ನಮ್ಮೊಳಗಿನ ಶತ್ರು
ನಮ್ಮೊಳಗಿನ ಶತ್ರು (...why it is not easy to boycott Chinese products)
ಭಾರತದ ಸ್ವಾತಂತ್ರ್ಯ ಸಂಗ್ರಾಮದ ಕಾಲದಿಂದಲೂ ಇಂದಿನವರೆಗೆ
"ಸ್ವದೇಶೀ ಬಳಕೆ"ಯನ್ನು ಅನುಮೋದಿಸಲಾಗುತ್ತಿದೆ. "ಸ್ವದೇಶಿ" ಸ್ವಾಯುತ್ತತೆ, ಸ್ವಾವಲಂಬನೆ
ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿರದೇ ಇತ್ತೀಚೆಗೆ ಅನೇಕ ರಾಷ್ಟ್ರಗಳು ಈ ನಿಟ್ಟಿನಲ್ಲಿ ಯೋಚಿಸುವುದನ್ನು
ಕಾಣಬಹುದು. ಹೊರಗಿನವರು ಬಂದು ನಮ್ಮ jobs ಗಳನ್ನು ಕಸಿದುಕೊಳ್ಳುತ್ತಾರೆ ಎನ್ನುವುದರಿಂದ ಹಿಡಿದು, Make America Great Again! ಎನ್ನುವ
ಕ್ಯಾಂಪೇನಿನ ಮೂಲದಲ್ಲಿ ಸ್ವದೇಶೀ ಸ್ವಾವಲಂಬನೆಯ ಅಗತ್ಯದ ಬಗ್ಗೆ ಚಿಂತನೆ ಎದ್ದು
ಕಾಣುತ್ತದೆ. ಯಾರು ಸ್ವದೇಶಿಗಳು, ಯಾರು
ವಿದೇಶಿಗಳು, ಯಾವುದು "ನಮ್ಮ" ದೇಶದಲ್ಲೇ ಉತ್ಪಾದಿತವಾದದ್ದು, ಯಾವುದು ಹೊರಗಿನಿಂದ
ಬಂದಿದ್ದು ಎಂಬುದನ್ನು ಕುರಿತು ಯೋಚಿಸಿದಾಗ, ಹೊರಗಿನವರನ್ನು "ಶತ್ರು"ಗಳು ಎಂದು
ಕಂಡುಕೊಂಡಾಗ ಆ ಶತ್ರುಗಳು ನಮ್ಮೊಳಗೆ ಎಷ್ಟರ ಮಟ್ಟಿಗೆ ವಿಲೀನವಾಗಿಬಿಟ್ಟಿವೆಯೆಂದರೆ ಅದನ್ನು
ಬೇರ್ಪಡಿಸುವುದೂ ಅಷ್ಟೇ ಕ್ಲಿಷ್ಟಕರವಾಗಿದೆ.
