್ಯಾಂಡಿ ತಿನ್ನುವ ಹುಡುಗನ ಮಿಠಾಯಿ ಕಡಿಮೆಯಾಗುವಂತೆ. ಅವೆಲ್ಲ ಮೋಡವೇ ಸರಿ, ಆದರೆ ಆ ಮೋಡದ ತುಣುಕುಗಳು ನನ್ನ ಕಣ್ಣೆದುರೇ ಕರಗಿ ಗಾಳಿಯಲ್ಲಿ ಲೀನವಾಗುವ ಪರಿಯನ್ನು ಇಷ್ಟು ಕ್ಲಿಯರ್ ಆಗಿ ನಾನು ನೋಡಿದ್ದಿಲ್ಲ... ಐದು ನಿಮಿಷದೊಳಗೆ, ಬೀಸುವ ಗಾಳಿ ಜೋರಾಗ ತೊಡಗಿತೆಂದು ಮತ್ತೆ ಮನೆ ಒಳಗೆ ಬಂದೆ, ಆದರೆ ಮೋಡದ ಗುಂಪು ನಿಧಾನವಾಗಿ ಚದುರುತ್ತಲೇ ಇತ್ತು. ಅದೇ ಸಮಯದಲ್ಲಿ, ಎಲ್ಲಿಯೋ ಹುಟ್ಟಿ ಎಲ್ಲೋ ಸೇರುವ, ಮೋಡಕ್ಕಾಗಲೀ, ಮುಗಿಲಿಗಾಗಲೀ ಯಾವ ಬಣ್ಣವೂ ಇಲ್ಲ, ಅವೆಲ್ಲವೂ ತನ್ನ ಸುತ್ತಲಿನ ಸೂರ್ಯನ ಕೃಪೆಯಿಂದ ಬಣ್ಣವನ್ನು ಪಡೆದವುಗಳು ಎಂಬ ಸೂಕ್ಷ್ಮ ಹೊಳೆದು, ಅದು ಈ ಹೊತ್ತಿನ ತತ್ವವಾಯಿತು!

1 comment:
ನಿಮ್ಮ ತತ್ವಾರ್ಥ ಚೆನ್ನಾಗಿದೆ!
Post a Comment