ಕೊರೋನಾ ಹೇರ್ ಕಟಿಂಗ್ ಪ್ರಹಸನ...
ಹತ್ತು ವರ್ಷಗಳ ಹಿಂದೆ ಪೋಸ್ಟ್ ಡಾಕ್ ಕೆಲಸಕ್ಕೋಸ್ಕರ ಜರ್ಮನಿಯಲ್ಲಿ ಕೆಲವು ತಿಂಗಳು ಶ್ರಮಿಸಬೇಕಾಗಿದ್ದ ಡಾ. ಪೆರುಮಾಳ್ಗೆ ಅಲ್ಲಿನ ಭಾಷಾ ಸಮಸ್ಯೆಗಿಂತ ಹೆಚ್ಚಾಗಿ, ತಲೆ ಕೂದಲು ಕತ್ತರಿಸಿಕೊಳ್ಳುವುದು ಬಹಳ ಕಷ್ಟದ ಕೆಲಸವಾಗಿತ್ತಂತೆ! ಮೊದಲೇ ತಲೆಯಲ್ಲಿ ಕೂದಲು ವಿರಳವಾಗಿದ್ದ ಮನುಷ್ಯ, ಮತ್ತು ತಾನು ಹೇಳಿದ್ದೊಂದು, ಕತ್ತರಿಸುವಾತ/ಕತ್ತರಿಸುವಾಕೆ ಮತ್ತೊಂದನ್ನು ಮಾಡಿ ಬಿಟ್ಟರೆ? ಅದಕ್ಕೆ ತನ್ನಷ್ಟಕ್ಕೆ ತಾನೇ ತನ್ನ ಕೂದಲನ್ನು ಕತ್ತರಿಸುವುದನ್ನು ಕಲಿತುಕೊಂಡಿದ್ದರಂತೆ. ಮೊದ ಮೊದಲು ಕಷ್ಟವಾಗುತ್ತಿತ್ತಾದರೂ ಕೊನೆಗೆ ಅದೇ ಅಭ್ಯಾಸವಾಗಿ, ಈ ಜರ್ಮನಿಯವರ ದೆಸೆಯಿಂದ ಜೀವನ ಪರ್ಯಂತ ತನ್ನ ಕೂದಲನ್ನು ತಾನೇ ಕತ್ತರಿಸುವುದಕ್ಕೆ ಎಷ್ಟು ಬೇಕೋ ಅಷ್ಟು ಸ್ಕಿಲ್ಸ್ ಸಿಕ್ಕಂತಾಗಿತ್ತಂತೆ!
ಈ ಕೊರೋನಾ ವೈರಸ್ ಹೇರಿದ ವರ್ಕಿಂಗ್ ಫ್ರಮ್ ಹೋಮ್ ಕಟ್ಟಳೆಯನ್ನು ಆಚರಿಸುತ್ತಾ ನಾನೂ ಋಷಿ ಮುನಿಗಳ ಹಾಗೆ ಉದ್ದ ಕೂದಲನ್ನೂ ಹಾಗೇ ಗಡ್ಡವನ್ನೂ ಬಿಟ್ಟು ಎಂಟು ವಾರಗಳಾಗಿತ್ತು. ಮತ್ತೆ ನಮ್ಮ ಆಫೀಸಿನಲ್ಲಿ ವಿಡಿಯೋ ಕಾನ್ಫರೆನ್ಸ್ಗಳು ಹೆಚ್ಚಾಗ ತೊಡಗಿ, ನಾನೂ ಕೂದಲು ಕತ್ತರಿಸಿಕೊಳ್ಳೋದು ಅನಿವಾರ್ಯವಾಯಿತು.
ತಲೆಯ ಮೇಲೆ ಕೂದಲು ಕಡಿಮೆ ಇದ್ದವರದ್ದು ಒಂದು ರೀತಿಯ ಸಂಕಟವಾದರೆ, ನನ್ನಂತಹವರಿಗೆ ಹುಲುಸಾಗಿ ಕೂದಲು ಬೆಳೆಯುವುದು ಇನ್ನೊಂದು ರೀತಿಯ ಸಂಕಟ. ಸರಿಯಾಗಿ ಮೂರು ಹೆಚ್ಚೆಂದರೆ ನಾಲ್ಕು ವಾರಗಳಲ್ಲಿ ಕೂದಲು ಕತ್ತರಿಸದಿದ್ದರೆ ತಲೆಯ ಮೇಲೆ ಒಂದು ಕಿರೀಟ ಬಂದ ಹಾಗಿರುತ್ತದೆ. ಹಾಗಿರುವಾಗ, ನಾನೂ ಏಕೆ ಪ್ರಯತ್ನ ಮಾಡಬಾರದು ಎಂದು ಕಳೆದ ಶನಿವಾರ ಮನೆಯಲ್ಲಿದ್ದ ಹತ್ಯಾರಗಳನ್ನೆಲ್ಲ ಒಟ್ಟುಗೂಡಿಸಿಕೊಂಡು ಬಚ್ಚಲು ಮನೆಯಲ್ಲಿ ಉಪಸ್ಥಿತನಾದೆ.