***
ನಾಲ್ಕು ಟ್ರಿಲಿಯನ್ ಡಾಲರಿಗಿಂತಲೂ ಹೆಚ್ಚು ವಸ್ತುಗಳನ್ನು ಉತ್ಪಾದಿಸುತ್ತಿರುವ ಚೀನಾ, ಇಡೀ ಪ್ರಪಂಚದ ಎಲ್ಲ ದೇಶಗಳಿಗೂ ತನ್ನ ವಸ್ತುಗಳನ್ನು ರವಾನಿಸುವ ಸಾಮರ್ಥ್ಯವನ್ನು ಹೊಂದಿದ್ದು, ಎಲ್ಲ ರಾಷ್ಟ್ರಗಳಿಗಿಂತ ಅಗ್ರಗಣ್ಯ ಸ್ಥಾನದಲ್ಲಿದೆ. ಚೀನಾ ದೇಶವನ್ನು ವಿಶ್ವದ ಮ್ಯಾನುಫ್ಯಾಕ್ಚರಿಂಗ್ ದೇಶವೆಂದು ಸುಲಭವಾಗಿ ಕರೆಯಬಹುದು. USA ಮುಖ್ಯವಾಗಿ ಯುದ್ಧ ಸಾಮಗ್ರಿಗಳ ತಯಾರಿಕೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ 2.3 ಟ್ರಿಲಿಯನ್ ಡಾಲರ್ ಉತ್ಪನ್ನದಿಂದ ನಂತರದ ಸ್ಥಾನದಲ್ಲಿ ನಿಲ್ಲುತ್ತದೆ. ಒಂದು ಟ್ರಿಲಿಯನ್ ಉತ್ಪನ್ನದಿಂದ ಜಪಾನ್ ಮೂರನೇ ಸ್ಥಾನದಲ್ಲಿದ್ದರೆ ಕೇವಲ 412 ಬಿಲಿಯನ್ ಡಾಲರ್ ಉತ್ಪನ್ನದಿಂದ ಭಾರತ ದಕ್ಷಿಣ ಕೊರಿಯಾಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ತನ್ನನ್ನು ತಾನು ಕಂಡುಕೊಂಡಿದೆ.
ಇದು ಕೇವಲ ಭೌತಿಕ ವಸ್ತುಗಳ ಉತ್ಪಾದನೆ ಮತ್ತು ಆಮದು-ರಫ್ತಿನ
ವಿಚಾರವಾಗಿರಬಹುದು. ಇದರ ಜೊತೆಯಲ್ಲಿ
ತಂತ್ರಜ್ಞಾನದ ಕೊಡು ತೆಗೆದುಕೊಳ್ಳುವಿಕೆ ಮತ್ತು ಬಳಸುವಿಕೆಯೂ ತಳುಕು ಹಾಕಿಕೊಂಡಿದೆ. ಉದಾಹರಣೆಗೆ, ಭಾರತದಲ್ಲಿ ಜನರು ಬಳಸುವ ಮೈಕ್ರೋಸಾಫ್ಟ್
ಲೈಸನ್ಸ್ ಇರುವ ಪ್ರಾಡಕ್ಟ್‌ಗಳನ್ನು USA ಲೆಕ್ಕಕ್ಕೆ ಹಾಕಿಕೊಳ್ಳೋಣ.
ಅದೇ ರೀತಿ Boeing, Apple, Amazon ಮೊದಲಾದ ಕಂಪನಿಗಳ ಉತ್ಪನ್ನದ ಬಳಕೆಯ "ಕ್ರೆಡಿಟ್" ಅನ್ನು
ಆಯಾ ಕಂಪನಿಗಳು ಹುಟ್ಟಿದ ದೇಶಗಳಿಗೆ ಕೊಡೋಣ.
ಹೀಗೆ ಮಾಡುವುದರಿಂದ ಪ್ರತಿಯೊಂದು ರಾಷ್ಟ್ರವೂ ಇನ್ನೊಂದು ರಾಷ್ಟ್ರದ ಉತ್ಪನ್ನವನ್ನು (product) ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಹೇಗೆ ಬಳಸುತ್ತಿದೆ ಎಂದು
ಗೊತ್ತಾಗುತ್ತದೆ. ಮೇಲ್ಮಟ್ಟದಲ್ಲಿ, ಇದು ಅಷ್ಟೊಂದು ಸುಲಭವಾಗಿ ಗೋಚರಿಸಿದರೂ, ಆಳದಲ್ಲಿ ಆಯಾ
ಕಂಪನಿಗೆ ಸೇರಿಕೊಂಡ ಅನೇಕ ಎಂಟಿಟಿಗಳು ಅದೇ ಕಂಪನಿಯ ಹೆಸರಿನ subsidiary ಆಗಿ ಹಲವಾರು ದೇಶಗಳಲ್ಲಿ
ನೋಂದಾವಣೆ ಮಾಡಿಕೊಂಡು ಅಲ್ಲಿಯ ಟ್ಯಾಕ್ಸ್ ಅನ್ನು ಕೊಡುವುದು ಅಥವಾ ಕೊಡದಿರುವುದು - ಟ್ಯಾಕ್ಸ್ ಸಂಬಂಧಿ
ಅನುಕೂಲವಾಗಿ - ಎದ್ದು ಕಾಣುತ್ತದೆ. ಆದ್ದರಿಂದ, ಒಂದು
ಕಂಪನಿಯ ವಾರಸುದಾರಿಕೆ ಮತ್ತು ಅದಕ್ಕೆ ಹೊಂದಿಕೊಳ್ಳುವಂತೆ ಒಂದು ದೇಶದ ಅಸ್ತಿತ್ವವನ್ನು ಹೀಗೇ ಇದೆ
ಎಂದು ಅಷ್ಟು ಸುಲಭವಾಗಿ ವ್ಯಾಖ್ಯಾನಿಸಲಾಗದು.
