ಏರ್‌ಪ್ಲೇನುಗಳು ಹಾರಲು ಅದು ಹೇಗೆ ಸಾಧ್ಯ?
ನಾನು ಮೊಟ್ಟ ಮೊದಲನೇ ಸಾರಿ ಬಾಂಬೆ ಏರ್‌ಪೋರ್ಟ್‌ನಲ್ಲಿ ದೊಡ್ಡ ಜೆಂಬೋ ಜೆಟ್ ವಿಮಾನವನ್ನು ನೋಡಿದಾಗ, ಏರ್‌ಪೋರ್ಟಿನಲ್ಲಿಯೇ ನನ್ನ ಸಹ ಪ್ರಯಾಣಿಗರೊಂದಿಗೆ ಇದು ಅಷ್ಟು ವೇಗವಾಗಿ ಎತ್ತರದಲ್ಲಿ ಹಾರಾಡಲು ಹೇಗೆ ಸಾಧ್ಯ? ಏರೋಡೈನಮಿಕ್ಕು ಅಂತೆಲ್ಲಾ ಅವರೇನೇನೋ ಸಮಾಧಾನ ಹೇಳಿದರೂ, ನನಗೆ ಅದರ ಒಳಗೆ ಕುಳಿತು ಅದು ವೇಗವಾಗಿ ಓಡಿ, ಅಂತರದಲ್ಲಿ ತೇಲತೊಡಗಿದಾಗಲೇ ನನಗೆ ಹೊರಗೆ ನೋಡಿದಾಗ ನಂಬಬೇಕೋ ಬಿಡಬೇಕೋ ಗೊತ್ತಾಗಿರಲಿಲ್ಲ!
ನಮ್ಮ ಸೈನ್ಸ್, ಫಿಸಿಕ್ಸ್ ತರಗತಿಯಲ್ಲಿ ಮನಸಿಟ್ಟು ಕೇಳುತ್ತಿದ್ದೆವೋ ಇಲ್ಲವೋ ಗೊತ್ತಿಲ್ಲ, ಆಗೆಲ್ಲ ಗಾಳಿಯಿಂದ ಪೇಪರ್ ಎದ್ದು ಹಾರಾಡುವುದೇ ಏರೋ ಡೈನಮಿಕ್ ಫೋರ್ಸ್ ಎಂದು ನಂಬಿಕೊಂಡ ದಿನಗಳು. ಅಂತಹ ಹಳ್ಳಿಯ ಎಡಬಿಡಂಗಿ ಜಗಮೊಂಡನನ್ನು ತೆಗೆದುಕೊಂಡು ಏಕ್‌ದಂ ಮೊಟ್ಟ ಮೊದಲನೇ ಪ್ರಯಾಣವೇ ಇಂಟರ್‌ನ್ಯಾಷನಲ್ ಪ್ರಯಾಣವಾಗಿರುವಂತಾದಾಗ ಯಾರು ತಾನೆ ಹೇಗೆ ನಂಬ ಬಲ್ಲರು?