ಇಲ್ಲೇ ಯಡವಟ್ಟಾಗಿದ್ದು, ನೋಡಿ! ನಮ್ಮ ಕೂದಲನ್ನು ನಾವೇ ಕತ್ತರಿಸುವುದು ನಾನು ಅಂದುಕೊಂಡಷ್ಟು ಸುಲಭದ ಮಾತಾಗಿರಲಿಲ್ಲ. ಮೊದಲು ಕಿವಿಯ ಅಕ್ಕ-ಪಕ್ಕ ಒಂದು ಕಡೆಯಿಂದ ಟ್ರಿಮ್ಮರ್ ಹಿಡಿದುಕೊಂಡು ಕತ್ತರಿಸಲು ಶುರುಮಾಡಿದ ನನಗೆ ಸ್ವಲ್ಪ ಸಮಯದ ನಂತರ ಮೆಟ್ಟಿಲು-ಮೆಟ್ಟಿಲಿನ ಹಾಗೆ ಕೂದಲು ಕತ್ತರಿಸಿಕೊಂಡು ಅಲ್ಲಲ್ಲಿ ಸ್ಟೆಪ್ಪುಗಳಾದವು. ಒಮ್ಮೊಮ್ಮೆ ಸ್ವಲ್ಪ ಒತ್ತಿ ತೆಗೆದಿದ್ದಕ್ಕೋ ಏನೋ ಕೆಲವು ಕಡೆ ಬುರುಡೆ ಕಾಣುವಷ್ಟು ಸಣ್ಣಕೂ ಅದರ ಪಕ್ಕದಲ್ಲಿ ಸ್ವಲ್ಪ ಉದ್ದಕೂ ಬಿಟ್ಟುಕೊಂಡು ಹೋಯಿತು. ಸೈಡು ಮತ್ತೆ ಮುಂದೇನೋ ಸರಿ, ಆದರೆ ಹಿಂದಿನ ಭಾಗವನ್ನು ಹೇಗೆ ಕತ್ತರಿಸೋದು? ಅದರಲ್ಲೂ ಮಿರರ್ ಇಮೇಜ್ ನೋಡಿಕೊಂಡು? ಸ್ವಲ್ಪ ಹೊತ್ತಿನ ನಂತರ ಕೈ ಮತ್ತು ಬೆರಳುಗಳೂ ಕೂಡ ನೋವು ಕೊಡತೊಡಗಿದವು. ಕೊನೆಗೆ ಅರ್ಧ ಘಂಟೆಯ ಹೊತ್ತಿಗೆಲ್ಲ ಸುಮಾರು ಒಂದು ಪೌಂಡ್ ಅಷ್ಟು ಕೂದಲು ನೆಲದ ಮೇಲೆ ಕರಿಮುಗಿಲು ಕವುಚಿಕೊಂಡ ಹಾಗೆ ಬಿದ್ದುಕೊಂಡಿತ್ತು!