ಆದರೆ, ಇದೇ ಸೀಳು ನೋಟವನ್ನು ಇನ್ನೂ focus ಮಾಡಿ ನೋಡಿದಾಗ ಹಲವಾರು ಗೊಂದಲ ಅಥವಾ ಜಟಿಲತೆಯ (complications) ಅರಿವಾಗುತ್ತದೆ. ಯಾವುದೇ ಕಂಪನಿಯ ನಿಜವಾದ ಮಾಲೀಕ/ಮಾಲೀಕರು ಎಂದರೆ ಆಯಾ
ಕಂಪನಿಯ ಶೇರ್ ಹೋಲ್ಡರ್‌ಗಳು. ಅಂತೆಯೇ ಒಂದು
ಕಂಪನಿಯ ಶೇರುಗಳನ್ನು ಓಪನ್ ಮಾರುಕಟ್ಟೆಯಲ್ಲಿ ಯಾರು ಬೇಕಾದರೂ ಖರೀದಿಸಬಹುದು. ನಾವು ಅಮೇರಿಕದಲ್ಲಿ ಕುಳಿತು ಚೀನಾ ದೇಶದ ಕಂಪನಿಯ
ಎಕ್ಸ್‌ಚೇಂಜ್‌ನಲ್ಲಿ ಬಿಕರಿಯಾಗುವ ಕಂಪನಿಯ ಶೇರುಗಳನ್ನು ADR (American Depository Receipt) ವ್ಯಾಪ್ತಿಯಲ್ಲಿ ಖರೀದಿಸುತ್ತೇವೆ. ಅಂತೆಯೇ ಚೀನಾದವರೂ ಸಹ ಬೇರೆ ದೇಶದ ಕಂಪನಿಗಳ
ಶೇರುಗಳನ್ನು ಖರೀದಿಸುತ್ತಾರೆ.
ಇದೇ ವಿಶ್ಲೇಷಣೆಯನ್ನು ಇನ್ನೂ ತೀಕ್ಷ್ಣವಾಗಿಸಿದರೆ, ಒಂದು ದೇಶದ
ಸರ್ಕಾರ ಅಥವಾ ಸರ್ವಾಧಿಕಾರಿ ರಾಜಸತ್ತೆ ಮತ್ತೊಂದು ದೇಶದ ಹೂಡಿಕೆಯ(ways to invest)
ಮಾರ್ಗಗಳನ್ನು treasury, bonds, stocks, derivatives, futures, real
estate, fixed assets ಹೀಗೆ ಇನ್ನೂ ಅನೇಕಾನೇಕ
ಸಾಧನಗಳಲ್ಲಿ ತೊಡಗಿಸಬಹುದು. ಉದಾಹರಣೆಗೆ, ಚೀನಾ
ದೇಶದ ಪ್ರಜೆ, ತನ್ನ ಕಂಪನಿಯ ಮುಖೇನ ನ್ಯೂ ಯಾರ್ಕ್‌ನಲ್ಲಿನ ತುಂಡು ಭೂಮಿಯನ್ನು
ಖರೀದಿಸಬಹುದು. ಅದೇ ರೀತಿ, ಚೀನಾ ದೇಶದ ಸರ್ಕಾರ
ತನ್ನ ಹೂಡಿಕೆಗಳನ್ನು (for hedging or for growth), ಅಮೇರಿಕದ treasury billsಗಳ ಮೇಲೆ ಮಾಡಬಹುದು.