***
ಆಗಿನ ಎಂಭತ್ತರ ದಶಕದಲ್ಲಿ ಏರ್‌ಪ್ಲೇನಿನ ಸಹವಾಸ ಮಾಡುವವರು, ಮಾಡುತ್ತಿದ್ದವರು ಬಹಳ ಧನಿಕರಾಗಿರುತ್ತಿದ್ದರು. ನಮ್ಮೂರಿನ ಬಸ್ಸು-ಲಾರಿಗಳನ್ನು ಮತ್ತು ಅಪರೂಪಕ್ಕೊಮ್ಮೆ ಕಾರುಗಳನ್ನು ರಸ್ತೆ ಮೇಲೆ ಓಡುವುದನ್ನ ನೋಡುತ್ತಿದ್ದ ನಾವು ಅನಂತರ ಅಂತರ ರಾಜ್ಯ ಪ್ರಯಾಣಕ್ಕೆ ರೈಲಿನಲ್ಲಿ ಹೋಗಿದ್ದನ್ನು ಬಿಟ್ಟರೆ, ಉಳಿದೆಲ್ಲ ರೀತಿಯ ಪ್ರಯಾಣ ಅಂದರೆ ದೊಡ್ಡ ಹಡಗು ಅಥವಾ ವಿಮಾನದಲ್ಲಿ ಓಡಾಡುವುದು ಕನಸೇ ಆಗಿತ್ತು. ಅಪರೂಪಕ್ಕೊಮ್ಮೆ, ರಾತ್ರಿ ಎಲ್ಲಾದರೂ ಓಡಾಡುತ್ತಿದ್ದಾಗ ನಿರಾಳವಾದ ಆಕಾಶವನ್ನು ನೋಡುತ್ತಿದ್ದರೆ, ಅವುಗಳ ಸದ್ದೂ ಸಹ ಕೇಳದಷ್ಟು ಅನತಿ ದೂರದಲ್ಲಿ, ಮಿಣಿಮಿಣಿ ದೀಪ ಹಾಕಿಕೊಂಡು ಹಾರುತ್ತಿರುವ ವಿಮಾನಗಳು ನಮಗೆ ಗಗನ ಚುಕ್ಕಿಗಳೇ ಆಗಿದ್ದವು. ಅಂತಹ ಒಂದು "ವಿಮಾನ"ದ ಕಲ್ಪನೆ ಬಹಳ ವಿಚಿತ್ರವಾಗಿರುತ್ತದೆ: ಅವುಗಳ ಕಿಟಕಿ-ಬಾಗಿಲುಗಳು ಹೀಗಿರಬಹುದು/ಹಾಗಿರಬಹುದು! ಅವುಗಳಲ್ಲಿ ಗಗನಸಖಿಯರು ಎಷ್ಟೆಲ್ಲ ಸುಂದರಿಯರಿರುತ್ತಾರೆ! ಪ್ರಯಾಣಿಕರೆಲ್ಲ ಒಳ್ಳೊಳ್ಳೆಯ ಉಡುಪುಗಳನ್ನು ಧರಿಸಿಕೊಂಡೋ, ಸೂಟು ಬೂಟಿನಲ್ಲಿರುತ್ತಾರೆ! ಇತ್ಯಾದಿ, ಇತ್ಯಾದಿ... ಇದು ನಿಜವಾಗಿಯೂ "ಮೇಲ್" ದರ್ಜೆಯ ಪ್ರಯಾಣದ ವಿಧಿ ವಿಧಾನ ಎಂದು ನನಗೆ ಗ್ಯಾರಂಟಿಯಾಗಿತ್ತು. ಆದರೆ, ನನ್ನ ಮೊದಲ ಅನುಭವದಲ್ಲಿಯೇ, ಈ ಎಲ್ಲ ಅನುಭೂತಿಗಳು ಸಂಪೂರ್ಣ ಯಾವತ್ತಿಗೋ ನಶಿಸಿಹೋದವು!