ಇಷ್ಟು ಹೊತ್ತಿಗಾಗಲೇ ನಮ್ಮ ಮನೆಯವರಿಗೆಲ್ಲ ನಾನು ಹಾಸ್ಯದ ವಸ್ತುವಾಗಿದ್ದೆ. ತಲೆಯ ಹಿಂದಿನ ಭಾಗವಷ್ಟೇ ಏನೂ ಪೂರ್ಣ ತಲೆಯನ್ನೇ ನನ್ನ ಹನ್ನೊಂದು ವರ್ಷದ ಮಗನಿಗೂ ಮತ್ತು ಹೆಂಡತಿಗೂ ವಹಿಸಿ (ಏನು ಬೇಕಾದರೂ ಮಾಡಿ, ಆದರೆ ಇದಕ್ಕಿಂತ ಕೆಟ್ಟದಾಗಿ ಮಾಡಬೇಡಿ), ಆರ್ತನಾಗಿ ಒಪ್ಪಿಸಿಕೊಂಡ ಮೇಲೆ ನನಗೆ ಸಮಾಧಾನವಾಗುವ ಮಟ್ಟವನ್ನು ತಲುಪಿದೆ. ಒಟ್ಟು ನಲವತ್ತೈದು ನಿಮಿಷಗಳ ನಂತರ ತಲೆ ಹಗುರವಾಗಿ ಸ್ನಾನ ಮಾಡಿ ಹೊರಬಂದೆ. ಅದಕ್ಕಿಂತ ಮುಂಚೆ, ಹತ್ತು ನಿಮಿಷ ಇಡೀ ಬಚ್ಚಲುಮನೆಯನ್ನು ವ್ಯಾಕ್ಯೂಮ್ ಕ್ಲೀನರ್ನಿಂದ ಸ್ವಚ್ಛ ಮಾಡಿದ್ದೂ ಸಹ ತುಸು ಹೆಚ್ಚೇ ಕೆಲಸವೆನಿಸಿತು.
ಸ್ನಾನ ಮಾಡಿ ಎಂದಿನಂತೆ ತಲೆ ಬಾಚಿ ನೋಡಿದರೆ, ಕೆಲವು ಕಡೆ ಕಡಿಮೆ, ಕೆಲವು ಕಡೆ ಹೆಚ್ಚು ಕೂದಲು ಇದ್ದ ನಾನು ಎಲ್ಲೋ ಇಲಿಗಳು ಭತ್ತದ ಚೀಲವನ್ನು ತಿಂದು ಹಾಕಿ ಧ್ವಂಸಮಾಡಿದ ವಿಷಯವನ್ನು ನೆನಪಿಗೆ ತಂದವು. ಮೊದಲೆಲ್ಲ ಸ್ಟೆಪ್ಪುಗಳಾಗಿ ಕೆಟ್ಟದಾಗಿ ಕಾಣುತ್ತಿದ್ದ ಬದಿಯ ಕೂದಲು, ಈಗ ಯಾವುದೋ ಪುರಾತನ ದೇವಸ್ಥಾನದ ಅವಶೇಷದಂತೆ ಕಂಡುಬಂದು, ನಗುಬಂದಿತು. ಅಲ್ಲದೇ, ಒಂದು ಬದಿಯ ಕೋನದಲ್ಲಿ ನೋಡಿದಾಗ ನನ್ನ ತಲೆ, ಮಾಗಿದ ಉತ್ತುತ್ತಿಯಂತೆ ಕಂಡುಬಂತು!
ಆದರೆ ಕೊರೋನಾ ಮಹಿಮೆ ಇಲ್ಲಿಗೇ ಮುಗಿಯಲಿಲ್ಲ... ಹೇರ್ ಕಟ್ ಕೆಟ್ಟದಾಗಿರಲಿ, ಬಿಡಲಿ... ಇನ್ನೆರಡು ವಾರಗಳಲ್ಲಿ ಮತ್ತೆ ಪ್ರಯತ್ನಿಸುವ ಛಲವಂತೂ ಹುಟ್ಟಿದೆ! ದಿನೇದಿನೇ ನೋಡುವ ಮನೆಮಂದಿಗೆ ಇದೀಗ ಕೆಟ್ಟ ಹೇರ್ ಕಟ್ಟೂ ಸಹ ಒಗ್ಗಿ ಹೋಗಿ ಅದೇ ಒಂದು ಸ್ಟೈಲ್ ಆಗಿದೆ! ಇನ್ನೆರಡು ವಾರಗಳಲ್ಲಿ ಒಂದಿಷ್ಟು ಒಳ್ಳೆಯ ಟ್ರಿಮ್ಮರ್ ಮೇಲೆ ಹಣ ಹೂಡಿದರೆ, ಜೀವಮಾನ ಪರ್ಯಂತ ಹೊರಗೆ ಕೂದಲು ಕತ್ತರಿಸುವ ಪ್ರಸಂಗ ಬರದೆಯೂ ಇರಬಹುದು! ಯಾರು ಬಲ್ಲರು?

1 comment:
ಮರಳಿ ಮರಳಿ ಯತ್ನಿಸಿರಿ. ಜಯ ನಿಮ್ಮದೇ!
Post a Comment