ಹೀಗೆ ಯೋಚಿಸುತ್ತಾ ಹೋದಾಗಲೆಲ್ಲಾ ಯಾರು ಯಾವುದನ್ನು ಖರೀದಿಸುತ್ತಾರೆ, ಬಿಡುತ್ತಾರೆ,
ಯಾರಿಗೆ ಎಷ್ಟು ಪರ್ಸೆಂಟ್ ಯಾವುದರ ಮೇಲೆ ownership ಇದೆ ಎಂಬುದನ್ನು ಯೋಚಿಸಿದಂತೆ ನಾವು ನಿಜವಾಗಿಯೂ ವಿಶ್ವ ಮಾನವರಾಗಿ
ಕಂಡುಬರುತ್ತೇವೆ!

***

***
ಹೀಗೆ, ಧೀರ್ಘವಾಗಿ ಯೋಚಿಸಿದಂತೆಲ್ಲ, ಪ್ರಶ್ನೆಗಳ ಮೇಲೆ ಪ್ರಶ್ನೆಗಳು
ಹುಟ್ಟುತ್ತವೆ. ನಮ್ಮ
"ದೇಶಿ-ಸ್ವದೇಶಿ" ಎನ್ನುವ ನಿಲುವು ಒಂದು ರೀತಿಯ ಭಾವನಾತ್ಮಕ ಉದ್ವಿಗ್ನತೆಯಾಗಿ
ಗೋಚರಿಸುತ್ತದೆಯೇ ವಿನಾ ಅರ್ಥಶಾಸ್ತ್ರದ ಯಾವುದೋ ಪುಸ್ತಕದ ಅಧ್ಯಾಯದಂತಲ್ಲ. ನಮಗೆ ಎದುರಾಗಿರುವ ಶತ್ರು ಒಂದು ರೀತಿಯ ಕೊರೋನಾ
ವೈರಸ್ಸಿನ ಹಾಗೆ ಗಾಳಿಯಲ್ಲಿ ವ್ಯಾಪಿಸಿಕೊಂಡು ತನ್ನ ಕಬಂಧ ಬಾಹುಗಳನ್ನು ದಿನೇದಿನೇ
ಹರಡಿಕೊಳ್ಳುತ್ತಿರುವಾಗ ಈ ಎಲ್ಲ ವಿದೇಶಿ ಬಂಡವಾಳವನ್ನು "ಸ್ವದೇಶಿ ಬಳಸಿ" ಎನ್ನುವ ಒಂದು
ಹೇಳಿಕೆಯನ್ನು ಹೇಳಿ ಪರಿಹರಿಸುತ್ತೇವೆ ಎನ್ನುವುದು ಹಾಸ್ಯಾಸ್ಪದವಾಗುತ್ತದೆ. ಇಡೀ ಉತ್ತರ ಅಮೇರಿಕವನ್ನೇ ಅಲುಗಾಡಿಸುವಷ್ಟು
ಸಾಮರ್ಥ್ಯವನ್ನು ಹೊಂದಿರುವ ಚೀನಾ ದೇಶದವರನ್ನು ನಮ್ಮ ದೇಶದ ಎಮೋಷನಲ್ ಮುತ್ಸದ್ದಿಗಳು ಇನ್ನಾದರೂ
ಹಗುರವಾಗಿ ತೆಗೆದುಕೊಳ್ಳದಿದ್ದರೆ ಸಾಕು!