ವಿಮಾನಗಳ ಕಿಟಕಿಗಳು ಬಹಳ ಚಿಕ್ಕವು. ಬಸ್ಸು ರೈಲಿನ ಕಿಟಕಿಗಳ ಹಾಗೆ ಅವುಗಳಲ್ಲಿ ಓಪನ್/ಕ್ಲೋಸ್ ಎಂದು ನೆಗೋಟೀಯೇಟ್ ಮಾಡೋ ಅಂತದ್ದು ಏನೂ ಇರಲ್ಲ. ಬರೀ ಅವುಗಳ ಕವರನ್ನು ಮುಚ್ಚಬೇಕು, ಇಲ್ಲ ತೆರೆದಿರಬೇಕು, ಅಷ್ಟೇ. ಇನ್ನು ಈಗಿನ ಏರ್‌ಪ್ಲೇನುಗಳ ಸೀಟುಗಳೋ ಆ ದೇವರಿಗೇ ಪ್ರೀತಿ. ನಮ್ಮೂರಿನ ಸೆಮಿ ಲಕ್ಸುರಿ ಬಸ್ಸುಗಳ ಸೀಟುಗಳು ಇದಕ್ಕಿಂತ ಚೆನ್ನಾಗಿದ್ದವು. ಅವರು ಕೊಡೋ ಊಟ, ಅದನ್ನು ನಾವು ಸಮಯವಲ್ಲದ ಸಮಯದಲ್ಲಿ ಲಘುಬಗೆಯಿಂದ ತಿಂದಂತೆ ಮಾಡಿ, ಪೇಪರಿಗೆ ಕೈ ಒರೆಸಿ ದೂರವಿಡುವುದು! ಅಲ್ಲದೇ ಸಹ ಪ್ರಯಾಣಿಕರ್‍ಯಾರೂ ಸೂಟು-ಬೂಟಿನಲ್ಲಿ ಇದ್ದಂತಿಲ್ಲ... ಯಾವುದೋ ತೇಪೆ ಹಾಕಿದ ಜೀನ್ಸ್ ಅನ್ನು ಹಾಕಿಕೊಂಡವರೂ ಇದ್ದರೂ. ಒಮ್ಮೆ ಕುಳಿತುಕೊಂಡರೆ ಗಂಟೆಗಟ್ಟಲೆ ಕುಳಿತೇ ಇರಬೇಕು, ಅಲ್ಲಿಲ್ಲಿ ಓಡಾಡುವಂತಿಲ್ಲ, ಆಕಡೆ ತಿರುಗುವಂತಿಲ್ಲ, ಈ ಕಡೆ ತಿರುಗುವಂತಿಲ್ಲ. ಆಮೇಲೆ ಏಕತಾನತೆಯ ಒಂದೇ ಒಂದು ಸ್ವರದ ಕರ್ಕಶ ನಾದ... ಜೊತೆಯಲ್ಲಿ ಬೇರೆ ಟೊಂಕಕ್ಕೆ ಸೀಟುಬೆಲ್ಟ್ ಅನ್ನು ಕಟ್ಟಿಕೊಂಡಿರಬೇಕು. ಇನ್ನು ಗಗನ ಸಖಿಯರೆಲ್ಲ "ಕ್ಯಾಬಿನ್ ಕ್ರೂ"ಗಳಾಗಿದ್ದರು, ಅವರೂ ಸಹ ನಮ್ಮಂತೆಯೇ ಸಹಜವಾಗಿ ಕಂಡುಬಂದರು. ಅಬ್ಬಾ, ಮೊಟ್ಟ ಮೊದಲ ಬಾರಿ ಯೂರೋಪನ್ನು ದಾಟಿ ಅಮೇರಿಕಕ್ಕೆ ಬರುವುದೆಂದರೆ, ಪ್ರಾಣವನ್ನು ಕೈಯಲ್ಲಿ ಜೋಪಾನವಾಗಿ ಹಿಡಿದುಕೊಂಡು ಬಂದಂತಾಗಿತ್ತು. ಆದರೂ ಏನೆಲ್ಲ ಕನಸುಗಳು, ಹಾಗೆ-ಹೀಗೆ ಎನ್ನುವ ಮಾತುಗಳು... ನಮ್ಮ ಸೂಟ್‌ಕೇಸ್‌ಗಳಲ್ಲಿ ಇನ್ನೆಂದಿಗೂ ಸಾಕಾಗುವಷ್ಟು ಮಸಾಲೆ ಪದಾರ್ಥಗಳು, ಚಟ್ಣಿಪುಡಿಗಳು... (ನಮ್ಮ ಜೊತೆಗೆ ಬಂದ ಕುಮರೇಸನ್ ಒಂದು ಮೂಟೆ ಅಕ್ಕಿಯನ್ನೂ ತಂದಿದ್ದ!)... ಒಂದು ರೀತಿ ಭಾರತವನ್ನು ಬಿಟ್ಟು ಅಮೇರಿಕಕ್ಕೆ ಬರುವಾಗ ಒಂದು ರೀತಿಯ ನೋವು ಆಗಿದ್ದು ಸಹಜ... ಆದರೆ, ನಾವು ಬಂದದ್ದು H1B ವೀಸಾದಲ್ಲಿ, ಕೇವಲ ಮೂರೇ ಮೂರು ವರ್ಷಗಳ ತರುವಾಯ ವಾಪಾಸು ಹೋಗುತ್ತೇವಲ್ಲ, ಮತ್ತೇನು ತಲೆಬಿಸಿ!
***
ಕೆಲವೊಮ್ಮೆ ಹೀಗೆಯೇ ಆಗುತ್ತದೆ... ನಾವು ಊಹಿಸಿಕೊಂಡ ತತ್ವಗಳು ನಮ್ಮ ಕಲ್ಪನೆಯನ್ನು ಮೀರಿ ಬೆಳೆಯುತ್ತವೆ. ಆದರೆ, ಆ ಬೆಳೆದ ಊಹೆಗಳು ನಮ್ಮ ಬುದ್ಧಿಗೆ ಮೀರಿ ಪ್ರಬುದ್ಧವಾಗಿರುತ್ತವೆ. ಒಂದು ವಿಮಾನದ ಅಗಲ-ಉದ್ದ, ಇಷ್ಟಿಷ್ಟೇ ಇರಬೇಕು ಎಂದು ಇಂಜಿನಿಯರುಗಳು ಡಿಸೈನ್ ಮಾಡಿರುತ್ತಾರಲ್ಲ? 25 ಕೆಜಿ. ಸೂಟ್‌ಕೇಸ್ ಒಂದು ಗಗನದಲ್ಲಿ ಹಾರಾಡಲು ಸಾಧ್ಯವೇ? ಇಲ್ಲ. ಆದರೆ, ಅದನ್ನು 78,000 ಕೆಜಿ, ಜೆಂಬೋ ಜೆಟ್‌ನಲ್ಲಿ ಇಟ್ಟು ಅದನ್ನು ಗಂಟೆಗೆ 920 ಕಿಲೋಮೀಟರ್ ವೇಗದಲ್ಲಿ ನೆಲದಿಂದ 11 ಕಿಲೋಮೀಟರ್ ಎತ್ತರದಲ್ಲಿ ಹಾರಿಸಿ ನೋಡಿ ಅಂತಹ ವಿಮಾನ ಬರೀ ಒಂದು ಸೂಟ್‌ಕೇಸ್ ಮಾತ್ರ ಏಕೆ 250 ಟನ್ ಭಾರವನ್ನೂ ಎತ್ತಿಕೊಂಡು ಹೋಗಬಲ್ಲದು! ಇದನ್ನು ನಾವು ನಮ್ಮ ಹುಲುಮಾನವರ ಮನದಲ್ಲಿ ಹೇಗೆ ಊಹಿಸಲು ಸಾಧ್ಯವಿಲ್ಲವೋ ಅದೇ ರೀತಿ, ಪ್ರಪಂಚದ ಅನೇಕಾನೇಕ ಸೂಕ್ಷ್ಮಗಳು ನಮ್ಮನ್ನು ಮೀರಿದವಾಗಿರುತ್ತವೆ. ಇಂತಹ ವಿಸ್ಮಯಗಳನ್ನು ನೋಡಿ, ಸವೆದು, ತನು-ಮನ ತಣಿಸಿಕೊಳ್ಳಲು ಎಷ್ಟು ಆಲೋಚಿಸದರೂ ಸಾಲದು ಎನ್ನುವುದು ಈ ಹೊತ್ತಿನ ತತ್ವವಾಗುತ್ತದೆ.
ನಮ್ಮ ಸುತ್ತಲಿನ ಪ್ರತಿಯೊಂದರಲ್ಲೂ ಈ ರೀತಿಯ ವಿಶ್ವರೂಪ ದರ್ಶದನ ಅವಕಾಶಗಳಿವೆ... ಅವುಗಳನ್ನು ನೋಡಲು ಕಣ್ಣುಗಳಿರಬೇಕಷ್ಟೆ!

No comments:
Post a Comment